ಉತ್ತರ ಕನ್ನಡ : ಲಾರಿ-ಕಾರಿನ ನಡುವೆ ಡಿಕ್ಕಿ, 6 ಸಾವು
ಉತ್ತರ ಕನ್ನಡ, ಡಿಸೆಂಬರ್ 01 : ಟಿಪ್ಪರ್ ಲಾರಿ ಮತ್ತು ಮಾರುತಿ ಓಮ್ನಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, 6 ಜನರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅಂಕೋಲಾ ಸಮೀಪ ನಡೆದಿದೆ. ಅಪಘಾತದಲ್ಲಿ ಒಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಂಕೋಲಾ ಸಮೀಪದ ಬೆಳಸೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 17ರಲ್ಲಿ ಮಂಗಳವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಮೃತಪಟ್ಟವರನ್ನು ಹಾವೇರಿ ಜಿಲ್ಲೆಯ ಗುತ್ತಲ ಗ್ರಾಮದವರು ಎಂದು ಗುರುತಿಸಲಾಗಿದೆ. [ಬೆಳಗಾವಿ : ಅಪಘಾತದಲ್ಲಿ ಬಿಜೆಪಿ ಮುಖಂಡ ಸಾವು]

ಮಾರುತಿ ಓಮ್ನಿ ಕಾರಿನಲ್ಲಿ ಕಾರವಾರದಿಂದ ಹಾವೇರಿಗೆ ಎಲ್ಲರೂ ವಾಪಸ್ ಆಗುವಾಗ ಈ ಅಪಘಾತ ನಡೆದಿದೆ. ಕಾರಿನಲ್ಲಿದ್ದ 6 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದು ಅಂಕೋಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತದ ನಂತರ ಟಿಪ್ಪರ್ ಲಾರಿಯ ಚಾಲಕ ಪರಾರಿಯಾಗಿದ್ದಾನೆ. ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಲಾರಿ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.












Click it and Unblock the Notifications