ಸಿಂದಗಿ, ಹಾನಗಲ್ ಉಪ ಚುನಾವಣೆ ಮತದಾನ: ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣ
ಕರ್ನಾಟಕ, ಅಕ್ಟೋಬರ್ 30: ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಗೆ ಕಾರಣವಾಗಿದ್ದ ವಿಜಯಪುರ ಜಿಲ್ಲೆಯ ಸಿಂದಗಿ ಮತ್ತು ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.
ಮತದಾರರು ಮತದಾನ ಕೇಂದ್ರಗಳತ್ತ ಆಗಮಿಸುತ್ತಿದ್ದು, ತಮ್ಮ ಮತದಾನ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಅಧಿಕಾರರೂಢ ಬಿಜೆಪಿ ಸೇರಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೂರು ಪಕ್ಷಗಳಿಗೂ ಈ ಉಪ ಕದನ ಪ್ರತಿಷ್ಠೆಯಾಗಿ ಪರಿಣಮಿಸಿದೆ.
ಮತದಾರರು ಎಲ್ಲ ಅಭ್ಯರ್ಥಿಗಳ ಹಣೆ ಬರಹವನ್ನು ಇವಿಎಂನಲ್ಲಿ ದಾಖಲಿಸುತ್ತಿದ್ದಾರೆ. ಸಿಂದಗಿಯಲ್ಲಿ ಕಾಂಗ್ರೆಸ್‌ನಿಂದ ಅಶೋಕ್ ಮನಗೂಳಿ, ಬಿಜೆಪಿಯಿಂದ ರಮೇಶ್ ಭೂಸನೂರು ಮತ್ತು ಜೆಡಿಎಸ್‌ನಿಂದ ನಾಜೀಯಾ ಅಂಗಡಿ ಕಣದಲ್ಲಿದ್ದಾರೆ.

ಇತ್ತ ಹಾನಗಲ್ ಉಪ ಚುನಾವಣೆ ಕಣದಲ್ಲಿ ಕಾಂಗ್ರೆಸ್‌ನಿಂದ ಶ್ರೀನಿವಾಸ್. ವಿ. ಮಾನೆ, ಬಿಜೆಪಿಯಿಂದ ಶಿವರಾಜ ಸಜ್ಜನರ್ ಮತ್ತು ಜೆಡಿಎಸ್‌ನಿಂದ ನಿಯಾಜ್ ಶೇಖ್ ಸ್ಪರ್ಧೆಯಲ್ಲಿದ್ದಾರೆ.
ಸಿಂದಗಿ ಕ್ಷೇತ್ರದ ಮಾಹಿತಿ
ಶನಿವಾರ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಉಪ ಚುನಾವಣೆಯ ಮತದಾನ ನಡೆಯಲಿದೆ. ಸಿಂದಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಕೇಂದ್ರಗಳು ಆರಂಭಗೊಂಡಿದ್ದು, ಸಿಬ್ಬಂದಿ ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದ್ದಾರೆ. ಸಿಂದಗಿ ಚುನಾವಣೆಯಲ್ಲಿ ಒಟ್ಟು 2,34,584 ಮತದಾರರು ಮತ ಚಲಾಯಿಸಲಿದ್ದಾರೆ. ಒಟ್ಟು ಆರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.
1,20,844 ಪುರುಷ ಮತದಾರರು, 1,13,561 ಮಹಿಳಾ ಮತದಾರರು, 32 ಇತರೆ, 147 ಸರ್ವಿಸ್ ವೋಟರ್‌ಗಳು ಮತ ಚಲಾಯಿಸಲಿದ್ದಾರೆ. 271 ಮತದಾನ ಕೇಂದ್ರಗಳನ್ನು ಹಾಗೂ 26 ಆಕ್ಸಿಲರಿ ಮತದಾನ ಕೇಂದ್ರಗಳು ಸೇರಿದಂತೆ ಒಟ್ಟು 297 ಮತದಾನ ಕೇಂದ್ರಗಳ ಸ್ಥಾಪನೆ ಮಾಡಲಾಗಿದೆ.
7 ಚೆಕ್‌ಪೋಸ್ಟ್‌ಗಳು ಕಾರ್ಯನಿರ್ವಹಿಸುತ್ತಿದ್ದು, 22 ಸೆಕ್ಟರ್ ಆಫೀಸರ್‌ಗಳು, 18 ಫ್ಲೈಯಿಂಗ್ ಸ್ಕ್ವಾಡ್ ತಂಡಗಳು, 21 ಸ್ಟ್ಯಾಟಿಕ್ ಸರ್ವೆಲೆನ್ಸ್ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಮತದಾನದ ವೇಳೆ 1308 ಸಿಬ್ಬಂದಿ ನಿಯೋಜಿಸಲಾಗಿದ್ದು, ಇದರಲ್ಲಿ 327 ಪಿಆರ್ಓ, 327 ಎಪಿಆರ್ಓ ಹಾಗೂ 654 ಪಿಓಗಳನ್ನು ನಿಯೋಜಿಸಲಾಗಿದೆ.
ಪೊಲೀಸ್ ಸಿಬ್ಬಂದಿ ನೇಮಕ
ಸಿಂದಗಿಯ ಆರ್.ಡಿ. ಪಾಟೀಲ್ ಕಾಲೇಜಿನಲ್ಲಿ ಮಾಸ್ಟರಿಂಗ್ ಮತ್ತು ಡಿ ಮಾಸ್ಟರಿಂಗ್ ಕೇಂದ್ರ ಸ್ಥಾಪಿಸಲಾಗಿದೆ. ಮತದಾನ ಕರ್ತವ್ಯಕ್ಕಾಗಿ ಸಿಬ್ಬಂದಿಗಳಿಗೆ 66 ಬಸ್ ಹಾಗೂ ಇತರ ವಾಹನಗಳ ವ್ಯವಸ್ಥೆ ಮಾಡಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡಲು ಡಿವೈಎಸ್ಪಿ-02, ಸಿಪಿಐ-4, ಪಿಎಸ್ಐ-22, ಎಎಸ್ಐ-70, ಹೆಡ್ ಕಾನ್ಸ್‌ಟೆಬಲ್ ಮತ್ತು ಪೊಲೀಸ್ ಕಾನ್ಸ್‌ಟೆಬಲ್-477, ಡಿಎಆರ್-40, ಐಆರ್‌ಬಿ-180, ಸಿಐಎಸ್ಎಫ್- 185 ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ.
ಹಾನಗಲ್ ಕ್ಷೇತ್ರದ ಮಾಹಿತಿ
ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ 1,05,525 ಪುರುಷ ಮತದಾರರು, 98,953 ಮಹಿಳಾ ಮತದಾರರು, 83 ಸೇವಾ ಮತದಾರರು, ಮೂವರು ಇತರೆ ಮತದಾರರು ಸೇರಿದಂತೆ ಹಕ್ಕು ಚಲಾಯಿಸಲಿದ್ದಾರೆ. ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,04,564 ಮತದಾರರಿದ್ದಾರೆ.
239 ಮೂಲ ಮತಗಟ್ಟೆಗಳು ಮತ್ತು 24 ಹೆಚ್ಚುವರಿ ಮತಗಟ್ಟೆಗಳು ಸೇರಿ ಒಟ್ಟು 263 ಮತಗಟ್ಟೆಗಳು ಸಿದ್ಧಪಡಿಸಲಾಗಿದೆ. 263 ಮತಗಟ್ಟೆಗಳಲ್ಲಿ 1,155 ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ.
ಹಾನಗಲ್ ಕ್ಷೇತ್ರದಲ್ಲಿರುವ 33 ಸೂಕ್ಷ್ಮ ಮತ್ತು 3 ಅತಿಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. 121 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಒಂದು ವಿಕಲಚೇತನ ಸ್ನೇಹಿ ಮತಗಟ್ಟೆ ಮತ್ತು ಎರಡು ಸಖಿ ಮತಗಟ್ಟೆಗಳ ಸ್ಥಾಪನೆ ಸಹ ಮಾಡಲಾಗಿದೆ.
610 ಪೊಲೀಸ್ ಸಿಬ್ಬಂದಿ, ನಾಲ್ಕು ಡಿವೈಎಸ್ಪಿ, 11 ಸಿಪಿಐಗಳು, 29 ಪಿಎಸ್ಐಗಳು, 85 ಎಎಸ್ಐಗಳು, 481 ಜನ ಕಾನ್‌ಸ್ಟೆಬಲ್‌ಗಳು, 30 ಜನ ಮಹಿಳಾ ಸಿಬ್ಬಂದಿಗಳು, 90 ಜನ ಸಿಬ್ಬಂದಿಗಳನ್ನೊಳಗೊಂಡ ಒಂದು ಸಿಆರ್‌ಪಿಎಫ್ ಮತ್ತು 90 ಜನ ಸಿಬ್ಬಂದಿಗಳನ್ನೊಳಗೊಂಡ ಒಂದು ಸಿಐಎಸ್ಎಫ್ ತಂಡ ನಿಯೋಜನೆ ಮಾಡಲಾಗಿದೆ.
ಮತದಾನ ಕೇಂದ್ರಗಳತ್ತ ಮತದಾರರ ಅಗಮನ
ಮತದಾರರು ಮತದಾನ ಕೇಂದ್ರಗಳತ್ತ ಆಗಮಿಸುತ್ತಿದ್ದು, ತಮ್ಮ ಹಕ್ಕುಚಲಾಯಿಸುತ್ತಿದ್ದಾರೆ. ಈ ಬಾರಿಯ ಚುನಾವಣೆ ಪ್ರಚಾರದ ವೇಳೆ ರಾಜಕೀಯ ಪಕ್ಷಗಳ ನಾಯಕರು ತೀರ ವೈಯಕ್ತಿಕವಾಗಿ ಟೀಕೆಗಳನ್ನು ಮಾಡಿದ್ದರು. ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications