SIT: ವಿಮೆ ವಂಚನೆ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ವಿಮಾ ಕಂಪನಿಗಳಿಗೆ ಸಲ್ಲಿಕೆಯಾಗುವ ವಂಚನೆಪೂರಿತ ಕ್ಲೇಮ್‌ಗಳ ಕುರಿತು ದೂರುಗಳನ್ನು ದಾಖಲಿಸಿಕೊಂಡು ತ್ವರಿತವಾಗಿ ತನಿಖೆ ನಡೆಸಲು ಕರ್ನಾಟಕ ಸರ್ಕಾರ ರಾಜ್ಯ ಮಟ್ಟದಲ್ಲಿ ವಿಶೇಷ ತನಿಖಾ ತಂಡ ( SIT) ರಚಿಸಿದೆ.

ವಿಮಾ ಕಂಪನಿಗಳಿಗೆ ಸಲ್ಲಿಕೆಯಾಗುವ ನಕಲಿ ಹಾಗೂ ವಂಚನೆಪೂರಿತ ಕ್ಲೇಮ್‌ಗಳಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗಾಗಿ ದೇಶದಾದ್ಯಂತ ರಾಜ್ಯ ಮಟ್ಟದಲ್ಲಿ ವಿಶೇಷ ತನಿಖಾ ತಂಡಗಳನ್ನು ರಚಿಸುವಂತೆ ಸುಪ್ರೀಂ ಕೋರ್ಟ್‌ SLP (Civil) No. 5582/2023 ರ ತೀರ್ಪಿನಲ್ಲಿ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಎಸ್‌ಐಟಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.

SIT Government has constituted a state-level Special Investigation Team to Probe Insurance Fraud Cases

SIT: ಹೇಗಿರಲಿದೆ ಎಸ್‌ಐಟಿ ತಂಡ?

ಗೃಹ ಇಲಾಖೆಯ ಸೆಪ್ಟೆಂಬರ್ 22, 2026ರ ಸರ್ಕಾರಿ ಆದೇಶದ ಪ್ರಕಾರ, ಪೊಲೀಸ್ ಮಹಾನಿರೀಕ್ಷಕರ (IGP) ಹುದ್ದೆಯ ಅಧಿಕಾರಿಯನ್ನು ಎಸ್‌ಐಟಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಇದರ ಜೊತೆಗೆ ಸಿಐಡಿಯಿಂದ ನಾಮನಿರ್ದೇಶನಗೊಳ್ಳುವ ಪೊಲೀಸ್ ಅಧೀಕ್ಷಕರು (SP), ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರು ನಾಮನಿರ್ದೇಶನ ಮಾಡುವ ಒಬ್ಬ ಉಪ ಪೊಲೀಸ್ ಅಧೀಕ್ಷಕರು (DySP) ಹಾಗೂ ಮೂವರು ಪೊಲೀಸ್ ಇನ್‌ಸ್ಪೆಕ್ಟರ್‌ಗಳು ತಂಡದ ಸದಸ್ಯರಾಗಿರುತ್ತಾರೆ.

SIT: ರಾಜ್ಯಾದ್ಯಂತ ತನಿಖಾ ವ್ಯಾಪ್ತಿ

ವಿಶೇಷ ತನಿಖಾ ತಂಡಕ್ಕೆ ಕರ್ನಾಟಕ ರಾಜ್ಯಾದ್ಯಂತ ವ್ಯಾಪ್ತಿ ನೀಡಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS), 2023ರ ಸೆಕ್ಷನ್ 2(1)(u) ಅಡಿಯಲ್ಲಿ ಎಸ್‌ಐಟಿಯನ್ನು ಪೊಲೀಸ್ ಠಾಣೆ ಎಂದು ಘೋಷಿಸಲಾಗಿದೆ.

ಇದರೊಂದಿಗೆ ತನಿಖಾ ತಂಡದ ಅಧಿಕಾರಿಗಳಿಗೆ BNSS ಸೆಕ್ಷನ್ 193ರ ಅಡಿಯಲ್ಲಿ ಸಂಬಂಧಪಟ್ಟ ನ್ಯಾಯಾಲಯಗಳಿಗೆ ಅಂತಿಮ ವರದಿ ಸಲ್ಲಿಸುವ ಅಧಿಕಾರವನ್ನೂ ನೀಡಲಾಗಿದೆ.

SIT: ಎಲ್ಲ ವಿಮಾ ವಂಚನೆ ದೂರುಗಳು SITಗೆ

ಈ ಎಸ್‌ಐಟಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ), ಪೊಲೀಸ್ ಪ್ರಧಾನ ಕಚೇರಿ, ಬೆಂಗಳೂರು ಅವರ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಹಿಸಲಿದೆ.

ವಿಮಾ ಕಂಪನಿಗಳಿಂದ ಸ್ವೀಕರಿಸಲಾಗುವ ವಂಚನೆಪೂರಿತ ಕ್ಲೇಮ್‌ಗಳಿಗೆ ಸಂಬಂಧಿಸಿದ ಎಲ್ಲ ದೂರುಗಳನ್ನು ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರು ಎಸ್‌ಐಟಿಗೆ ವರ್ಗಾಯಿಸಲಿದ್ದಾರೆ. ತನಿಖೆ ನಡೆಸಲು ಅಗತ್ಯವಿರುವ ಅಧಿಕಾರಿ ಮತ್ತು ಸಿಬ್ಬಂದಿಯನ್ನೂ ಒದಗಿಸಲಾಗುತ್ತದೆ.

ವಿಮಾ ಕಂಪನಿಗಳಿಂದ ಸ್ವೀಕರಿಸುವ ಎಲ್ಲ ವಂಚನೆ ದೂರುಗಳನ್ನು ಎಸ್‌ಐಟಿ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಯಾವುದೇ ವಿಳಂಬವಿಲ್ಲದೆ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರ ಮೂಲಕ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಬೇಕು. ಪ್ರಕರಣಗಳ ತನಿಖೆಯ ಪ್ರಗತಿಯ ಬಗ್ಗೆಯೂ ನಿಯಮಿತವಾಗಿ ವರದಿ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಇದರಿಂದ ವಿಮಾ ವಂಚನೆಗೆ ಸಂಬಂಧಿಸಿದ ದೂರುಗಳ ತನಿಖೆಗೆ ರಾಜ್ಯದಲ್ಲಿ ಪ್ರತ್ಯೇಕ ವ್ಯವಸ್ಥೆ ರೂಪುಗೊಂಡಂತಾಗಿದ್ದು, ನಕಲಿ ಕ್ಲೇಮ್‌ಗಳು ಮತ್ತು ಇತರ ವಿಮಾ ವಂಚನೆ ಪ್ರಕರಣಗಳ ವಿರುದ್ಧ ತ್ವರಿತ ತನಿಖೆಗೆ ಒತ್ತು ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+