• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಉಪ ಚುನಾವಣೆ ಫಲಿತಾಂಶ: ಇದು ನೈತಿಕ ಮುನ್ನಡೆ ಅಲ್ಲ!

|

ಬೆಂಗಳೂರು, ನ. 10: ಶಿರಾ ಹಾಗೂ ಆರ್ ಆರ್ ನಗರ ಉಪ ಚುನಾವಣೆಯ ಫಲಿತಾಂಶ ಇನ್ನು ಕೆಲ ಹೊತ್ತಿನಲ್ಲಿ ಅಧಿಕೃತವಾಗಿ ಪ್ರಕಟವಾಗಲಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ಖಚಿತವಾಗಿದೆ. ಆದರೂ ಅಂತಿಮ ಫಲಿತಾಂಶ ಬರಬೇಕಿದೆ. ಈ ಮಧ್ಯೆ ಉಪ ಚುನಾವಣೆಯ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ತಮ್ಮ ಪ್ರತಿಕ್ರಿಯೆ ಕೊಟ್ಟಿದ್ದಾರೆ.

   Sira ByElection Result : ಫಲಿತಾಂಶಕ್ಕೆ ಹೆದರಿ ಹೀಗಾಯಿತು!! | Oneindia Kannada

   ಆರ್. ಆರ್. ನಗರ, ಶಿರಾ ಉಪ ಚುನಾವಣೆ ಫಲಿತಾಂಶ

   ಉಪ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ನೈತಿಕ ಮುನ್ನಡೆ ಅಲ್ಲ ಎಂದು ಈಶ್ವರ್ ಖಂಡ್ರೆ ಅವರು ಉಪ ಚುನಾವಣೆಯ ಫಲಿತಾಂಶದ ಕುರಿತು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ಹಾಗೂ ತುಮಕೂರು ಜಿಲ್ಲೆಯ ಶಿರಾ ಉಪ ಚುನಾವಣೆಯಲ್ಲಿ ಹಣಬಲ-ತೋಳ್ಬಲವನ್ನು ಉಪಯೋಗಿಸಲಾಗಿದೆ. ಜೊತೆಗೆ ಆಡಳಿತ ಯಂತ್ರದ ಸಂಪೂರ್ಣ ದುರುಪಯೋಗವನ್ನು ಆಡಳಿತಾರೂಢ ಬಿಜೆಪಿ ಮಾಡಿಕೊಂಡಿದೆ.

   ನ್ಯಾಯ ಸಮ್ಮತ ಹಾಗೂ ಮುಕ್ತ ಚುನಾವಣೆ ನಡೆಯಲು ಅವಕಾಶವನ್ನೇ ನೀಡಲಿಲ್ಲ. ಹೀಗಾಗಿ ಇದು ನೈತಿಕ ಮುನ್ನಡೆ ಅಲ್ಲ ಎಂದು ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದ ಎರಡು ಉಪ ಚುನಾವಣೆ ಸೇರಿದಂತೆ ಬಿಹಾರ ರಾಜ್ಯದಲ್ಲಿಯೂ ಕಾಂಗ್ರೆಸ್ ಪಕ್ಷ ಗೆಲ್ಲುವುದಾಗಿ ಈಶ್ವರ್‌ ಖಂಡ್ರೆ ಈ ಮ ಒದಲು ಅಭಿಪ್ರಾಯ ವ್ಯಕ್ತಪಡಿಸಿದ್ದರು.

   English summary
   KPCC Working president Eshwar Khandre has given his opinion on the outcome of the by-election as the BJP's lead in the by-elections vote counting is not a moral one. Know more,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X