SIR: ಈ ಕೆಲಸ ಮಾಡದಿದ್ದರೆ ಕರಡು ಮತದಾರರ ಪಟ್ಟಿಯಿಂದ ನಿಮ್ಮ ಹೆಸರು ಡಿಲೀಟ್ ಆಗಲಿದೆ ಎಚ್ಚರ!

SIR: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ, ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಸಂದರ್ಭದಲ್ಲಿ ಗಣತಿ ನಮೂನೆ ಹಿಂತಿರುಗಿಸದಿದ್ದರೆ ಕರಡು ಮತದಾರರ ಪಟ್ಟಿಯಿಂದ ಹೆಸರು ಕೈ ಬಿಡಲಾಗುವುದು ಎಂದು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್. ರಮೇಶ್ ಅವರು ಹೇಳಿದ್ದಾರೆ.

​ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಂಬಂಧ ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರಂ ನೀಡುವ, ಭರ್ತಿ ಮಾಡಿದ ಅರ್ಜಿಗಳನ್ನು ಬಿಎಲ್ಒಗಳು ಪಡೆಯುವ ಹಾಗೂ ಭರ್ತಿ ಮಾಡಲಾದ ಅರ್ಜಿಗಳನ್ನು ಡಿಜಿಟಲೀಕರಣಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರಲಿದೆ ಎಂದು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್. ರಮೇಶ್ ಅವರು ತಿಳಿಸಿದ್ದಾರೆ. ವಿಶೇಷ ಪರಿಷ್ಕರಣೆಯ ಅಂಗವಾಗಿ ಮತಗಟ್ಟೆ ಅಧಿಕಾರಿಗಳು (ಬಿಎಲ್ ಒ) ಮತದಾರರ ಮನೆ ಮನೆಗೆ ಖುದ್ದಾಗಿ ಭೇಟಿ ನೀಡಿ ಗಣತಿ ನಮೂನೆಗಳನ್ನು (Enumeration Forms) ನೀಡುತ್ತಿದ್ದಾರೆ. ಮತದಾರರು ಆ ಫಾರ್ಮ್‌ಗಳಲ್ಲಿ ಕೇಳಲಾಗಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಕಡ್ಡಾಯವಾಗಿ ಮರಳಿ ಬಿ.ಎ.ಲ್‌.ಒಗಳಿಗೇ ಮಾತ್ರ ನೀಡುವಂತೆ ತಿಳಿಸಿದ್ದಾರೆ.

SIR

​SIR: ಫಾರ್ಮ್ ಭರ್ತಿ ಮಾಡುವ ವಿಧಾನ (ವಿಡಿಯೋ ಲಿಂಕ್)

ಮತದಾರರು ನಮೂನೆಯನ್ನು ಹೇಗೆ ಭರ್ತಿ ಮಾಡಬೇಕೆಂದು ತಿಳಿಯುವ ಸಂಬಂಧ ಸಾರ್ವಜನಿಕರ ನೆರವಿಗಾಗಿ ಭಾರತೀಯ ಚುನಾವಣಾ ಆಯೋಗದ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಲಭ್ಯವಿರುವ ಮಾರ್ಗದರ್ಶಿ ವಿಡಿಯೋಗಳನ್ನು ವೀಕ್ಷಿಸಬಹುದು. ಆಯೋಗದ ಚಾನೆಲ್‌ನಲ್ಲಿ ಫಾರ್ಮ್ ಭರ್ತಿ ಮಾಡುವ ಹಂತ ಹಂತದ ವಿವರಗಳ ವಿಡಿಯೋಗಳು ಲಭ್ಯವಿರುತ್ತವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಯೂಟ್ಯೂಬ್ ಚಾನೆಲ್‌ ಲಿಂಕ್: https://youtu.be/mN5PRoWva0M?si=xEaxVRnVVjIxrRuM

ಈ ಕೆಲಸ ಮಾಡದಿದ್ದರೆ ಕರಡು ಮತ ಪಟ್ಟಿಯಿಂದ ಹೆಸರು ಕೈಬಿಡಲಾಗುವುದು

ಇನ್ನು ಮತದಾರರು ​ಗಣತಿ ನಮೂನೆಗಳನ್ನು ಹಿಂತಿರುಗಿಸದಿದ್ದರೆ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾಗುವುದು ಎಂದು ಎಚ್ಚರಿಸಲಾಗಿದೆ. ಮತದಾರರ ಪಟ್ಟಿಯ ನಿಖರತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಒಂದು ವೇಳೆ ಮತದಾರರು ಬಿ.ಎಲ್.ಒಗಳು ನೀಡಿದ ಗಣತಿ ನಮೂನೆಯನ್ನು (Enumeration Form) ಭರ್ತಿ ಮಾಡಿ ಮರಳಿ ಸಲ್ಲಿಸದಿದ್ದರೆ, ಈ ನಿರ್ದಿಷ್ಟ ಹೆಸರನ್ನು ಮತದಾರರ ಪಟ್ಟಿಯಿಂದ (Electoral Roll) ತೆಗೆದುಹಾಕಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಈ ಪ್ರಕ್ರಿಯೆಯನ್ನು ನಿರ್ಲಕ್ಷಿಸದೆ ಜವಾಬ್ದಾರಿಯಿಂದ ಸಹಕರಿಸಬೇಕು ಎಂದು ಹೇಳಲಾಗಿದೆ.

ಮತದಾರರು ಎಸ್‌ಐಆರ್ ಕುರಿತಂತೆ ಹಾಗೂ ಮತದಾರರ ಪಟ್ಟಿ ವಿವರಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್ ಸೈಟ್ ಲಿಂಕ್‌ಗಳ ವೀಕ್ಷಣೆ ಮಾಡಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದ್ದಾರೆ.

ಲಿಂಕ್: https://voters.eci.gov.in/searchInSIR/S2UA4DPDF-JK4QWODSE

https://ceo.karnataka.gov.in/

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+