ಪತ್ರಿಕೋದ್ಯಮ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಿದ ಸರ್ಕಾರ
ಬೆಂಗಳೂರು, ಫೆಬ್ರವರಿ 11 : ಪ್ರತಿಷ್ಠಿತ ಟೀಯೆಸ್ಸಾರ್ ಮತ್ತು ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹರನ್ನು ಆಯ್ಕೆ ಮಾಡಲು ಕರ್ನಾಟಕ ಸರ್ಕಾರ 6 ಸದಸ್ಯರ ಸಮಿತಿಯನ್ನು ರಚನೆ ಮಾಡಿದೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಟೀಯೆಸ್ಸಾರ್ ಮತ್ತು ಮೊಹರೆ ಹಣಮಂತರಾಯ ಪ್ರಶಸ್ತಿಯನ್ನು ನೀಡಲಾಗುತ್ತದೆ. 2017 ಮತ್ತು 2018ನೇ ಸಾಲಿನ ಪ್ರಶಸ್ತಿಗಳ ಆಯ್ಕೆಗೆ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ 6 ಸದಸ್ಯರ ಸಮಿತಿಯನ್ನು ರಚನೆ ಮಾಡಲಾಗಿದೆ. ಹಿರಿಯ ಪತ್ರಕರ್ತರಾದ ಗಂಗಾಧರ ಮೊದಲಿಯಾರ್, ಎಚ್.ಆರ್.ಶ್ರೀಶ, ಬೆಲಗೂರು ಸಮೀವುಲ್ಲಾ, ಪಿ.ತ್ಯಾಗರಾಜ್ ಅವರು ಸಮಿತಿಯ ಸದಸ್ಯರಾಗಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರು ಸಮಿತಿಯ ಕಾರ್ಯದರ್ಶಿಯಾಗಿದ್ದಾರೆ.
ಇಲಾಖೆಯ ನಿರ್ದೇಶಕ ಎಂ. ರವಿಕುಮಾರ್ ಅವರು ಈ ಪ್ರಶಸ್ತಿಗಳಿಗೆ ಅರ್ಹರ ಹೆಸರುಗಳನ್ನು ಸಲಹೆ ನೀಡುವಂತೆ ಮಾಧ್ಯಮ ಸಂಘಟನೆಗಳಲ್ಲಿ ಮನವಿ ಮಾಡಿದ್ದಾರೆ.
ಹಿರಿಯ ಪತ್ರಕರ್ತರ ಗೆಳೆಯರೂ ಕೂಡಾ ಪ್ರಶಸ್ತಿಗಳಿಗಾಗಿ ಅರ್ಹ ವ್ಯಕ್ತಿಗಳ ಹೆಸರು ಮತ್ತು ಅವರ ವ್ಯಕ್ತಿಚಿತ್ರಗಳನ್ನು ಇಲಾಖಾ ನಿರ್ದೇಶಕರಿಗೆ ನೇರವಾಗಿ ಕಳುಹಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.












Click it and Unblock the Notifications