ಗೌರಿ ಹತ್ಯೆಯ ಮಾಹಿತಿಗಳಿದ್ದರೆ ಹಂಚಿಕೊಳ್ಳಿ, ಎಸ್ಐಟಿಯಿಂದ ಆಹ್ವಾನ
ಬೆಂಗಳೂರು, ಸೆಪ್ಟೆಂಬರ್ 7: ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಸಂಬಂಧಿಸಿದ ಯಾವುದೇ ಮಾಹಿತಿಗಳಿದ್ದರೆ ಹಂಚಿಕೊಳ್ಳುವಂತೆ ವಿಶೇಷ ತನಿಖಾ ತಂಡ ಕೋರಿಕೊಂಡಿದೆ.
ಈಗಾಗಲೇ ಗೌರಿ ಲಂಕೇಶ್ ಹತ್ಯೆಯ ತನಿಖೆಗೆ ಗುಪ್ತದಳ ಐಜಿಪಿ ಬಿ.ಕೆ. ಸಿಂಗ್ ನೇತೃತ್ವದ ಅಧಿಕಾರಿಗಳ ವಿಶೇಷ ತನಿಖಾ ತಂಡವನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾರ್ವಜನಿಕರು ಯಾವುದೇ ಮಾಹಿತಿ ನೀಡಲು ಬಯಸಿದಲ್ಲಿ ದೂರವಾಣಿ ಸಂಖ್ಯೆ : 9480800202 ಅಥವಾ ಈ-ಮೇಲ್ ವಿಳಾಸ [email protected]ಸಂಪರ್ಕಿಸಲು ಎಸ್ಐಟಿ ಕೋರಿಕೊಂಡಿದೆ.












Click it and Unblock the Notifications