Naxal Surrender: ಬಿಜೆಪಿ ಶಾಸಕ ಸುನಿಲ್ ಕುಮಾರ್ ಏಕೆ ಬೆಚ್ಚಿಬಿದ್ದಿಲ್ಲ, ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು, ಜನವರಿ 08: ಕರ್ನಾಟಕದ ಮುಖ್ಯಂಮತ್ರಿ ಸಿದ್ದರಾಮಯ್ಯ ಮುಂದೆ ಬುಧವಾರ 6 ಮಂದಿ ನಕ್ಸಲರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ, ಸರ್ಕಾರದ ಪ್ಯಾಕೇಜ್ ಒಪ್ಪಿಕೊಂಡು ಶರಣಾಗಿದ್ದಾರೆ. ಆದರೆ ಈ ಬೆಳವಣಿಗೆ ಕುರಿತು ಪ್ರತಿಪಕ್ಷ ಬಿಜೆಪಿಯ ಹಲವು ನಾಯಕರು ಟೀಕೆಗಳನ್ನು ಮಾಡುತ್ತಿದ್ದಾರೆ. ಪೊಲೀಸರ ಮುಂದೆ, ಜಿಲ್ಲಾಧಿಕಾರಿಗಳ ಮುಂದೆ ನಕ್ಸಲರು ಶರಣಾಗಬೇಕು. ಮುಖ್ಯಮಂತ್ರಿಗಳ ಮುಂದೆ, ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಶರಣಾಗುವುದು ಯಾವ ಬೆಳವಣಿಗೆ? ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ. ಅಲ್ಲದೇ ನಕ್ಸಲರ ಶರಣಾಗತಿಗೆ ಪ್ಯಾಕೇಜ್ ಘೋಷಣೆ ಮಾಡಿದ್ದನ್ನು ಟೀಕಿಸಿದ್ದಾರೆ.
ಕಾರ್ಕಳದ ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ಸಾಮಾಜಿಕ ಜಾಲತಾಣದ ಪೋಸ್ಟ್‌ಗೆ, ಬಿಜೆಪಿ ನಾಯಕರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. '6 ನಕ್ಸಲರು ಶಸ್ತ್ರ ತ್ಯಜಿಸಿ, ಶರಣಾಗತರಾಗಿ ಸಂವಿಧಾನದ ಆಶಯಗಳಂತೆ ಬಾಳುವ ಪ್ರತಿಜ್ಞೆ ಸ್ವೀಕರಿಸುವ ಮೂಲಕ ರಾಜ್ಯವು ನಕ್ಸಲ್ ಮುಕ್ತವಾಗಿದೆ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸುನೀಲ್ ಕುಮಾರ್ ಪೋಸ್ಟ್ ಹಾಕಿದ್ದು ಏನು?: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಬುಧವಾರ ಬೆಳಗ್ಗೆ ಪೋಸ್ಟ್ ಹಾಕಿದ್ದು, 'ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ? ಎಂಬುದನ್ನು ಸ್ಪಷ್ಟಪಡಿಸಬೇಕು' ಎಂದು ಹೇಳಿದ್ದರು.
'ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ, ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ! ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ? ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ' ಎಂದು ಟೀಕಿಸಿದ್ದರು.
ಸಿದ್ದರಾಮಯ್ಯ ತಿರುಗೇಟು ಏನು?; ಸುನಿಲ್ ಕುಮಾರ್ ಪೋಸ್ಟ್‌ಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, 'ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಕರ್ನಾಟಕದ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಛತ್ತೀಸ್‌ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಪ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ?, ಶಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್ ಕುಮಾರ್ ಅವರಿಗೆ ಇದೆಯೇ?' ಎಂದು ಪ್ರಶ್ನೆ ಮಾಡಿದ್ದಾರೆ.
'ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಶರಣಾದ ನಕ್ಸಲ್ ದಂಪತಿಗೆ ಅಲ್ಲಿನ ಬಿಜೆಪಿ ಮಹಾರಾಷ್ಟ್ರ ಸರ್ಕಾರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು 41 ಲಕ್ಷ ರೂಪಾಯಿಗಳ ನೆರವು ನೀಡಿರುವುದು ಶಾಸಕ ಸುನೀಲ್ ಕುಮಾರ್ ಅವರಿಗೆ ಗೊತ್ತಿರಲಿಲ್ಲವೇ? ಈ ನೆರವನ್ನು ಯಾವ ಮಾನದಂಡದಲ್ಲಿ ನೀಡಿದ್ದೀರಿ ಎಂದು ಕೇಳುವ ಧೈರ್ಯ ಸುನೀಲ್ ಕುಮಾರ್ ಅವರಿಗೆ ಇದೆಯೇ?' ಎಂದು ಕೇಳಿದ್ದಾರೆ.
'ಶರಣಾಗಿರುವ ಈ ನಕ್ಸಲೀಯರ ಅನುಸರಿಸಿದ ಹಿಂಸಾಮಾರ್ಗದ ಬಗ್ಗೆ ನಮಗೆಲ್ಲರಿಗೂ ವಿರೋಧವಿದೆ. ಆದರೆ ಇವರಲ್ಲಿ ಯಾರೂ ಜನರ ತೆರಿಗೆ ಹಣವನ್ನು ನುಂಗಿದ ಭ್ರಷ್ಟರೂ ಅಲ್ಲ, ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿಯೂ ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ. ಲಾಠಿ-ದೊಣ್ಣೆ, ಕತ್ತಿ-ತ್ರಿಶೂಲಗಳನ್ನು ನೀಡಿ ಅಮಾಯಕರನ್ನು ಹಿಂಸಾಮಾರ್ಗಕ್ಕೆ ಇಳಿಸಿ, ರಾಜಕೀಯ ಲಾಭ ಗಳಿಸುವ ಕುತಂತ್ರದ ರಾಜಕಾರಣ ನಮ್ಮದ್ದಲ್ಲ. ದಾರಿ ತಪ್ಪಿ ಹಿಂಸೆಯ ಮಾರ್ಗ ಹಿಡಿದವರ ಮನವೊಲಿಸಿ, ಸಮಾಜದ ಮುಖ್ಯವಾಹಿನಿಗೆ ಸೇರಿಸಿ, ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತನೆ ಮಾಡುವುದು ಒಂದು ಸರ್ಕಾರದ ಕರ್ತವ್ಯವಾಗಿದೆ. ಇದೇ ಕರ್ತವ್ಯವನ್ನು ನಮ್ಮ ಸರ್ಕಾರ ಪಾಲಿಸುತ್ತಾ ಬಂದಿದೆ' ಎಂದು ಹೇಳಿದ್ದಾರೆ.
ನಕ್ಸಲರ ಶರಣಾಗತಿ ಬಳಿಕ ಮಾತನಾಡಿದ್ದ ಸಿದ್ದರಾಮಯ್ಯ, 'ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು. ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್ ವಸತಿಗೆ ಸರ್ಕಾರ ನೆರವು ಒದಗಿಸಿದೆ' ಎಂದು ತಿಳಿಸಿದ್ದರು.
'ಶಾಂತಿಗಾಗಿ ನಾಗರಿಕ ವೇದಿಕೆಯವರು ನನ್ನನ್ನು ಭೇಟಿ ಮಾಡಿ ನಕ್ಸಲಿಯರ ಮನವೊಲಿಸುವ ಬಗ್ಗೆ ತಿಳಿಸಿದ್ದರು. ಆ ಸಂದರ್ಭದಲ್ಲಿ ನಕ್ಸಲಿಸಂ ತ್ಯಜಿಸಿ ಮುಖ್ಯವಾಹಿನಿಗೆ ಬರಲು ಸರಕಾರ ಎಲ್ಲಾ ನೆರವು ನೀಡಲಿದೆ ಎಂದು ಹೇಳಿದ್ದೆ. ನಾವು ಕರ್ನಾಟಕದಲ್ಲಿ ನಕ್ಸಲಿಸಂ ಕೊನೆಗಾಣಿಸಲು, ಅವರ ಬೇಡಿಕೆಗೆ ಸ್ಪಂದಿಸಲು ಏನೆಲ್ಲಾ ಕಾರ್ಯಕ್ರಮ ಬೇಕೋ ಅದನ್ನು ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ. ಶಸ್ತ್ರಾಸ್ತ್ರದ ಮೂಲಕ ಹೋರಾಟ ಮಾಡಿ ನ್ಯಾಯ ಪಡೆಯಲು ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ಅವಕಾಶವಿಲ್ಲ. ಶಾಂತಿಯುತವಾಗಿ ಹೋರಾಟ ನಡೆಸಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಸರ್ಕಾರ ಇದನ್ನು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ಸುಮ್ಮನಿರಲ್ಲ' ಎಂದರು.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications