ಲೋಕಾಯುಕ್ತದಲ್ಲಿ ಭ್ರಷ್ಟಾಚಾರ, ಭಾಸ್ಕರರಾವ್ 7ನೇ ಆರೋಪಿ
ಬೆಂಗಳೂರು, ಆಗಸ್ಟ್ 04 : ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ನ್ಯಾ.ಭಾಸ್ಕರರಾವ್ ಅವರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಲೋಕಾಯುಕ್ತರಾಗಿದ್ದ ಭಾಸ್ಕರರಾವ್ ಅವರು ಈ ಪ್ರಕರಣದಲ್ಲಿ 7ನೇ ಆರೋಪಿ.
ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಬುಧವಾರ 560 ಪುಟಗಳ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್, ಲೋಕಾಯುಕ್ತದ ಜಂಟಿ ಆಯುಕ್ತರಾಗಿದ್ದ ಸಯ್ಯದ್ ರಿಯಾಜ್ ಹಗರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದಾರೆ.[ಲೋಕಾಯುಕ್ತದಲ್ಲಿ ಏನಿದು ಹಗರಣ?]
ಸರ್ಕಾರಿ ಅಧಿಕಾರಿಗಳಿಗೆ ಹಣದ ಬೇಡಿಕೆ ಇಡಲು ಅಶ್ವಿನ್ ರಾವ್ ಅವರು ಲೋಕಾಯುಕ್ತ ಕಚೇರಿ ಮತ್ತು ಭಾಸ್ಕರರಾವ್ ಅವರ ನಿವಾಸವನ್ನು ಬಳಸಿಕೊಂಡಿದ್ದಾರೆ. ಈ ಬಗ್ಗೆ ತಿಳಿದಿದ್ದರೂ ಭಾಸ್ಕರರಾವ್ ಪುತ್ರನನ್ನು ರಕ್ಷಿಸಲು ಮತ್ತು ಸಾಕ್ಷಿಗಳನ್ನು ನಾಶಮಾಡಲು ಯತ್ನಿಸಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.[ಭಾಸ್ಕರರಾವ್ ರಾಜೀನಾಮೆ]
ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ನ್ಯಾ. ಭಾಸ್ಕರರಾವ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಪಾಲರು ಜುಲೈ ತಿಂಗಳಿನಲ್ಲಿ ಒಪ್ಪಿಗೆ ನೀಡಿದ್ದರು. ಹಗರಣಕ್ಕೆ ಸಂಬಂಧಿಸಿದಂತೆ ಅಶ್ವಿನ್ ರಾವ್ ಅವರನ್ನು ಎಸ್‌ಐಟಿ ಬಂಧಿಸಿದ ಬಳಿಕ ಲೋಕಾಯುಕ್ತ ಸ್ಥಾನಕ್ಕೆ ಭಾಸ್ಕರರಾವ್ ರಾಜೀನಾಮೆ ನೀಡಿದ್ದರು....

ಹೇಳಿಕೆಗಳ ದಾಖಲೆ ಸಲ್ಲಿಕೆ
ಭಾಸ್ಕರರಾವ್ ಅವರ ವಿರುದ್ಧ ಸಲ್ಲಿಕೆ ಮಾಡಿರುವ 560 ಪುಟಗಳ ಹೆಚ್ಚುವರಿ ಚಾರ್ಜ್‌ಶೀಟ್‌ನಲ್ಲಿ ಐಎಎಸ್ ಅಧಿಕಾರಿ ಎಂ.ಲಕ್ಷ್ಮೀನಾರಾಯಣ ಮತ್ತು ನಿವೃತ್ತ ನೋಂದಣಿ ಮಹಾನಿರ್ದೇಶಕ (ಐಜಿಆರ್) ಜಿ.ಸಿ.ಪ್ರಕಾಶ್ ಅವರ ಹೇಳಿಕೆಗಳನ್ನು ದಾಖಲು ಮಾಡಲಾಗಿದೆ.

ಭಾಸ್ಕರರಾವ್‌ಗೆ ಮಾಹಿತಿ ನೀಡಿದ್ದರು
ಐಎಎಸ್ ಅಧಿಕಾರಿ ಎಂ.ಲಕ್ಷ್ಮೀನಾರಾಯಣ ಅವರು ಅಶ್ವಿನ್ ರಾವ್ ಸರ್ಕಾರಿ ಅಧಿಕಾರಿಗಳಿಗೆ ಹಣದ ಬೇಡಿಕೆ ಇಡುತ್ತಿದ್ದಾರೆ ಎಂದು ಭಾಸ್ಕರರಾವ್ ಅವರಿಗೆ ಮಾಹಿತಿ ನೀಡಿದ್ದರು. ಜಿ.ಸಿ.ಪ್ರಕಾಶ್ ಅವರು ಲೋಕಾಯುಕ್ತರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದಾಗ ಹಗರಣದಲ್ಲಿ ಆರೋಪಿಯಾಗಿರುವ ಭಾಸ್ಕರ್ ತಾನು ಲೋಕಾಯುಕ್ತರ ಪಿಎ ಎಂದು ಪರಿಚಯ ಮಾಡಿಕೊಂಡಿದ್ದ ಎಂದು ಹೇಳಿಕೆ ಕೊಟ್ಟಿದ್ದಾರೆ.

ಸಂದೇಶಗಳು ರವಾನೆಯಾಗಿದ್ದವು
ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ಅಶ್ವಿನ್ ರಾವ್ ಅವರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾದ ನಂತರವೂ ಭಾಸ್ಕರರಾವ್ ಮತ್ತು ಅಶ್ವಿನ್ ರಾವ್ ನಡುವೆ ಸಂದೇಶಗಳು ರವಾನೆಯಾಗಿವೆ ಎಂದು ಎಸ್‌ಐಟಿ ಚಾರ್ಜ್‌ಶೀಟ್‌ನಲ್ಲಿ ಹೇಳಿದೆ.

ಒಂದೇ ದಿನದಲ್ಲಿ ದಾಖಲೆ ನೀಡಿದ್ದರು
ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಉಪ ಲೋಕಾಯುಕ್ತ ಸುಭಾಷ್ ಬಿ.ಅಡಿ ಅವರು ನೀಡಿದ್ದ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲು ಭಾಸ್ಕರರಾವ್ ಅವರು ಪುತ್ರನಿಗೆ ಒಂದೇ ದಿನದಲ್ಲಿ ದಾಖಲೆಗಳನ್ನು ನೀಡಿದ್ದರು. 2015ರ ಜೂನ್ 29ರಂದು ಅವರು ದಾಖಲೆಗಾಗಿ ಅರ್ಜಿ ಹಾಕಿದ್ದರು. ಜೂನ್ 30ರಂದು ಲೋಕಾಯುಕ್ತ ಕಚೇರಿಯಿಂದ ಅವರಿಗೆ ದಾಖಲೆಗಳನ್ನು ನೀಡಲಾಗಿತ್ತು. ಅಂದೇ ಅವರು ಹೈಕೋರ್ಟ್‌ಗೆ ಅರ್ಜಿ ಹಾಕಿದ್ದರು.

ಮಗನ ಜೊತೆ ಮಾತನಾಡಲು ಪೇದೆ ಫೋನ್ ಬಳಕೆ
ಎಸ್‌ಐಟಿ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಕೇಂದ್ರಿಯ ಮೀಸಲು ಪಡೆದ ಪೇದೆಯೊಬ್ಬರ ಹೇಳಿಕೆಯನ್ನು ದಾಖಲು ಮಾಡಲಾಗಿದೆ. ಲೋಕಾಯುಕ್ತ ಪಿಆರ್‌ಓ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಪೇದೆಯ ಮೊಬೈಲ್ ಪಡೆದು ಭಾಸ್ಕರರಾವ್ ಮಗನ ಜೊತೆ ಮಾತನಾಡಿದ್ದರು. ಸೈಯದ್ ರಿಯಾಜ್ ಅವರು ಈ ಫೋನ್ ಅನ್ನು ಭಾಸ್ಕರರಾವ್ ಅವರಿಗೆ ಕೊಟ್ಟಿದ್ದರು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications