Get Updates
Get notified of breaking news, exclusive insights, and must-see stories!

ಸರ್ಕಾರಿ ಸಭೆ, ಸಮಾರಂಭದಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ನಿಷೇಧ

ಬೆಂಗಳೂರು, ಸೆಪ್ಟೆಂಬರ್ 20; ಕರ್ನಾಟಕ ಸರ್ಕಾರ ಸರ್ಕಾರದ ವತಿಯಿಂದ ಆಯೋಜಿಸುವ ಅಧಿಕೃತ ಸಭೆ/ ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಛೇರಿಗಳಲ್ಲಿ ಏಕ ಕಾಲಿಕ ಬಳಕೆ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆ ಹಾಗೂ ಸರಬರಾಜು ನಿಷೇಧಿಸಿದೆ. ಈ ಕುರಿತು ಸುತ್ತೋಲೆಯನ್ನು ಹೊರಡಿಸಲಾಗಿದೆ.

ಕರ್ನಾಟಕದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮಂಗಳವಾರ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆ ಸರ್ಕಾರದ ವತಿಯಿಂದ ಆಯೋಜಿಸಲ್ಪಡುವ ಅಧಿಕೃತ ಸಭೆ ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಛೇರಿಗಳಲ್ಲಿ Single use ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ/ ಸರಬರಾಜನ್ನು ನಿಷೇಧಿಸುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ.ಈ ಹಿಂದೆ ದಿನಾಂಕ 5/9/2018ರ ಆದೇಶವನ್ನು ಉಲ್ಲೇಖಿಸಿದ್ದಾರೆ.

Single Use Plastic Bottle Ban On Karnataka Govt Meeting Office And Events

ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ/ ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್‌ ಬಾಟಲಿ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಿ ಆದೇಶಲಾಗಿತ್ತು ಎಂದು ಹೇಳಿದ್ದಾರೆ.

ಸುತ್ತೋಲೆಯ ವಿವರಗಳು; ಇಂತಹ ಸಭೆ/ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್ (ಪ್ಲಾಸ್ಟಿಕ್ ಅಲ್ಲದ) ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸತಕ್ಕದೆಂದು ಹಾಗೂ ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣಾ ವ್ಯವಸ್ಥೆಯನ್ನು (Common drinking water dispensing system) ಏರ್ಪಡಿಸಬೇಕು ಎಂದು ಸೂಚಿಸಲಾಗಿತ್ತು.

ಆದರೆ, ಇತ್ತೀಚಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಅಥವಾ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ/ ಸಮಾರಂಭಗಳಲ್ಲಿ ಮೇಲಿನ ಸರ್ಕಾರದ ಆದೇಶದ ಸೂಚನೆಯನ್ನು ಪಾಲಿಸುತ್ತಿಲ್ಲ ಎಂಬುದನ್ನು ಗಮನಿಸಲಾಗಿದ್ದು ಸಭೆ/ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ವಿತರಿಸುತ್ತಿರುವುದು ಸಮರ್ಥನೀಯವಲ್ಲ.

ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಲ್ಲಿ ನೀಡಲಾಗಿದ್ದ ಸೂಚನೆಗಳನ್ನು ಪುನರುಚ್ಚರಿಸುತ್ತ ಇನ್ನುಮುಂದೆ ಎಲ್ಲಾ ಸಭೆ/ ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ನಲ್ಲಿ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಲ್ಲಿಸತಕ್ಕದ್ದು ಹಾಗೂ ನಿಗದಿಪಡಿಸಿದಂತೆ ಕುಡಿಯುವ ನೀರಿನ ವಿತರಣಾ ವ್ಯವಸ್ಥೆಯನ್ನು ಕಲ್ಪಿಸಿಕೊಳ್ಳುವಂತೆ ಸೂಚಿಸಿದೆ ಎಂದು ಹೇಳಿದ್ದಾರೆ.

ಹಿಂದಿನ ಆದೇಶವೇನು?

ಈ ಹಿಂದಿನ ಸರ್ಕಾರಿ ಆದೇಶದಲ್ಲಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳು ಹಾಗೂ ದೈನಂದಿನ ಬಳಕೆಯಲ್ಲಿರುವ ಇತರೆ ಪ್ಲಾಸ್ಟಿಕ್ ವಸ್ತುಗಳು ಅಲ್ಪಾವಧಿ ಹಾಗೂ ದೀರ್ಘಾಧಿಯಲ್ಲಿ ಪರಿಸರಕ್ಕೆ ಹಾನಿಯನ್ನು ಮತ್ತು ಆರೋಗ್ಯಕ್ಕೆ ಅಪಾಯವನ್ನು ಉಂಟುಮಾಡಲು ಕಾರಣವಾಗಿರುತ್ತವೆ.

ಈ ಹಿನ್ನೆಯಲ್ಲಿ ಸರ್ಕಾರ ಪ್ಲಾಸ್ಟಿಕ್ ತ್ಯಾಜ್ಯದ ನಿಯಂತ್ರಣಕ್ಕಾಗಿ ಈಗಾಗಲೇ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆಗಳು ಮತ್ತಿತರ ವಸ್ತುಗಳ ತಯಾರಿಕೆ, ಮಾರಾಟ, ದಾಸ್ತಾನು ಮತ್ತು ಉಪಯೋಗವನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿಎ ಎಂದು ಹೇಳಿತ್ತು.

ಈ ನಿಷೇಧವು ಸಾಮಾಗ್ರಿಗಳ ಪ್ಯಾಕೇಜಿಂಗ್ ಮಾಡುವ ಸಂದರ್ಭದಲ್ಲಿ ಅವಿಭಾಜ್ಯವಾಗಿ (Integral part of package) ಬರುವ ಪ್ಲಾಸ್ಟಿಕ್‌ಗಳನ್ನು ಹೊರತುಪಡಿಸಿರುವುದರಿಂದ ಏಕ ಕಾಲಿಕ ಬಳಕೆ ಪ್ಲಾಸ್ಟಿಕ್ ನೀರಿನ ಬಾಟಲಿಗಳಿಗೆ (Single use packaged water bottles) ಅನ್ವಯವಾಗುವುದಿಲ್ಲ ಎಂದು ತಿಳಿಸಲಾಗಿತ್ತು.

ಇಂತಹ ಬಾಟಲ್‌ಗಳ ಮೇಲೆ ನಿರ್ಬಂಧವಿಲ್ಲದ್ದರಿಂದ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ನೀರಿನ ಬಾಟಲ್‌ಗಳ ಬಳಕೆ ಯಥೇಚ್ಛವಾಗಿದ್ದು ಬಳಸಿದ ಪ್ಲಾಸ್ಟಿಕ್ ನೀರಿನ ಬಾಟಲುಗಳು ಎಲ್ಲೆಂದರಲ್ಲಿ ಎಸೆಯಲ್ಪಡುವುದರಿಂದ ಘನ ತ್ಯಾಜ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ಸೇರಿ ಹಲವಾರು ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟು ಮಾಡುವುದರ ಜೊತೆಗೆ, ನಗರ ಪ್ರದೇಶಗಳಲ್ಲಿ ಅಹಿತಕರ ದೃಶ್ಯ ಸೃಷ್ಟಿಯಾಗುತ್ತಿರುತ್ತದೆ ಎಂದು ಉಲ್ಲೇಖಿಸಲಾಗಿತ್ತು.

ಇದಲ್ಲದೆ, ಸರ್ಕಾರದ ಸಭೆ/ ಸಮಾರಂಭಗಳಲ್ಲಿ ಪ್ಲಾಸ್ಟಿಕ್‌ ಬಾಟಲಿಗಳಲ್ಲಿ ಸರಬರಾಜಾಗುವ ನೀರು ಹಲವಾರು ಸಂದರ್ಭಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಾತ್ರ ಬಳಕೆಯಾಗಿ ಹೆಚ್ಚಿನ ಪ್ರಮಾಣದ ನೀರು ವ್ಯರ್ಥವಾಗುತ್ತಿದೆ ಮತ್ತು ಇಂತಹ ನೀರಿನ ಬಾಟಲಿಗಳನ್ನು ಖರೀದಿಸುವುದರಿಂದ ರಾಜ್ಯದ ಬೊಕ್ಕಸಕ್ಕೆ ದುಬಾರಿ ಆಗುತ್ತಿರುತ್ತದೆ ಎಂದು ಹೇಳಲಾಗಿತ್ತು.

ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲಾ ಸಂಸ್ಥೆಗಳಿಂದ ಆಯೋಜಿಸುವ ಸಭೆ/ ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಛೇರಿಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್‌ ಬಾಟಲಿಗಳಲ್ಲಿ (Single use packaged water bottles) ಪ್ಯಾಕ್ ಮಾಡಿದ ನೀರು ಸರಬರಾಜು/ ಬಳಕೆ ಮಾಡುವುದನ್ನು ನಿಷೇಧಿಸಿ, ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್, ಪೇಪರ್ ಮತ್ತಿತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡುವುದನ್ನು ಉತ್ತೇಜಿಸುವುದು ಅಗತ್ಯವೆಂದು ತೀರ್ಮಾನಿಸಲಾಗಿದೆ ಎಂದು ಹೇಳಿತ್ತು.

* ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ/ ಸಮಾರಂಭ, ಕಾರ್ಯಾಗಾರ, ಸೆಮಿನಾರ್, ಇತ್ಯಾದಿಗಳಲ್ಲಿ 20 ಲೀಟರ್ ಅಥವಾ ಅದಕ್ಕೂ ಹೆಚ್ಚಿನ ಸಾಮರ್ಥ್ಯದ ಕ್ಯಾನ್‌ಗಳಲ್ಲಿ ಶುದ್ಧೀಕರಿಸಿದ ಕುಡಿಯುವ ನೀರಿನ ವಿತರಣಾ ವ್ಯವಸ್ಥೆಯನ್ನು ಏರ್ಪಡಿಸತಕ್ಕದ್ದು.

* ಕಚೇರಿಗಳಲ್ಲಿ ಸಾಮಾನ್ಯವಾಗಿ ಆಗಾಗ್ಗೆ ಸಭೆ/ ಸಮಾರಂಭಗಳು ಏರ್ಪಡುವ ಸಮಿತಿ ಕೊಠಡಿಗಳು, ಕಾನ್ಫರೆನ್ಸ್‌ ಹಾಲ್‌ಗಳು ಇತ್ಯಾದಿ ಸಭಾಂಗಣಗಳಲ್ಲಿ ಕೇಂದ್ರ ಸರ್ಕಾರದ https://gem.gov.in/ ರಲ್ಲಿ ಅನುಮೋದಿಸಲ್ಪಟ್ಟಿರುವ ಅಥವಾ ರಾಜ್ಯ ಸರ್ಕಾರದಿಂದ ಅಂಗೀಕರಿಸಲ್ಪಟ್ಟಿರುವ ಸಂಸ್ಥೆಗಳಿಂದ ಖರೀದಿಸಿದ RO ಮತ್ತು ನೀರು ಶುದ್ದೀಕರಣ ಘಟಕಗಳನ್ನು ಅನುಸ್ಥಾಪಿಸಿ, ಗಾಜಿನ ಲೋಟ ಅಥವಾ ಸ್ಟೀಲ್ ಲೋಟ ಅಥವಾ ಪೇಪರ್ ಲೋಟ ಅಥವಾ ಇತರೆ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ನೀರು ಕುಡಿಯುವುದಕ್ಕೆ ವ್ಯವಸ್ಥೆ ಮಾಡುವುದು.

* ಎಲ್ಲಾ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಸಂಸ್ಥೆಗಳ ಕಚೇರಿಗಳಲ್ಲಿ ಸಾರ್ವಜನಿಕರಿಗಾಗಿ ಶುದ್ಧ ಕುಡಿಯುವ ನೀರು ಸರಬರಾಜಿಗಾಗಿ ಕೇಂದ್ರ ಸರ್ಕಾರದ ಜಾಲತಾಣ https://gem.gov.in/ ರಲ್ಲಿ ಅನುಮೋದಿಸಲ್ಪಟ್ಟಿರುವ ಸಂಸ್ಥೆಗಳಿಂದ ಖರೀದಿಸಿದ ಅಥವಾ ಯಾವುದಾದರೂ ಉತ್ತಮ RO ಶುದ್ಧ ನೀರಿನ ಘಟಕಗಳನ್ನು ವ್ಯವಸ್ಥಾಪನೆಗೊಳಿಸುವುದು ಎಂದು ಹೇಳಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+