SIR: ಕರ್ನಾಟಕದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಭಾರತೀಯ ಚುನಾವಣಾ ಆಯೋಗದಿಂದ ಗುಡ್‌ನ್ಯೂಸ್!, ಅವಧಿ ವಿಸ್ತರಣೆ

SIR: ಬೆಂಗಳೂರು ಹಾಗೂ ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗವು ಗುಡ್‌ನ್ಯೂಸ್ ಕೊಟ್ಟಿದೆ. ಬುಧವಾರ (ಜುಲೈ 15, 2026) ರಂದು ಭಾರತ ಚುನಾವಣಾ ಆಯೋಗವು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದೆ. ಕರ್ನಾಟಕ, ದೆಹಲಿ, ತೆಲಂಗಾಣ ಹಾಗೂ ಪಂಜಾಬ್ ರಾಜ್ಯಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ.
ಇದೀಗ ಎಸ್‌ಐಆರ್ ಅವಧಿಯನ್ನು ಸುಮಾರು 10-12 ದಿನಗಳವರೆಗೆ ವಿಸ್ತರಿಸಲಾಗಿದೆ. ಈ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮೂರನೇ ಹಂತದಲ್ಲಿ SIR ಪ್ರಕ್ರಿಯೆ ನಡೆಯುತ್ತಿರುವ 16 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪಟ್ಟಿಯಲ್ಲಿ ಇದೆ.

ಭಾರತೀಯ ಚುನಾವಣಾ ಆಯೋಗದ ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಕರ್ನಾಟಕದಲ್ಲಿ ಜೂನ್ 30 ರಂದು ಪ್ರಾರಂಭವಾದ ಮನೆ-ಮನೆ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯು ಜುಲೈ 29ಕ್ಕೆ ಅಂತ್ಯವಾಗಬೇಕಾಗಿತ್ತು. ಆದರೆ ಇದರ ಅವಧಿಯನ್ನು ಇದೀಗ ಆಗಸ್ಟ್‌ 8ರ ವರೆಗೆ ವಿಸ್ತರಿಸಲಾಗಿದೆ. ಇನ್ನು ಮನೆ - ಮನೆ ಭೇಟಿ ಅವಧಿಯನ್ನು ವಿಸ್ತರಿಸಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಎಲ್ಲಾ ಪ್ರಕ್ರಿಯೆಗಳ ವೇಳಾಪಟ್ಟಿಯು ವಿಸ್ತರಣೆಯಾಗಿದೆ. ಅಕ್ಟೋಬರ್ 7ಕ್ಕೆ ಪ್ರಕಟವಾಗಬೇಕಿದ್ದ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 19ಕ್ಕೆ ಪ್ರಕಟಿಸಲಾಗುತ್ತದೆ.

SIR

ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಉತ್ತಮ ಪ್ರತಿಕ್ರಿಯೆ

ಇನ್ನು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಕರ್ನಾಟಕದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನೂ 15 ದಿನ ಬಾಕಿ ಇರುವಾಗಲೇ ಗಣತಿ ನಮೂನೆ ವಿತರಣೆ ಕಾರ್ಯವು ಶೇ.96 ಹಾಗೂ ಗಣತಿ ನಮೂನೆಗಳ ಡಿಜಿಟಲೀಕರಣವು ಶೇ.40ಕ್ಕೂ ಹೆಚ್ಚಾಗಿದೆ. ಹೀಗಾಗಿ ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಅವಧಿಯನ್ನು ವಿಸ್ತರಿಸುವ ಪ್ರಶ್ನೆಯೇ ಇರುವುದಿಲ್ಲ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಅವರು ಬುಧವಾರ ಹೇಳಿದ್ದರು. ಆದರೆ ಇದರ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗವು ಎಸ್‌ಐಆರ್ ವೇಳಾಪಟ್ಟಿಯನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ.

ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ

ಇನ್ನು ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್ ಅವಧಿ ವಿಸ್ತರಿಸಲಾಗಿದೆ. ತೆಲಂಗಾಣ ಹಾಗೂ ಪಂಜಾಬ್‌ನಲ್ಲಿ ಎಣಿಕೆ ಹಂತವನ್ನು ಜುಲೈ 24 ರಿಂದ ಆಗಸ್ಟ್‌ 3ಕ್ಕೆ ವಿಸ್ತರಿಸಲಾಗಿದೆ. ಕರಡು ಮತದಾರರ ಪಟ್ಟಿಯನ್ನು ಜುಲೈ 31ರ ಬದಲಿಗೆ ಆಗಸ್ಟ್‌ 10ಕ್ಕೆ ಪ್ರಕಟಿಸಲು ನಿರ್ಧರಿಸಲಾಗಿದೆ ಮತ್ತು ಅಂತಿಮ ಪಟ್ಟಿ ಅಕ್ಟೋಬರ್ 1ರ ಬದಲಿಗೆ ಅಕ್ಟೋಬರ್ 12 ರಂದು ಪ್ರಕಟವಾಗಲಿದೆ. ದೆಹಲಿಯಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 19 ರಂದು ಪ್ರಕಟಿಸಲಾಗುವುದು ಮತ್ತು ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 5ರ ಬದಲಿಗೆ ಆಗಸ್ಟ್ 17 ರಂದು ಪ್ರಕಟಿಸಲಾಗುವುದು. ಜುಲೈ 29 ರವರೆಗೆ ನಿಗದಿಯಾಗಿದ್ದ ಮನೆ-ಮನೆ ಭೇಟಿಗಳು ಈಗ ಆಗಸ್ಟ್ 8 ರವರೆಗೆ ಮುಂದುವರಿಯಲಿದೆ ಎಂದು ಭಾರತೀಯ ಚುನಾವಣಾ ಆಯೋಗವು ತಿಳಿಸಿದೆ.

SIRನ ಮೂರನೇ ಹಂತವು ದೆಹಲಿ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ್, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಹರಿಯಾಣ, ಚಂಡೀಗಢ, ತೆಲಂಗಾಣ, ಪಂಜಾಬ್, ಕರ್ನಾಟಕ, ಮೇಘಾಲಯ, ಮಹಾರಾಷ್ಟ್ರ, ಜಾರ್ಖಂಡ್, ನಾಗಾಲ್ಯಾಂಡ್, ತ್ರಿಪುರ, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ಡಿಯುಗಳಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಹಂತ ಹಂತವಾಗಿ ನಡೆಸಲಾಗುತ್ತಿದೆ. ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು ಮತದಾರರ ಸಂಖ್ಯೆ 36.73 ಕೋಟಿ. ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+