"ರಾಜ್ಯ ಸರ್ಕಾರದಿಂದ ಹೆಂಡತಿಯನ್ನು ಮಾರುವ ಪರಿಸ್ಥಿತಿ"

ರಾಜ್ಯ ಸರ್ಕಾರವನ್ನು ಟೀಕಿಸುವ ನೆಪದಲ್ಲಿ ಬಿಜೆಪಿ ಶಾಸಕ ಹಾಗೂ ರಾಜ್ಯ ವಿಧಾನಸಭೆ ಉಪನಾಯಕ ಅರವಿಂದ ಬೆಲ್ಲದ್ ಅವರು ವಿವಾದಾತ್ಮಕ ಹೇಳಿಕೆಯೊಂದನ್ನು ಕೊಟ್ಟಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳದ ಆರೋಪಗಳು ಕೇಳಿ ಬರುತ್ತಿವೆ. ಈ ರೀತಿ ಇರುವಾಗಲೇ ಅರವಿಂದ ಬೆಲ್ಲದ್ ಅವರು ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಟೀಕೆ ಮಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆಯೊಂದನ್ನು ಕೊಟ್ಟಿದ್ದಾರೆ. ಕಿರುಕುಳ ಹೆಚ್ಚಾದರೆ ಅವರ ಹೆಂಡತಿಯರನ್ನು ಮಾರುವ ಪರಿಸ್ಥಿತಿಯನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ತಂದಿದೆ ಎನ್ನುವ ವಿವಾದಾತ್ಮಕ ಹೇಳಿಕೆಯನ್ನು ಅವರು ಕೊಟ್ಟಿದ್ದಾರೆ.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಹಾಗೂ ಕಾನೂನು ಸುವ್ಯವಸ್ಥೆ ಸೇರಿದಂತೆ ವಿವಿಧ ವಿಷಯಗಳನ್ನು ಮಾತನಾಡುವಾಗ ಅವರು ಈ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೈಕ್ರೋ ಫೈನಾನ್ಸ್‌ನಿಂದ ಜನ ಊರು ಬಿಡುವುದು ಹಾಗೂ ಆತ್ಮಹತ್ಯೆಯಂತಹ ಗಂಭೀರ ಪ್ರಕರಣಗಳು ವರದಿಯಾಗುತ್ತಿವೆ. ಆದರೆ, ಈ ರೀತಿ ಕಿರುಕುಳ ಹೆಚ್ಚಾದಾಗ ಅವರ ಹೆಂಡತಿಯರನ್ನು ಮಾರುವ ಸ್ಥಿತಿಯನ್ನು ಸರ್ಕಾರ ತಂದಿದೆ ಎಂದು ಅರವಿಂದ್‌ ಬೆಲ್ಲದ್‌ ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

Situation of wife selling by the Karnataka government Arvind Bellad

ಮೀಟರ್ ಬಡ್ಡಿ, ಡ್ರಗ್ಸ್‌ ಹಾಗೂಇಸ್ಪೀಟ್ ಸೇರಿದಂತೆ ವಿವಿಧ ವಿಷಯಗಳು ಒಂದಕ್ಕೊಂದು ಕನೆಕ್ಟ್‌ ಆಗಿವೆ. ಕಾನೂನು ಸುವ್ಯವಸ್ಥೆ ಕುಸಿದಾಗ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ. ಪೊಲೀಸರಿಗೆ ಕೋಟಿಗಟ್ಟಲೆ ದುಡ್ಡು ತೆಗೆದುಕೊಂಡು ಪೋಸ್ಟಿಂಗ್‌ ಕೊಡುತ್ತಿದ್ದಾರೆ. ಅವರು ಕೊಟ್ಟ ಹಣವನ್ನು ಕಳ್ಳ ಮಾರ್ಗದಲ್ಲಿ ಹಿಂಪಡೆಯಲು ಶುರು ಮಾಡುತ್ತಾರೆ. ಪೊಲೀಸ್ ಠಾಣೆಗಳಲ್ಲೇ ರಕ್ಷಣೆ ಸಿಗುತ್ತಿಲ್ಲ. ಇದಕ್ಕೆಲ್ಲ ‌ಮೂಲ ಕಾರಣ ಭ್ರಷ್ಟಾಚಾರ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ‌ ಮೀಟಿಂಗ್ ಮಾಡುವುದರಿಂದ ಇದು ನಿಲ್ಲುವುದಿಲ್ಲ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಮೊದಲು ಅದನ್ನು ರಾಜ್ಯ ಸರ್ಕಾರ ನಿಲ್ಲಿಸಬೇಕು. ಈಗ ಹುಬ್ಬಳ್ಳಿಯಲ್ಲಿ ಪ್ರತಿಯೊಂದು ಕಾಲೇಜ್‌ನಲ್ಲೂ ಡ್ರಗ್ಸ್ ಸಿಗುತ್ತಿದೆ.ಚಾಕು ಚೂರಿತ ಹೆಚ್ಚಾಗಿವೆ ಇದಕ್ಕೆ ಸರ್ಕಾರ ಬ್ರೇಕ್‌ ಹಾಕಬೇಕು ಅಂತ ಹೇಳಿದ್ದಾರೆ.

ಮೈಕ್ರೋ ಫೈನಾನ್ಸ್‌ ಬಂದ್‌ ಆಗಬೇಕು

ದೇಶಾದ್ಯಂತ ಮೈಕ್ರೋ ಫೈನಾನ್ಸ್‌ಗಳು ಬಂದ್ ಆಗಬೇಕು ಎಂದು ಸಚಿವ ಸಂತೋಷ ಲಾಡ್ ಅವರು ಹೇಳಿದ್ದಾರೆ. ಮೈಕ್ರೋ ಫೈನಾನ್ಸ್‌ ಸಮಸ್ಯೆ ಕರ್ನಾಟಕದಲ್ಲಿ ಮಾತ್ರವಲ್ಲ ದೇಶದಲ್ಲೇ ಇದೆ. ಹೀಗಾಗಿ ದೇಶಾದ್ಯಂತ ಮೈಕ್ರೋ ಫೈನಾನ್ಸ್‌ಗಳು ಬಂದ್ ಆಗಬೇಕು ಎಂದು ಆಗ್ರಹಿಸಿದ್ದಾರೆ. ಬಹುರಾಷ್ಟ್ರೀಯ ಕಂಪನಿಗಳು ಹಾಗೂ ರಾಷ್ಟ್ರೀಯ ಬ್ಯಾಂಕ್‌ಗಳು ಹಣ ಸಂಗ್ರಹಿಸಿ ಸ್ವಸಹಾಯ ಸಂಘಗಳ ಮೂಲಕ ಸಾಲ ನೀಡುತ್ತಾರೆ. ಇದರಿಂದಾಗಿ ಜನರಿಗೆ ಬಡ್ಡಿ ಹೊರೆ ಜಾಸ್ತಿಯಾಗುತ್ತಿದೆ. ಈ ನಿಟ್ಟಿನಲ್ಲಿ ಮೈಕ್ರೋ ಫೈನಾನ್ಸ್ ಸಾಧಕ ಬಾಧಕಗಳನ್ನು ನೋಡಬೇಕು. ಸರ್ಕಾರವು ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದಿದ್ದಾರೆ.

ವಿಜಯಪುರದಲ್ಲಿ ಇಟ್ಟಿಗೆ ಬಟ್ಟಿ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಅವರು, ಆ ರೀತಿಯಾಗಿ ಅಮಾನವೀಯವಾಗಿ ನಡೆದುಕೊಳ್ಳುವುದು ಸರಿಯಲ್ಲ. ಈಗಾಗಲೇ ಆರೋಪಿಗಳನ್ನು ಬಂಧಿಸಿ ಕ್ರಮಕೈಗೊಳ್ಳಲಾಗಿದೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+