Naxals Surrender: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾದ 6 ನಕ್ಸಲರು
ಬೆಂಗಳೂರು, ಜನವರಿ 08: ಕರ್ನಾಟಕದ ನಕ್ಸಲ್ ಚಳವಳಿಯಲ್ಲಿ ಜನವರಿ 8, 2025 ಮಹತ್ವದ ದಿನವಾಗಿದೆ. ಬುಧವಾರ 6 ಮಂದಿ ನಕ್ಸಲರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಸರ್ಕಾರದ ಪ್ಯಾಕೇಜ್ ಒಪ್ಪಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾಗಿದ್ದಾರೆ. ಪೊಲೀಸರು ಶರಣಾದ ನಕ್ಸಲರನ್ನು ತಮ್ಮ ವಶಕ್ಕೆ ಪಡೆಯಲಿದ್ದು, ಕೋರ್ಟ್‌ಗೆ ಹಾಜರುಪಡಿಸಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಿದ್ದಾರೆ.
ಬುಧವಾರ ಸಂಜೆ 6 ಮಂದಿನ ನಕ್ಸಲರು ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಶರಣಾದರು.

ನಕ್ಸಲರು ಕಳೆದ ಮೂರು ದಿನಗಳಿಂದ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ಶರಣಾಗುವ ಕುರಿತು ಮಾತುಕತೆಯನ್ನು ಚಿಕ್ಕಮಗಳೂರು ಕಾಡಿನಲ್ಲಿ ನಡೆಸುತ್ತಿದ್ದರು. ಬುಧವಾರ ಅವರುಗಳು ಶರಣಾಗಲು ದಿನಾಂಕ ನಿಗದಿ ಮಾಡಲಾಯಿತು. ಮೊದಲು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಶರಣಾಗಲಿದ್ದಾರೆ ಎಂಬ ಮಾಹಿತಿ ಇತ್ತು.
ಆದರೆ ಬುಧವಾರ ಬೆಳಗ್ಗೆ ಚಿಕ್ಕಮಗಳೂರಿನಿಂದ ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ಪೊಲೀಸರ ಭದ್ರತೆಯಲ್ಲಿ ಬೆಂಗಳೂರು ನಗರಕ್ಕೆ ಆಗಮಿಸಿದ ನಕ್ಸಲರು, ಮುಖ್ಯಮಂತ್ರಿಗಳ ಮುಂದೆ ಶರಣಾಗಿದ್ದಾರೆ. ಪೊಲೀಸರು ಅವರನ್ನು ವಶಕ್ಕೆ ಪಡೆಯಲಿದ್ದು, ಮುಂದಿನ ಪ್ರಕ್ರಿಯೆ ಕೈಗೊಳ್ಳಲಿದ್ದಾರೆ. ನಕ್ಸಲರನ್ನು ಮೊದಲು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕೋರ್ಟ್ ಮುಂದೆ ಹಾಜರುಪಡಿಸಬೇಕಿದೆ.
ಶರಣಾದ ನಕ್ಸಲರು: ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಬುಧವಾರ ಸಂಜೆ ನಕ್ಸಲರಾದ ಮುಂಡುಗಾರು ಲತಾ, ವನಜಾಕ್ಷಿ, ಸುಂದರಿ, ಮಾರಪ್ಪ ಅರೋಳಿ, ವಸಂತ, ಎನ್. ಜೀಶಾ ಶರಣಾಗಿದ್ದಾರೆ.
ಶರಣಾದ ನಕ್ಸಲರ ಪೈಕಿ ಮುಂಡಗಾರು ಲತಾ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮುಂಡಗಾರು ಗ್ರಾಮದವರು. ಹಲವು ವರ್ಷಗಳಿಂದ ಇವರು ಕರ್ನಾಟಕದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದು, ಅನೇಕ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲದ ಸುಂದರಿ, ರಾಯಚೂರು ಜಿಲ್ಲೆಯ ಮಾರಪ್ಪ ಅರೋಳಿ, ತಮಿಳುನಾಡಿನ ವಸಂತ ಮತ್ತು ಕೇರಳದ ಎನ್. ಜೀಶಾ ಇಂದು ಶರಣಾಗಿದ್ದಾರೆ.
ಡಿಸೆಂಬರ್ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಬಯಸುವ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಹಲವಾರು ಮುಖಂಡರು ಭೇಟಿ ಮಾಡಿದ್ದರು.
ಈ ಭೇಟಿಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಮುಖ್ಯಮಂತ್ರಿಗಳು, 'ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ. ಆದರೆ ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾಗಿದ್ದರೆ, ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ' ಎಂದು ಹೇಳಿದ್ದರು.
'ನಕ್ಸಲೀಯ ಚಟುವಟಿಕೆಗಳು ಕರ್ನಾಟಕದಲ್ಲಿ ಎಂದೂ ನೆರೆಯ ರಾಜ್ಯಗಳಂತೆ ವಿಪರೀತ ಪ್ರಮಾಣದಲ್ಲಿ ನಡೆದಿಲ್ಲ. ಆದರೆ, ಮಲೆನಾಡಿನಲ್ಲಿ ಎರಡು ದಶಕಗಳಿಂದ ಆಗಾಗ್ಗೆ ನಕ್ಸಲೀಯ ಚಟುವಟಿಕೆಗಳು ಕಾಣುತ್ತಲಿವೆ ಮತ್ತು ಆ ಕಾರಣದಿಂದ ಹಿಂಸೆ ಹಾಗೂ ಸಾವು-ನೋವುಗಳು ಸಂಭವಿಸಿವೆ. ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ. ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ತೆತ್ತುಕೊಳ್ಳುತ್ತಾರೆ, ಇತರರ ಜೀವಹಾನಿಗೂ ಕಾರಣವಾಗುತ್ತಾರೆ. ಇದು ನೋವಿನ ವಿಚಾರವಾದರೂ, ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೇ ಕೂರುವುದು ಸಾಧ್ಯವಿಲ್ಲ' ಎಂದು ತಿಳಿಸಿದ್ದರು.
'ಕರ್ನಾಟಕದ ಎಲ್ಲ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ. ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮುಂದಾದ್ದಲ್ಲಿ ಶರಣಾಗತಿ ಕುರಿತು ಈಗಾಗಲೇ ಸರ್ಕಾರವು ನೀತಿಯನ್ನು ರೂಪಿಸಿದ್ದು, ಈ ನೀತಿಯನ್ನು ಸರಳೀಕರಣಗೊಳಿಸಿ, ಸಮಪರ್ಕವಾಗಿ ಜಾರಿ ಮಾಡಲಾಗುವುದೆಂದು ಭರವಸೆ ನೀಡುತ್ತೇನೆ. ನಕ್ಸಲೀಯರ ಶರಣಾಗತಿ ನೀತಿಯನ್ವಯ ಹಂತ ಹಂತವಾಗಿ ಆರ್ಥಿಕ ನೆರವು ನೀಡಲಾಗುವುದು ಹಾಗೂ ಆಯುಧಗಳನ್ನು ಸರ್ಕಾರಕ್ಕೆ ಅದ್ಯಾರ್ಪಣೆ ಮಾಡುವ ನಕ್ಸಲೀಯರಿಗೆ ಪ್ರೋತ್ಸಾಹ ಧನ, ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು' ಎಂದು ಭರವಸೆ ನೀಡಿದ್ದರು.
'ಅವರ ಮೇಲಿನ ಮೊಕದ್ದಮೆ/ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡುತ್ತೇನೆ ಹಾಗೂ ಅವರಿಗೆ ಕಾನೂನಿನ ನೆರವು ಸಹ ನೀಡಲಾಗುವುದು. ಈಗಾಗಲೇ ಶರಣಾಗತರಾದ ನಕ್ಸಲೀಯರ ಅಗತ್ಯಗಳನ್ನು ಸಹ ಗುರುತಿಸಿ ಅವರಿಗೂ ಸಹ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ. ಅದೇ ಸಂದರ್ಭದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ ಮತ್ತು ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವ ಯಾರೇ ಆದರೂ, ಅವರ ವಿರುದ್ಧ ಕಠಿಣವಾದ ಕಾನೂನು ಕ್ರಮವನ್ನು ನಮ್ಮ ಸರ್ಕಾರವು ತೆಗೆದುಕೊಳ್ಳಲಿದೆ ಎಂದೂ ಸ್ಪಷ್ಟಪಡಿಸಬಯಸುತ್ತೇನೆ' ಎಂದು ಹೇಳಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications