ಶಾಸಕ ಮುನಿರತ್ನಗೆ ಸದ್ಯದಲ್ಲೇ ಡಿಎನ್‌ಎ ಟೆಸ್ಟ್! ಸಾಬೀತಾದ್ರೆ ಮುಂದೇನು..?
ಅತ್ಯಾಚಾರ ಕೇಸ್‌ನಲ್ಲಿ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ನಿನ್ನೆ ಎಸ್‌ಐಟಿ ಅಧಿಕಾರಿಗಳು ಕೋರ್ಟ್ ಮುಂದೆ ಹಾಜರುಪಡಿಸಿದರು. ಈ ವೇಳೆ ಮುನಿರತ್ನ ಅವರ ಡಿಎನ್‌ಎ ಟೆಸ್ಟ್ ನಡೆಸಲು ಕೋರ್ಟ್‌ನಿಂದ ಅನುಮತಿಯೂ ಕೋರಿದರು. ಇದಕ್ಕೆ ಕೋರ್ಟ್ ಕೂಡ ಸಮ್ಮತಿಸಿದೆ.
ಮತ್ತೊಂದೆಡೆ ಮುನಿರತ್ನ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ನಿನ್ನೆ ಮುನಿರತ್ನ ಅವರ ರಕ್ತದ ಮಾದರಿ ಸಂಗ್ರಹಿಸಲು ವೈದ್ಯರನ್ನು ಕೂಡ ಕೋರ್ಟ್‌ಗೆ ಕರೆತರಲಾಗಿತ್ತು. ಬಳಿಕ ಮುನಿರತ್ನ ಅವರನ್ನು ತಮ್ಮ ಪರ ವಕೀಲರ ಸಮ್ಮುಖದಲ್ಲಿ ರಕ್ತದ ಮಾದರಿ ತೆಗೆದುಕೊಳ್ಳಿ ಎಂದು ಮನವಿ ಮಾಡಿದರು. ಇದಕ್ಕೆ ಕೋರ್ಟ್ ಕೂಡ ಅನುಮತಿ ನೀಡಿದ್ದು, ವಕೀಲರ ಎದುರೇ ಮಾದರಿ ಸಂಗ್ರಹಿಸುವಂತೆ ಹೇಳಿದೆ.

ಈಗಾಗಲೇ ಮುನಿರತ್ನ ಅವರ ವಿರುದ್ಧ ಮಹಿಳೆ ಗಂಭೀರ ಆರೋಪಗಳನ್ನು ಮಾಡಿದ್ದು, ತನ್ನ ಮೇಲೆ ಅತ್ಯಾಚಾರ ಮಾಡಿರುವುದಾಗಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ಅಲ್ಲದೆ ಮುನಿರತ್ನ ಹಲವು ರಾಜಕಾರಣಿಗಳು ಬೆತ್ತಲೆ ವಿಡಿಯೋ ಇಟ್ಟುಕೊಂಡಿರುವುದಾಗಿ ದೂರಿದ್ದಾರೆ. ಎಸ್‌ಐಟಿ ಅಧಿಕಾರಿಗಳೂ ಮುನಿರತ್ನ ಅವರ ಮನೆಯಲ್ಲಿ ಶೋಧ ನಡೆಸಿ, ಅಲ್ಲಿ ಪೆನ್‌ಡ್ರೈವ್ ಹಾಗೂ ಲ್ಯಾಪ್‌ಟಾಪ್ ವಶಕ್ಕೆ ಪಡೆದಿದ್ದರು. ಇದರಲ್ಲಿ ಕೂಡ ಹಲವರ ಅಶ್ಲೀಲ ವಿಡಿಯೋ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಮಹಿಳೆ ತನ್ನ ಮೇಲೆ ಮುನಿರತ್ನ ಹಲವು ಸ್ಥಳಗಳಲ್ಲಿ ಅತ್ಯಾಚಾರ ಎಸಗಿರುವುದಾಗಿ ದೂರಿನಲ್ಲಿ ನೀಡಿದ್ದು, ಇದಕ್ಕೆ ಪೂಕರವಾಗಿ ಡಿಎನ್‌ಎ ಟೆಸ್ಟ್ ನಡೆದರೆ, ಅಲ್ಲಿನ ವರದಿಗೂ ಮಹಿಳೆಯ ಆರೋಪಕ್ಕೂ ಸಾಮ್ಯತೆ ಸಿಕ್ಕರೆ ಮುನಿರತ್ನ ಅವರ ಕೇಸ್ ಮತ್ತೊಂದು ತಿರುವು ಪಡೆದುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ನಿನ್ನೆ ಸಂತ್ರಸ್ತೆಯನ್ನು ಕರೆದೊಯ್ದು ವಿವಿಧ ಸ್ಥಳಗಳಲ್ಲಿ ಮಹಜರು ನಡೆಸಿದ್ದಾರೆ.
ಮುನಿರತ್ನ ತನ್ನ ಮೇಲೆ ಅತ್ಯಾಚಾರ ನಡೆಸಿದ್ದರು ಎಂದು ಮಹಿಳೆ ಹೇಳಿದ್ದ ಜೆ.ಪಿ.ಪಾರ್ಕ್ ಬಳಿಯ ಗೋಡೌನ್‌ಗೆ ನಿನ್ನೆ ಎಸ್‌ಐಟಿ ಅಧಿಕಾರಿಗಳು, ಸಂತ್ರಸ್ತೆಯನ್ನು ಕರೆದೊಯ್ದು ಮಹಜರು ನಡೆಸಿದ್ದಾರೆ. ಮಹಿಳೆಯರನ್ನು ಬಳಸಿಕೊಂಡು ಹಲವರ ಹನಿಟ್ರ್ಯಾಪ್ ಮಾಡಿಸಿದ್ದರು ಎಂದು ಮಹಿಳೆ ತಿಳಿಸಿದ್ದರು. ಈ ಸಂಬಂಧವೂ ಬಾಡಿಗೆ ಮನೆಯೊಂದರಲ್ಲಿ ಅಧಿಕಾರಿಗಳು ಮಹಜರು ನಡೆಸಿ ಕೆಲವು ಸಾಕ್ಷಿಗಳನ್ನು ಸಂಗ್ರಹಿಸಿದ್ದಾರೆ. ಬಳಿಕ ಸಂತ್ರಸ್ತೆಯ ಮೊಬೈಲ್ ಅನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಿದ್ದಾರೆ. ಮುನಿರತ್ನ ಅವರ ಆಪ್ತನನ್ನೂ ಎಸ್‌ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಸಂತ್ರಸ್ತೆ ಹೇಳಿದ್ದೇನು?: ಮಹಿಳೆ ದೂರಿನಲ್ಲಿ ಹೇಳಿರುವಂತೆ ಖಾಸಗಿ ರೆಸಾರ್ಟ್‌ನಲ್ಲಿ ಆಕೆಯ ವಿರುದ್ಧ ಅತ್ಯಾಚಾರ ನಡೆದಿರುವುದಾಗಿ ಡಿವೈಎಸ್‌ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಹೇಳಿಕೆ ನೀಡಿದ್ದರು. ʼಕೋವಿಡ್ ಸಂದರ್ಭದಲ್ಲಿ ಇಬ್ಬರ ನಡುವೆ ಆತ್ಮೀಯತೆ ಹೆಚ್ಚಾಗಿತ್ತು. ವಿಡಿಯೋ ಕಾಲ್ ಮಾಡಿ ನನ್ನೊಂದಿಗೆ ಮಾತನಾಡುತ್ತಿದ್ದರು. ಬಳಿಕ ನನ್ನನ್ನು ನಗ್ನವಾಗಿ ಇರುವಂತೆ ಕರೆ ಮಾಡಿ ಒತ್ತಾಯಿಸುತ್ತಿದ್ದರು. ನಾನು ಅದಕ್ಕೆ ಒಪ್ಪಿರಲಿಲ್ಲ ಎಂದಿದ್ದರು.
ʼನನ್ನನ್ನು ಒಂದು ಸ್ಥಳಕ್ಕೆ ಬರಲು ಹೇಳಿದ್ದರು. ಅಲ್ಲಿ ನನ್ನನ್ನು ತಬ್ಬಿಕೊಳ್ಳಲು ಮುಂದಾದಾಗ ಆಕ್ಷೇಪಿಸಿದ್ದೆ. ಅದಕ್ಕೆ, ಅವರು ಇದೆಲ್ಲ ರಾಜಕೀಯದಲ್ಲಿ ಕಾಮನ್ ಎಂದು ಹೇಳಿ ಬಳಿಕ ನನ್ನ ಮೇಲೆ ಅತ್ಯಾಚಾರ ಮಾಡಿ, ಯಾರಿಗೂ ಹೇಳದಂತೆ ಬೆದರಿಸಿದ್ದರು. ಅತ್ಯಾಚಾರದ ವಿಡಿಯೋ ಇಟ್ಟುಕೊಂಡು ನನ್ನ ಮೇಲೆ ಪದೇ ಪದೇ ಅತ್ಯಾಚಾರ ಮಾಡಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದರು.
ಈ ಹಿಂದೆ ತೋಟಗಾರಿಕೆ ಇಲಾಖೆ ಸಚಿವರಾಗಿದ್ದ ಮುನಿರತ್ನ ಅವರಿಗೆ ನೀಡಲಾಗಿದ್ದ ಸರ್ಕಾರಿ ಕಾರಿನಲ್ಲಿ, ತನ್ನ ವಿಕಾಸೌಧದ ತಮ್ಮ ಕಚೇರಿಯಲ್ಲಿ ಹಾಗೂ ಗೋಡೌನ್‌ನಲ್ಲಿಯೂ ಮುನಿರತ್ನ ನನ್ನನ್ನು ಅತ್ಯಾಚಾರ ಮಾಡಿದ್ದರು' ಎಂಬ ಶಾಕಿಂಗ್ ವಿಚಾರವನ್ನು ಸಂತ್ರಸ್ತೆ ಬಹಿರಂಗಪಡಿಸಿದ್ದರು. ಮಾಗಡಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಪೊಲೀಸ್ ಅಧಿಕಾರಿಗಳ ಅಶ್ಲೀಲ ವಿಡಿಯೋಗಳನ್ನು, ಫೋಟೋಗಳನ್ನು ನನ್ನಿಂದ ಮುನಿರತ್ನ ಸಂಗ್ರಹಿಸಿದ್ದರು. ಅದನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಕೂಡ ಮಾಡಿದ್ದರು ಎಂದು ಆರೋಪಿಸಿದ್ದರು.
ನಾನು ಗೋಡೌನ್‌ಗೆ ಹೋದಾಗ ನನ್ನನ್ನು ಬೆದರಿಸಿ, ಅತ್ಯಾಚಾರ ಮಾಡಿದರು. ಬಳಿಕ ಅದರ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು. ಕಾರ್ಪೊರೇಟರ್ ಪತಿ ವಾಸುದೇವ್ ಬೇರೆ ಹೆಣ್ಣಿನ ಜೊತೆ ಮಲಗಿರುವ ವಿಡಿಯೋ ಮಾಡಿಕೊಡುವಂತೆ ಮುನಿರತ್ನ ಡಿಮ್ಯಾಂಡ್ ಮಾಡಿದ್ದರು ಎಂದು ಅಧಿಕಾರಿಗಳ ಮುಂದೆ ಹೇಳಿದ್ದರು.












Click it and Unblock the Notifications