ಜನಾರ್ದನ ರೆಡ್ಡಿ ಜಾಮೀನು ರದ್ದುಗೊಳಿಸಲು ಎಸ್‌ಐಟಿ ಅರ್ಜಿ

Posted By: Gururaj
Subscribe to Oneindia Kannada

ಬೆಂಗಳೂರು, ನವೆಂಬರ್ 07 : ಮಾಜಿ ಸಚಿವ ಜನಾರ್ದನ ರೆಡ್ಡಿ ಜಾಮೀನು ರದ್ದು ಮಾಡುವಂತೆ ಕೋರಿ ಎಸ್‌ಐಟಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ವಿಚಾರಣೆಗೆ ಜನಾರ್ದನ ರೆಡ್ಡಿ ಹಾಜರಾಗದ ಹಿನ್ನಲೆಯಲ್ಲಿ ಜಾಮೀನು ರದ್ದು ಮಾಡುವಂತೆ ಕೋರಲಾಗಿದೆ. ನ.14ಕ್ಕೆ ವಿಚಾರಣೆ ಮುಂದೂಡಲಾಗಿದೆ.

ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸಲು ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಆದರೆ, ಜನಾರ್ದನ ರೆಡ್ಡಿ ವಿಚಾರಣೆಗೆ ಹಾಜರಾಗುತ್ತಿಲ್ಲ. ಆದ್ದರಿಂದ, ನಿರೀಕ್ಷಣಾ ಜಾಮೀನನ್ನು ರದ್ದು ಮಾಡಿ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ.

ನಾಡಗೀತೆಗೆ ದೃಶ್ಯನಮನ ಸಲ್ಲಿಸಿದ ಗಾಲಿ ಜನಾರ್ದನ ರೆಡ್ಡಿ

SIT moves lokayukta court for cancellation of bail to Janardhana Reddy

ಜನಾರ್ದನ ರೆಡ್ಡಿ ಪರ ವಕೀಲರು ಎಸ್‌ಐಟಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಆದ್ದರಿಂದ, ಲೋಕಾಯುಕ್ತ ಕೋರ್ಟ್ ನ.14ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಒಟ್ಟು 11 ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ನಿರೀಕ್ಷಣಾ ಜಾಮೀನನ್ನು ಪಡೆದಿದ್ದಾರೆ.

ಬಳ್ಳಾರಿಯಲ್ಲಿ ವಿಜಯದಶಮಿ ಆಚರಿಸುವುದಕ್ಕೆ ರೆಡ್ಡಿಗೆ ಕೋರ್ಟ್ ಸಮ್ಮತಿ

ಜನಾರ್ದನ ರೆಡ್ಡಿ ಪರ ವಕೀಲರು ಜಾಮೀನಿನಲ್ಲಿ ಇರುವ ಷರತ್ತು ಸಡಿಸಲಿಸಬೇಕು ಎಂದು ಮನವಿ ಮಾಡಿದ್ದಾರೆ. ವಾರಕ್ಕೊಮ್ಮೆ ಎಸ್‌ಐಟಿ ಮುಂದೆ ಹಾಜರಾಬೇಕು ಎಂಬ ಷರತ್ತನ್ನು ತಿಂಗಳಿಗೊಮ್ಮೆ ಎಂದು ಬದಲಾವಣೆ ಮಾಡಬೇಕು ಎಂದು ಕೋರಿದ್ದಾರೆ. ಈ ಅರ್ಜಿಗೆ ಎಸ್‌ಐಟಿ ಆಕ್ಷೇಪ ವ್ಯಕ್ತಪಡಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Special Investigation Team (SIT) probing the illegal mining in Karnataka moved lokayukta special court for cancellation of bail to Former minister Janardhana Reddy.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ