ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏ.17ರಂದು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ

|
Google Oneindia Kannada News

ಬೆಂಗಳೂರು, ಮಾ.5 : ಕೇಂದ್ರ ಚುನಾವಣಾ ಆಯೋಗವು 2014ರ ಲೋಕಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ. ಕರ್ನಾಟಕದ 28 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಏಪ್ರಿಲ್ 17ರಂದು ಚುನಾವಣೆ ನಡೆಯಲಿದ್ದು, ಮೇ 16ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.

ಕೇಂದ್ರ ಚುನಾವಣಾ ಆಯುಕ್ತ ವಿ.ಎಸ್.ಸಂಪತ್ ಬುಧವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಲೋಕಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದ್ದಾರೆ. ಕರ್ನಾಟಕದಲ್ಲಿನ ಚುನಾವಣಾ ಪ್ರಕ್ರಿಯೆ ಮಾರ್ಚ್ 19ರಂದು ಆರಂಭವಾಗಲಿದ್ದು, ಅಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಲಿದೆ. ಅಂದಿನಿಂದಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ. [ಚುನಾವಣಾ ವೇಳಾಪಟ್ಟಿ ನೋಡಿ]

ಮಾರ್ಚ್ 26 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದ್ದು, ಮಾ.27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮಾರ್ಚ್ 29 ಕಡೆಯ ದಿನವಾಗಿದ್ದು, ಏಪ್ರಿಲ್ 17ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಸುಮಾರು ಒಂದು ತಿಂಗಳ ಬಳಿಕ ಮೇ. 16ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ.

ಮತದಾರರ ಪಟ್ಟಿಗೆ ಹೆಸರು ಸೇರಿಸಿ : ದೇಶದಲ್ಲಿ ಒಟ್ಟು 10 ಕೋಟಿ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಈ ಚುನಾವಣೆಯಲ್ಲಿ ಒಟ್ಟು 81.4 ಕೋಟಿ ಮತದಾರರು ತಮ್ಮ ಮತ ಚಲಾಯಿಸಲಿದ್ದಾರೆ. ಮಾರ್ಚ್ 9ರೊಳಗೆ ಹೊಸದಾಗಿ ಹೆಸರು ನೊಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. [ಮತದಾರರ ಪಟ್ಟಿಗೆ ಹೆಸರು ಸೇರಿಸುವುದು ಹೇಗೆ?]

ಅಧಿಸೂಚನೆ ಜಾರಿ - ಮಾರ್ಚ್ 19

ಅಧಿಸೂಚನೆ ಜಾರಿ - ಮಾರ್ಚ್ 19

ಕರ್ನಾಟಕದಲ್ಲಿನ ಚುನಾವಣಾ ಪ್ರಕ್ರಿಯೆ ಮಾರ್ಚ್ 19ರಂದು ಆರಂಭವಾಗಲಿದ್ದು, ಅಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಲಿದೆ.

ನಾಮಪತ್ರ ಸಲ್ಲಿಕೆಗೆ ಕೊನೆ ದಿನ - ಮಾರ್ಚ್ 26

ನಾಮಪತ್ರ ಸಲ್ಲಿಕೆಗೆ ಕೊನೆ ದಿನ - ಮಾರ್ಚ್ 26

ಮಾರ್ಚ್ 19ರಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದ್ದು, ಮಾರ್ಚ್ 26 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ನಾಮಪತ್ರ ಪರಿಶೀಲನೆ - ಮಾರ್ಚ್ 27

ನಾಮಪತ್ರ ಪರಿಶೀಲನೆ - ಮಾರ್ಚ್ 27

ಮಾ.27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ - ಮಾರ್ಚ್ 29

ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ - ಮಾರ್ಚ್ 29

ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ವಾಪಸ್ ಪಡೆಯಲು ಮಾರ್ಚ್ 29 ಕೊನೆಯ ದಿನವಾಗಿದೆ.

ಏಪ್ರಿಲ್ 17ರಂದು ಚುನಾವಣೆ

ಏಪ್ರಿಲ್ 17ರಂದು ಚುನಾವಣೆ

ರಾಜ್ಯದ 28 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಏಪ್ರಿಲ್ 17ರಂದು ಚುನಾವಣೆ ನಡೆಯಲಿದೆ. 4,46,36,877 ಮತದಾರರು ಮತದಾನ ಮಾಡಲಿದ್ದಾರೆ.

ಕರ್ನಾಟಕದಲ್ಲಿ ಮಹಿಳಾ ಮತದಾರರು

ಕರ್ನಾಟಕದಲ್ಲಿ ಮಹಿಳಾ ಮತದಾರರು

ಕರ್ನಾಟಕದಲ್ಲಿ ಒಟ್ಟು 2,18,65,233 ಮಹಿಳಾ ಮತದಾರರು ಮತ ಚಲಾಯಿಸಲಿದ್ದಾರೆ.

ಒಟ್ಟು ಪುರುಷ ಮತದಾರರು

ಒಟ್ಟು ಪುರುಷ ಮತದಾರರು

ಕರ್ನಾಟಕದಲ್ಲಿ ಒಟ್ಟು 2,27,78,644 ಪುರುಷ ಮತದಾರರು ಮತ ಚಲಾವಣೆ ಮಾಡಲಿದ್ದಾರೆ.

8 ಲಕ್ಷ ಮತದಾರರು

8 ಲಕ್ಷ ಮತದಾರರು

ಕರ್ನಾಟಕದಲ್ಲಿ 18-19 ವರ್ಷದ 8 ಲಕ್ಷ ಮತದಾರರಿದ್ದಾರೆ.

English summary
Karnataka will go for a single phase Lok Sabha Election 2014 on April 17 Chief Election Commissioner VS Sampath announced on Wednesday, March 5. Model code of conduct comes into force with immediate effect he said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X