• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಉಪ ಚುನಾವಣೆಯ ಸೋಲು; ಸಿದ್ದರಾಮಯ್ಯ ಸರಣಿ ಟ್ವೀಟ್

|

ಬೆಂಗಳೂರು, ನವೆಂಬರ್ 10 : ಕರ್ನಾಟಕದ ರಾಜಕೀಯದಲ್ಲಿ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಬಿಜೆಪಿ ಎರಡೂ ಕ್ಷೇತ್ರಗಳಲ್ಲಿ ಗೆದ್ದಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಉಂಟಾಗಿದೆ.

   BJP ಸಿಬಿಐ ನಾ miss use ಮಾಡ್ತಿದಾರೆ!! | Oneindia Kannada

   ಮಂಗಳವಾರ ಆರ್. ಆರ್. ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್. ಕುಸುಮಾ, ಶಿರಾದಲ್ಲಿ ಟಿ. ಬಿ. ಜಯಚಂದ್ರ ಸೋಲು ಅನುಭವಿಸಿದ್ದಾರೆ.

   ಆರ್. ಆರ್. ನಗರ ನನ್ನ ಕರ್ಮ ಭೂಮಿ; ಹೆಚ್. ಕುಸುಮಾ

   ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಉಪ ಚುನಾವಣೆ ಸೋಲಿನ ಕುರಿತು ಸರಣಿ ಟ್ವೀಟ್ ಮಾಡಿದ್ದಾರೆ. "ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ" ಎಂದು ಹೇಳಿದ್ದಾರೆ.

   RR Nagar, Sira By Election Results 2020 Live Updates; ಆರ್. ಆರ್. ನಗರ, ಶಿರಾ ಉಪ ಚುನಾವಣೆ ಫಲಿತಾಂಶ

   "ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು" ಎಂದು ಅಭಿಪ್ರಾಯಪಟ್ಟಿದ್ದಾರೆ.

   ಶಿರಾ ಉಪ ಚುನಾವಣೆ; ಗೆದ್ದು ಇತಿಹಾಸ ಬರೆದ ಬಿಜೆಪಿ

   ರಾಜ್ಯದ ಸಮಗ್ರ ಅಭಿಪ್ರಾಯವಲ್ಲ

   ರಾಜ್ಯದ ಸಮಗ್ರ ಅಭಿಪ್ರಾಯವಲ್ಲ

   "ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವನ್ನು ಸ್ವೀಕರಿಸಲೇಬೆಕು. ನಾವೂ ಒಪ್ಪಿಕೊಂಡಿದ್ದೇವೆ. ಇದರಿಂದ ಪಕ್ಷದ ಕಾರ್ಯಕರ್ತರು ಕಂಗೆಡಬೇಕಾಗಿಲ್ಲ. ಇದರಿಂದ ಯಾವ ಪಕ್ಷವೂ ಬಲಶಾಲಿಯಾಗುವುದಿಲ್ಲ, ಯಾವ ಪಕ್ಷವೂ ಬಲಹೀನವಾಗುವುದೂ ಇಲ್ಲ. ಇದು ಸಮಗ್ರ ರಾಜ್ಯದ ಜನಾಭಿಪ್ರಾಯ ಅಲ್ಲ, ಇದು ಎರಡು ಸ್ಥಾನಗಳಿಗೆ ನಡೆದ ಚುನಾವಣೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

   ಆರ್. ಆರ್. ನಗರ ಕ್ಷೇತ್ರ

   ಆರ್. ಆರ್. ನಗರ ಕ್ಷೇತ್ರ

   "ನಾನು ಮುಖ್ಯಮಂತ್ರಿಯಾಗಿದ್ದಾಗ ಜನರಿಗೆ ಒಳ್ಳೆಯದಾಗಲಿ, ನಮ್ಮ ಶಾಸಕನೂ ರಾಜಕೀಯವಾಗಿ ಜನಪ್ರಿಯನಾಗಲಿ ಎಂದು ಆರ್. ಆರ್. ನಗರಕ್ಕೆ ಸುಮಾರು ರೂ. 2000 ಕೋಟಿ ಕಾಮಗಾರಿಯನ್ನು ಮಂಜೂರು ಮಾಡಿದ್ದೆ. ಅದರ ಫಲ ನಮ್ಮ ಪಕ್ಷಕ್ಕೆ ಸಿಗಲಿಲ್ಲ, ಅವರಿಗೆ ಸಿಕ್ಕಿದೆ. ಮುನಿರತ್ನ ಅವರು ಪಕ್ಷಾಂತರ ಮಾಡಿದ ದಿನದಿಂದ ಚುನಾವಣಾ ತಯಾರಿ ಪ್ರಾರಂಭಿಸಿದ್ದರು. ನಾವು ನಮ್ಮ ಅಭ್ಯರ್ಥಿಯ ಆಯ್ಕೆಯನ್ನು ಸ್ವಲ್ಪ ತಡವಾಗಿ ಮಾಡಿದೆವು, ಇದರಿಂದಾಗಿ ಪ್ರಚಾರ ವಿಳಂಬವಾಗಿ ಪ್ರಾರಂಭಿಸಬೇಕಾಯಿತು. ಸೋಲಿಗೆ ಇದೂ ಒಂದು ಕಾರಣ ಇರಬಹುದು" ಎಂದು ಹೇಳಿದ್ದಾರೆ.

   ಹಣದ ಹೊಳೆ ಹರಿಸಿದರು

   ಹಣದ ಹೊಳೆ ಹರಿಸಿದರು

   "ಶಿರಾದಲ್ಲಿ ಟಿ.ಬಿ.ಜಯಚಂದ್ರ ಜನತೆಯ ಬದುಕು ಉಳಿಸುವ ನದಿ ನೀರು ಹರಿಸಿದ್ದರು. ಬಿಜೆಪಿಯವರು ಬಂದು ಅಕ್ರಮವಾಗಿ ಸಂಪಾದಿಸಿದ್ದ ಹಣದ ಹೊಳೆ ಹರಿಸಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ. ಜನರ ಸೇವೆ ಮಾಡಿದವರನ್ನು ಜನ ಪ್ರಾಮಾಣಿಕವಾಗಿ ಗುರುತಿಸಿ ಹರಸಬೇಕು" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

   ಜೆಡಿಎಸ್‌ನಿಂದಾಗಿ ಗೆಲುವು

   ಜೆಡಿಎಸ್‌ನಿಂದಾಗಿ ಗೆಲುವು

   "ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ" ಎಂದು ಸಿದ್ದರಾಮಯ್ಯ ವಿಶ್ಲೇಷಣೆ ಮಾಡಿದ್ದಾರೆ.

   English summary
   Sira and Rajarajeshwari Nagar by election result 2020. Opposition leader of Karnataka Siddaramaiah tweet on election result.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X