ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

6 ಲಕ್ಷ ರಾಜ್ಯ ಸರ್ಕಾರಿ ನೌಕರರ ವೇತನ ಗಣನೀಯ ಹೆಚ್ಚಳ ?

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಮೇ 4: ಶೀಘ್ರದಲ್ಲೇ ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದು, ಇದರಿಂದ ಸುಮಾರು 6 ಲಕ್ಷ ಸರ್ಕಾರಿ ನೌಕರರ ವೇತನ ಗಣನೀಯವಾಗಿ ಹೆಚ್ಚಳವಾಗುವ ನಿರೀಕ್ಷೆಯಿದೆ.

ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಸಮಿತಿಯೊಂದನ್ನು ರಚಿಸಿ, ಆ ಸಮಿತಿಯ ಶಿಫಾರಸಿನನ್ವಯ ನೌಕರರ ವೇತನ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿರುವುದರಿಂದ ರಾಜ್ಯ ಸರ್ಕಾರಿ ನೌಕರರಲ್ಲಿ ಹೊಸ ಭರವಸೆ ಮೂಡಿಸಿದೆ.

Six lakh Karnataka government employees to get big salary hike

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಇದೇ ತಿಂಗಳ 4ರಂದು ರಾಜ್ಯಾದ್ಯಂತ ಮುಷ್ಕರ ನಡೆಸಲು ರಾಜ್ಯ ಸರ್ಕಾರಿ ನೌಕರರ ಸಂಘ ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವೇತನ ಹೆಚ್ಚಳದ ಭರವಸೆ ನೀಡಿದ್ದಾರೆನ್ನಲಾಗಿದೆ. ಸರ್ಕಾರಿ ನೌಕರರು ನಡೆಸಲು ಉದ್ದೇಶಿಸಿರುವ ಮುಷ್ಕರಕ್ಕೆ ನಿವೃತ್ತ ಸರ್ಕಾರಿ ನೌಕರರ ಬೆಂಬಲವೂ ಸಿಕ್ಕಿತ್ತು.

ಒಂದು ವೇಳೆ ಸಮಿತಿಯು ವೇತನ ಹೆಚ್ಚಳಕ್ಕೆ ಶಿಫಾರಸು ಮಾಡಿದರೆ ಇದರಿಂದ ಕರ್ನಾಟಕ ಸರಕಾರಿ ಆರು ಲಕ್ಷ ನಿವೃತ್ತ ನೌಕರರು ಹಾಗೂ ಉದ್ಯೋಗಿಗಳಿಗೆ ಲಾಭವಾಗಲಿದೆ. ವೇತನ ಹೆಚ್ಚಳ ಪ್ರಸ್ತಾಪಕ್ಕೆ ಈಗಾಗಲೇ ಆರ್ಥಿಕ ಇಲಾಖೆಯ ಒಪ್ಪಿಗೆ ಸಿಕ್ಕಿದೆ.

ಅಧಿಕೃತ ಪ್ರಕಟಣೆ ಹೊರಬಿದ್ದ ನಂತರ ಏಪ್ರಿಲ್ 1, 2017ರಿಂದ ಅನ್ವಯಿಸುವಂತೆ ಶೇ 30ರಷ್ಟು ಹಣ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಒಕ್ಕೂಟವು ಮನವಿ ಸಲ್ಲಿಸಲು ನಿರ್ಧರಿಸಿದೆ.

English summary
There is good news for the employees of the Karnataka government. The employees who have called of their strike schedule for Thursday have been assured that a panel will examine a major salary hike for them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X