ʼನಾವು ಹೇಳಿದಂತೆ ಹೇಳಿಕೆ ಕೊಡದಿದ್ದರೆ ನಿಮ್ಮನ್ನು ವೇಶ್ಯಾವಾಟಿಕೆ ಪ್ರಕರಣದಲ್ಲಿ ಸಿಲುಕಿಸುತ್ತೇವೆ ಎಂದು SIT ಬೆದರಿಕೆʼ

ಬೆಂಗಳೂರು,ಮೇ 09: ಕಾಂಗ್ರೆಸ್‌ ಸರಕಾರಕ್ಕೆ ಅನುಕೂಲ ಆಗುವ ರೀತಿಯಲ್ಲಿ ಹೇಳಿಕೆ ನೀಡದಿದ್ದರೆ ನಿಮ್ಮನ್ನು ವೇಶ್ಯಾವಾಟಿಕೆ ಪ್ರಕರಣದಲ್ಲಿ ಸಿಲುಕಿಸುತ್ತೇವೆ ಎಂದು ಎಸ್ಐಟಿ ಅಧಿಕಾರಿಗಳು ನೊಂದ ಮಹಿಳೆಯರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ಸಂತ್ರಸ್ತ ಮಹಿಳೆ ಒಬ್ಬರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ಕೊಟ್ಟ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎನ್ನುವುದು ನನಗೆ ಗೊತ್ತಿದೆ. ಸಚಿವ ಕೃಷ್ಣ ಬೈರೇಗೌಡರೇ.. ಈಗ ಏನು‌ ಹೇಳುತ್ತೀರಿ? ಕಂಡ ಕಂಡವರ ಮನೆ ಬಾಗಿಲಿಗೆ ಹೋಗಿ ಬೆದರಿಕೆ ಹಾಕುತ್ತಿದ್ದೀರಿ. ನಿಮ್ಮ ತನಿಖಾ ತಂಡದ ಅಧಿಕಾರಿಗಳು ನೊಂದ ಮಹಿಳೆಯರಿಗೆ ಬೆದರಿಕೆ ಹಾಕುತ್ತಿರುವುದು ಸುಳ್ಳೇ? ಎಲ್ಲೆಲ್ಲಿ ಏನೆಲ್ಲಾ ನಿಮ್ಮ ಅಧಿಕಾರಿಗಳು ಮಾಡುತ್ತಿದ್ದಾರೆ ಎನ್ನುವ ಮಾಹಿತಿ ನನಗೂ ಬರುತ್ತಿದೆ.

Sit Threatened To Implicate Aggrieved Women In Prostitution Case Hd Kumaraswamy Accused

ನಾವು ಹೇಳಿದ ಹಾಗೆಯೇ ಹೇಳಿಕೆ ಕೊಡದಿದ್ದರೆ ನಿಮ್ಮನ್ನು ವೇಶ್ಯಾವಾಟಿಕೆ ಪ್ರಕರಣದಲ್ಲಿ ಸಿಲುಕಿಸುತ್ತೇವೆ ಎಂದು ನಿಮ್ಮ ಅಧಿಕಾರಿಗಳು ಬೆದರಿಕೆ ಹಾಕುತ್ತಿಲ್ಲವೇ? ನಿಜ ಹೇಳಿ. ಇದೇನಾ ತನಿಖೆ ನಡೆಸುವ ರೀತಿ? ಎಂದು ಪ್ರಶ್ನಿಸಿದರು. ಹಾಸನ ಅಶ್ಲೀಲ ವಿಡಿಯೋಗಳು ಹಾಗೂ ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಬಗ್ಗೆ ಕೃಷ್ಣಭೈರೇಗೌಡರು ಮಾಡಿರುವ ಟೀಕೆಗಳಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ ಅವರು; ಕಿಡ್ನಾಪ್ ಪ್ರಕರಣದಲ್ಲಿ ರಕ್ಷಣೆ ಮಾಡಿರುವ ಆ ಮಹಿಳೆಯನ್ನು ಎಲ್ಲಿ ಇಟ್ಟಿದ್ದೀರಿ ಎಂದು ಪ್ರಶ್ನಿಸಿದರು.

ಕಿಡ್ನಾಪ್ ಆಗಿದ್ದಾರೆನ್ನಲಾದ ಮಹಿಳೆಯನ್ನು ರಕ್ಷಣೆ ಮಾಡಿದ್ದೇವೆ ಎಂದು ಹೇಳಿದ್ದೀರಿ. ಎಲ್ಲಿ ರಕ್ಷಣೆ ಮಾಡಿದಿರಿ ಅವರನ್ನು? ಆ ಮಹಿಳೆಯನ್ನು ಈಗ ಎಲ್ಲಿ ಇರಿಸಿದ್ದೀರಿ? ಇದುವರೆಗೂ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೇಳಿಕೆ ಕೊಡಿಸಲಿಲ್ಲ ಯಾಕೆ? ಎಂದು ಅವರು ಸರಣಿ ಪ್ರಶ್ನೆಗಳನ್ನು ಕೇಳಿದರು.

ಇವತ್ತು ಕೂಡ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ಕರೆದು ಕೊಂಡು ಬಂದಿದ್ದೀರಿ. ಜಾಮೀನು ಪಡೆಯಲು ಹೋದ ವಕೀಲರನ್ನು ಕರೆದುಕೊಂಡು ಬಂದಿದ್ದೀರಾ.. ಕಿಡ್ನಾಪ್ ಗೆ ಒಳಪಟ್ಟರೆನ್ನಲಾದ ಹೆಣ್ಣುಮಗಳನ್ನೂ ಕರೆದುಕೊಂಡು ಬಂದಿದ್ದೀರಿ. ಅವರಿಂದ ಏನು ಹೇಳಿಕೆ ಪಡೆದಿದ್ದೀರಿ? ಎಲ್ಲಿಂದ ಆಕೆಯನ್ನು ಕರೆದುಕೊಂಡು ಬಂದಿದ್ದೀರಿ? ಎಂದು ನೇರ ಪ್ರಶ್ನೆಗಳನ್ನು ಕೇಳಿದರು ಅವರು.

Sit Threatened To Implicate Aggrieved Women In Prostitution Case Hd Kumaraswamy Accused

ಪ್ರಪಂಚದಲ್ಲಿಯೇ ಅತಿ ದೊಡ್ಡ ಲೈಂಗಿಕ ಹಗರಣ ಎಂದು ಹೇಳುತ್ತಿರುವ ಕೃಷ್ಣ ಭೈರೇಗೌಡರಿಗೆ, ಅಷ್ಟು ದೊಡ್ಡದಾದ ಲೈಂಗಿಕ ಹಗರಣದಲ್ಲಿ ನೊಂದ ಮಹಿಳೆಯರ ಅಶ್ಲೀಲ ದೃಶ್ಯಗಳನ್ನು ಪೆನ್‌ ಡ್ರೈವ್‌ ಗಳಲ್ಲಿ ತುಂಬಿಸಿ ಹಾದಿಬೀದಿಯಲ್ಲಿ ಹಂಚಬಾರದು ಎನ್ನುವುದು ಗೊತ್ತಿರಲಿಲ್ಲವೇ? ವಿದೇಶದಲ್ಲಿ ಓದಿಕೊಂಡು ಬಂದ ಅವರಿಗೆ ಇಷ್ಟೂ ಸಾಮಾನ್ಯ ತಿಳಿವಳಿಕೆ ಇಲ್ಲವೇ? ಪೆನ್ ಡ್ರೈವ್ ಗಳನ್ನು ಹಂಚಿದ್ದನ್ನು ಅವರು ಸಮರ್ಥನೆ ಮಾಡುತ್ತಾರೆಯೇ? ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಮಾನಹರಣ, ಶೀಲಹರಣ ಮಾಡಿರುವುದು ನೀವು, ನಿಮ್ಮ ಪಟಾಲಂ. ನಿಮ್ಮ ನಾಯಕರು ಕೃಷ್ಣ ಬೈರೇಗೌಡರೇ. ಡಿಕೆಶಿ ಪಾತ್ರ ಇಲ್ಲದೇ ಇಲ್ಲದಿದ್ದರೆ ದೇವರಾಜೇಗೌಡರು ಸುಖಾಸುಮ್ಮನೆ ಯಾಕೆ ಹೇಳುತ್ತಿದ್ದರು? "ಹಲೋ.. ನಾನು ಡಿ.ಕೆ.ಶಿವಕುಮಾರ್ ಮಾತಾಡ್ತಾ ಇದೀನಿ.. ಹೇಗಿದ್ದೀಯಪ್ಪಾ? ಎಂದು ಕೇಳಿದ್ದು ಯಾರಪ್ಪಾ? ಯಾಕಪ್ಪಾ ಮಾತನಾಡಿದೆ ಡಿ.ಕೆ.ಶಿವಕುಮಾರ್? ಮಾಡುವುದೆಲ್ಲಾ ಮಾಡಿ, ಈಗ ನನ್ನ ಮೇಲೇ ಆರೋಪ ಮಾಡುತ್ತಿದ್ದೀರಿ" ಎಂದು ಕಟುವಾಗಿ ಪ್ರಶ್ನಿಸಿದರು ಅವರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+