Get Updates
Get notified of breaking news, exclusive insights, and must-see stories!

ಕರ್ನಾಟಕದ ಎಲ್ಲ ಆರೋಗ್ಯ ಕೇಂದ್ರಗಳು ಏಕಬಳಕೆ ಪ್ಲಾಸ್ಟಿಕ್ ಮುಕ್ತ ಪ್ರದೇಶ

ಕರ್ನಾಟಕ ರಾಜ್ಯದ ಪ್ರತಿ ಆರೋಗ್ಯ ಕೇಂದ್ರಗಳಲ್ಲೂ ಸಹ ಏಕ ಬಳಕೆಯ ಪ್ಲಾಸ್ಟಿಕ್‌ ಅನ್ನು ನಿಷೇಧಿಸಲಾಗಿದೆ. ಸರ್ಕಾರದ ಈ ಮಹತ್ವದ ನಿರ್ಧಾರಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ರಾಜ್ಯ ಆರೋಗ್ಯ ಇಲಾಖೆ ಮನವಿ ಮಾಡಿದೆ.

ಬೆಂಗಳೂರು, ಫೆಬ್ರವರಿ 15: ಕರ್ನಾಟಕ ರಾಜ್ಯದ ಪ್ರತಿ ಆರೋಗ್ಯ ಕೇಂದ್ರಗಳಲ್ಲೂ ಸಹ ಏಕ ಬಳಕೆಯ ಪ್ಲಾಸ್ಟಿಕ್‌ ಅನ್ನು ನಿಷೇಧಿಸಲಾಗಿದೆ. ಸರ್ಕಾರದ ಈ ಮಹತ್ವದ ನಿರ್ಧಾರಕ್ಕೆ ಸಾರ್ವಜನಿಕರು ಸಹಕರಿಸಬೇಕು. ಉತ್ತಮ ಪರಿಸರಕ್ಕೆ ನೆರವಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೇಳಿಕೊಂಡಿದ್ದಾರೆ.

ಪ್ಲಾಸ್ಟಿಕ್‌ ಉತ್ಪನ್ನಗಳನ್ನು ದಿನನಿತ್ಯ ಬಳಕೆ ಮಾಡುವುದರಿಂದ ಮನುಷ್ಯರಿಗಷ್ಟೇ ಅಲ್ಲದೇ ಪರಿಸರ, ಪ್ರಾಣಿಗಳ ಮೇಲೂ ಹಾನಿ ಉಂಟಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರವು ಪ್ಲಾಸ್ಟಿಕ್‌ ವೇಸ್ಟ್ (ಮ್ಯಾನೇಜ್‌ಮೆಂಟ್‌ ಮತ್ತು ಹ್ಯಾಡ್ಲಿಂಗ್‌) 2011 ಹಾಗೂ ತಿದ್ದುಪಡಿ ನಿಯಮ 2016ರ ಪ್ರಕಾರ 'ಪ್ಲಾಸ್ಟಿಕ್‌ ಉತ್ಪನ್ನಗಳ ಬಳಕೆ' ಮೇಲೆ ಹೆಚ್ಚು ನಿರ್ಬಂಧ ವಿಧಿಸಿದೆ. ಇದರನ್ವಯ ಕರ್ನಾಟಕ ಸರ್ಕಾರ ಪ್ಲಾಸ್ಟಿಕ್‌ ಬ್ಯಾಗ್‌ ಮತ್ತಿತರೆ ಉತ್ಪನ್ನಗಳ ಬಳಕೆಯನ್ನು ನಿರ್ಬಂಧಿಸಿ 2016ರ ಮಾರ್ಚ್‌ 11 ರಂದು ಅಧಿಸೂಚನೆ ಹೊರಡಿಸಿದೆ.

ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಕಟ್ಟು ನಿಟ್ಟಾಗಿ ಪಾಲಿಸು ವನಿಟ್ಟಿನಲ್ಲಿ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ 23ರ ಫೆಬ್ರವರಿ 1 ರಂದು ಸುತ್ತೋಲೆ ಹೊರಡಿಸಿದೆ. ಇದರಲ್ಲಿ ಕೆಲ ನಿರ್ದಿಷ್ಟ ಕ್ರಮಗಳನ್ನು ಅನುಸರಿಸುವಂತೆ, ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಸರ್ಜನ್ ಸೇರಿ ಇನ್ನಿತರ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು.

Single Used Plastic Ban In All Health Centers Of Karnataka From Feb 1, Says Dr.K Sudhakar

ಇದೇ ತಿಂಗಳ ಪೆ.1 ರಿಂದಲೇ ರಾಜ್ಯದ ಪ್ರತಿಯೊಂದು ಆರೋಗ್ಯ ಕೇಂದ್ರಗಳನ್ನು ಏಕ ಬಳಕೆಯ ಪ್ಲಾಸ್ಟಿಕ್‌ ಮುಕ್ತ ಪ್ರದೇಶವೆಂದು ಘೋಷಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಚೇರಿಯ ಒಳಗೆ, ಆವರಣದಲ್ಲಿ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ತರದಂತೆ ಕ್ರಮವಹಿಸಲಾಗುತ್ತಿದೆ. ಕೇಂದ್ರಗಳಲ್ಲಿ ನಾಮಫಲಕ ಅಳವಡಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಇನ್ನೂ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಗಳು ಮತ್ತು ಸಾರ್ವಜನಿಕ ಆರೋಗ್ಯ ಸೇವೆ ಕುರಿತು ಸಂಬಂಧಪಟ್ಟ ವೆಬ್‌ಸೈಟ್‌ಗಳಲ್ಲಿ ಈ ಬಗ್ಗೆ ಮಾಹಿತಿ ಅಳವಡಿಸಲಾಗಿದೆ.

ಏಕ ಬಳಕೆಯ ಪ್ಲಾಸ್ಟಿಕ್ ಯಾವುದು?

ಏಕ ಬಳಕೆಯ ಪ್ಲಾಸ್ಟಿಕ್‌ ಯಾವವು ಎಂದು ನೋಡುವುದಾದರೆ, ಪ್ಲಾಸ್ಟಿಕ್‌ ಬಾಟಲ್‌, ಕವರ್‌, ಬ್ಯಾಗ್‌ ಇನ್ನಿತರ ಉತ್ಪನ್ನಗಳು. ಇಂತವುಗಳನ್ನು ಒಳತರದಂತೆ ಆರೋಗ್ಯ ಕೇಂದ್ರಗಳ ಭದ್ರತಾ ಸಿಬ್ಬಂದಿಗೆ ತಿಳಿಸಬೇಕು. ಅದೇ ರೀತಿ ಕ್ಯಾಂಟೀನ್‌ಗಳಲ್ಲೂ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನ ಬಳಸದಂತೆ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

Single Used Plastic Ban In All Health Centers Of Karnataka From Feb 1, Says Dr.K Sudhakar

ಜನರ ಆರೋಗ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರ ಪರಿಸರ ಸ್ನೇಹಿ ಕ್ರಮಗಳಿಗೆ ಒತ್ತು ನೀಡುತ್ತಿದೆ. ಇದರ ಅರಿವು ಎಲ್ಲಿಗೂ ಆಗಬೇಕು. ಆರೋಗ್ಯ ಕೇಂದ್ರಗಳಲ್ಲಿ ಸಾರ್ವಜನಿಕರು ಪ್ಲಾಸ್ಟಿಕ್‌ ಬಳಕೆ ನಿಲ್ಲಿಸಬೇಕು. ಸರ್ಕಾರ ಸೂಚಿಸಿರುವ ಎಲ್ಲ ನಿಯಮ ಜನರು ಪಾಲಿಸಬೇಕು ಎಂದು ಅವರು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+