ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Singer Mangli: ಬಳ್ಳಾರಿ ಉತ್ಸವದಲ್ಲಿ ಕಾರಿನ ಮೇಲೆ ದಾಳಿ, ಗಾಯಕಿ ಮಂಗ್ಲಿ ಹೇಳಿದ್ದು ಹೀಗೆ

|
Google Oneindia Kannada News

ಬೆಂಗಳೂರು, ಜ. 23: ಬಳ್ಳಾರಿ ಉತ್ಸವದಲ್ಲಿ ಪಾಲ್ಗೊಂಡಿದ್ದ ಜನಪ್ರಿಯ ಗಾಯಕಿ ಮಂಗ್ಲಿ ಅವರ ಕಾರಿನ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿತ್ತು. ಈ ವರದಿಗಳನ್ನು ಗಾಯಕಿ ನಿರಾಕರಿಸಿ ಸ್ಪಷ್ಟಿಕರಣ ನೀಡಿದ್ದಾರೆ.

ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮ ಮೇಲೆ ಹಲ್ಲೆ ನಡೆದಿದೆ ಎಂಬ ವರದಿಯನ್ನು ಅಲ್ಲಗಳೆದಿದ್ದು, ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳು ತನ್ನನ್ನು ನೋಡಿಕೊಳ್ಳುತ್ತಿದ್ದರು. ತಾನು ಭಾಗವಹಿಸಿದ್ದ ಬಳ್ಳಾರಿಯ ಕಾರ್ಯಕ್ರಮವೂ ಯಶಸ್ವಿಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Ballari utsav: ಗಾಯಕಿ ಮಂಗ್ಲಿ ಕಾರಿನ ಗ್ಲಾಸ್‌ ಪುಡಿ ಪುಡಿ ಮಾಡಿದ ಕಿಡಿಗೇಡಿಗಳುBallari utsav: ಗಾಯಕಿ ಮಂಗ್ಲಿ ಕಾರಿನ ಗ್ಲಾಸ್‌ ಪುಡಿ ಪುಡಿ ಮಾಡಿದ ಕಿಡಿಗೇಡಿಗಳು

ಕೆಲ ದುಷ್ಕರ್ಮಿಗಳು ಬಳ್ಳಾರಿಯಲ್ಲಿ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಮಂಗ್ಲಿ ಅವರ ಕಾರಿಗೂ ಹಾನಿಯಾಗಿದೆ ಎಂದು ಹಲವು ವರದಿಗಳು ತಿಳಿಸಿವೆ. ಘಟನೆ ನಡೆದಾಗ ತಾನು ಕಾರಿನಲ್ಲಿ ಇರಲಿಲ್ಲ ಮತ್ತು ಅದು ತನ್ನ ಕಾರಲ್ಲ ಎಂದು ಮಂಗ್ಲಿ ತಿಳಿಸಿದ್ದಾರೆ.

Singer Mangli denies attack on her car in Ballari

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿರುವ ಅವರು, "ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿನ್ನೆ ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಕೆಲವು ಸಾಮಾಜಿಕ ಮಾಧ್ಯಮಗಳು ಹರಡಿದ ತಪ್ಪು ಸುದ್ದಿಯನ್ನು ನಾನು ಸಂಪೂರ್ಣವಾಗಿ ನಿರಾಕರಿಸುತ್ತೇನೆ" ಎಂದಿದ್ದಾರೆ,

" ನಾನು ಭಾಗವಹಿಸಿದ್ದ ಕಾರ್ಯಕ್ರಮ ಒಂದು ದೊಡ್ಡ ಯಶಸ್ಸನ್ನು ಪಡೆದಿದೆ ಎಂಬುದನ್ನು ನೀವು ಫೋಟೋಗಳು ಮತ್ತು ವಿಡಿಯೋಗಳಲ್ಲಿ ನೋಡಿದ್ದಿರಿ, ಕನ್ನಡದ ಜನರು ನನ್ನ ಮೇಲೆ ಅಪಾರ ಪ್ರೀತಿ ಮತ್ತು ಬೆಂಬಲವನ್ನು ನೀಡಿದ್ದಾರೆ. ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಂಡ ಅಧಿಕಾರಿಗಳ ಬಗ್ಗೆ ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ನನ್ನ ಇಮೇಜ್ ಹಾಳು ಮಾಡಲು ಇದೆಲ್ಲವನ್ನೂ ಮಾಡಲಾಗುತ್ತಿದೆ. ಈ ರೀತಿಯ ಸುಳ್ಳು ಪ್ರಚಾರವನ್ನು ನಾನು ಖಂಡಿಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.

Singer Mangli denies attack on her car in Ballari

ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರ ಉತ್ಸವದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಮಂಗ್ಲಿ ವೇದಿಕೆಯಲ್ಲಿ ತೆಲುಗು ಭಾಷೆಯಲ್ಲಿ ಮಾತನಾಡಲು ಆರಂಭಿಸಿದ್ದರು. ಈ ವೇಳೆ ನಿರೂಪಕಿ ಅನುಶ್ರೀ ಆಕೆಯನ್ನು ಕನ್ನಡದಲ್ಲಿ ಮಾತನಾಡುವಂತೆ ತಿಳಿಸಿದಾಗ, "ನಾನು ತೆಲುಗಿನಲ್ಲಿ ಮಾತನಾಡುತ್ತೇನೆ. ಏಕೆಂದರೆ ಅನಂತಪುರ (ಆಂಧ್ರಪ್ರದೇಶ) ಹತ್ತಿರದಲ್ಲಿದೆ. ಆದ್ದರಿಂದ ಇಲ್ಲಿ ಎಲ್ಲರು ತೆಲುಗು ಅರ್ಥಮಾಡಿಕೊಳ್ಳುತ್ತಾರೆ " ಎಂದು ಹೇಳಿದ್ದರು.

ಅವರ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೋಶ ಉಂಟಾಗಿತ್ತು. ಹೊಗಿನವರನ್ನು ಕರೆಸಿ ಕನ್ನಡಕ್ಕೆ ಅಪಮಾನ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಅನೇಕ ಕನ್ನಡ ಪರ ಹೋರಾಟಗಾರರು, ಸಂಘಟನೆಗಳು ಮಂಗ್ಲಿ ಕರ್ನಾಟಕದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

English summary
Popular Telugu singer Mangli denied the attack on her car at an event in Karnataka's Ballari. she said it was a false propaganda. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X