ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷಿ ಭೂಮಿ ಪರಿವರ್ತನೆ ಸರಳೀಕರಣಕ್ಕೆ ಕಾನೂನು ತಿದ್ದುಪಡಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 5: ಕೃಷಿ ಭೂಮಿ ಪರಿವರ್ತನೆ ಸರಳೀಕರಣಕ್ಕೆ ಹೊಸ ಕಾನೂನು ತಿದ್ದುಪಡಿಯನ್ನು ಸರ್ಕಾರ ತರುತ್ತಿದೆ.

ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಬಳಸಿಕೊಳ್ಳಲು ಅಗತ್ಯವಾದ ಭೂ ಪರಿವರ್ತನೆಯನ್ನು ಸರಳಗೊಳಿಸುವಂತಹ ಮಹತ್ವದ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ರೈತರ ಸಾಲ ಮನ್ನಾ ನಿಯಮಗಳೇನು? ಇಲ್ಲಿದೆ ಮಾಹಿತಿ ರೈತರ ಸಾಲ ಮನ್ನಾ ನಿಯಮಗಳೇನು? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ವಸತಿ, ಮೂಲಸೌಲಭ್ಯ ಅಭಿವೃದ್ಧಿ ಉದ್ಯಮಗಳು, ಸೌರವಿದ್ಯುತ್ ಯೋಜನೆಗಳು, ಪ್ರವಾಸೋದ್ಯಮ ಇತ್ಯಾದಿಗಳ ಬೆಳವಣಿಗೆಗಾಗಿ ಭೂಮಿಯ ಅಗತ್ಯವಿದೆ. ಇದರ ಜೊತೆಗೆ ಭೂಮಿಯನ್ನು ಹೊಂದಿರುವವರು ಅದನ್ನು ಪರಿಣಾಮಕಾರಿ ರೀತಿಯಲ್ಲಿ ಬಳಕೆ ಮಾಡಿಕೊಳ್ಳಲು ಅನುಕೂಲ ಮಾಡಿಕೊಡಬೇಕಾದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸಬೇಕಾದ ಅವಶ್ಯಕತೆ ಇತ್ತು ಎಂದು ಕಂದಾಯ ಸಚಿವ ಆರ್‌ವಿ ದೇಶಪಾಂಡೆ ತಿಳಿಸಿದ್ದಾರೆ.

Single window system for agriculture land conversion

ಇಡೀ ಭೂ ಪರಿವರ್ತನೆ ಪ್ರಕ್ರಿಯೆ ಇದರಿಂದಾಗಿ ಆನ್‌ಲೈನ್ ಮೂಲಕ ನಡೆಯಲಿದೆ. ಇದಕ್ಕಾಗಿ ಸೂಕ್ತವಾದ ತಂತ್ರಾಂಶಗಳನ್ನು ಸಿದ್ಧಪಡಿಸಲಾಗುತ್ತಿದೆ. ಇದರಿಂದಾಗಿ ಅರ್ಜಿದಾರರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವುದು ತಪ್ಪುತ್ತದೆ ಜೊತೆಗೆ ಪಾರದರ್ಶಕತೆಯೂ ಬರಲಿದೆ ಎಂದು ತಿಳಿಸಿದ್ದಾರೆ.

ಕುಟುಂಬದ ಒಬ್ಬರ ಕೃಷಿ ಸಾಲ ಮಾತ್ರ ಮನ್ನಾ, ನಿಯಮ ವಾಪಸ್ ಪಡೆಯಲಿದೆ ಸರ್ಕಾರ ಕುಟುಂಬದ ಒಬ್ಬರ ಕೃಷಿ ಸಾಲ ಮಾತ್ರ ಮನ್ನಾ, ನಿಯಮ ವಾಪಸ್ ಪಡೆಯಲಿದೆ ಸರ್ಕಾರ

ಸರಳ ಭೂ ಪರಿವರ್ತನೆಯನ್ನು 1964ರ ಭೂ ಕಂದಾಯ ಕಾಯ್ದೆಯ ಸೆಕ್ಷನ್ 95(2) ರಡಿ ನಡೆಸಲಾಗುವುದು, ಇನ್ನುಮುಂದೆ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಬಳಸಿಕೊಳ್ಳಲು ಉದ್ದೇಶಿಸುವವರು ನಾಡ ಕಚೇರಿ, ತಾಲೂಕು ಕಚೇರಿ, ಇಲ್ಲವೇ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೂ ಪರಿವರ್ತನೆಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸಬಹುದು ಇದಾದ ಒಂದು ತಿಂಗಳಲ್ಲಿ ಭೂಪರಿವರ್ತನೆ ಪ್ರಕ್ರಿಯೆ ಮುಗಿಯಲಿದೆ ಎಂದು ಮಾಹಿತಿ ನೀಡಿದರು.

English summary
State government has made simplify the agriculture land into non agriculture conversion through single window system. The state cabinet has amended the Karnataka land revenue act on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X