ಆರು ತಿಂಗಳಿಗೆ ಆರು ಪ್ರಶ್ನೆ: ಮುಖ್ಯಮಂತ್ರಿಗೆ ಕಾಂಗ್ರೆಸ್ ಸವಾಲ್
ಬೆಂಗಳೂರು ಜನವರಿ 28: ನೋಟ್ ಬ್ಯಾನ್ ಹಾಗೂ ಗಬ್ಬರ್ ಸಿಂಗ್ ಟ್ಯಾಕ್ಸ್‌ಗಳಿಂದಾಗಿ ಶುರುವಾದ ನಿರುದ್ಯೋಗ ಸಮಸ್ಯೆ ಲಾಕ್‌ಡೌನ್ ನಂತರ ಉತ್ತುಂಗಕ್ಕೇರಿದೆ. ಸಿಎಂ ಆಗಿ ಅರ್ಧ ವರ್ಷ ಅಧಿಕಾರ ಪೂರೈಸಿದ ಬಸವರಾಜ್ ಬೊಮ್ಮಾಯಿ ಅವರೇ, ಉದ್ಯೋಗ ಸೃಷ್ಟಿಗೆ ತಾವು ಕೈಗೊಂಡ ಕ್ರಮಗಳೇನು? ರೂಪಿಸಿದ ಯೋಜನೆಗಳೇನು? ಎಷ್ಟು ಉದ್ಯೋಗ ಸೃಷ್ಟಿಯಾಗಿದೆ? ಎಂದು ಕಾಂಗ್ರೆಸ್ 'ಕೂ'ನಲ್ಲಿ ಪ್ರಶ್ನೆ ಮಾಡಿದೆ. ಹಲವಾರು ಪ್ರಶ್ನೆಗಳನ್ನು ಆಡಳಿತ ಪಕ್ಷಕ್ಕೆ ಕೇಳುವ ಮೂಲಕ 'ಕೈ' ಕಮಲವನ್ನು ಕಟ್ಟಿಹಾಕಿದೆ.
ಕೊರೊನಾ ಬಳಿಕ ರಾಜ್ಯದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿದೆ. ಕಾರಣ ಏನೇ ಇರಲಿ. ಆದರೆ ಸರ್ಕಾರ ಈ ಸಮಸ್ಯೆಯನ್ನು ಪರಿಹಾರ ಮಾಡುವಂತ ನಿಟ್ಟಿನಲ್ಲಿ ತೆಗೆದುಕೊಂಡಿರುವ ಕ್ರಮಗಳೇನು. ಬಸವರಾಜ್ ಬೊಮ್ಮಾಯಿ ಸಿಎಂ ಖರ್ಚಿ ಅಲಂಕರಿಸಿ ಆರು ತಿಂಗಳುಗಳು ಕಳೆದಿವೆ. ಅವರು ಮಾಡಿದ ಕಾರ್ಯಗಳೇನು? ಎಂದು ಕಾಂಗ್ರೆಸ್ ಕಾರವಾಗಿ ಪ್ರಶ್ನೆ ಎತ್ತಿದೆ. 'ಕೂ' ಮೂಲಕ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಪ್ರಶ್ನೆಗಳ ಸುರಿಮಳೆ ಸುರಿಸಿದೆ.

1. ಉದ್ಯೋಗ ಸೃಷ್ಟಿಗೆ ತಾವು ಕೈಗೊಂಡ ಕ್ರಮಗಳೇನು?
2. ಮುಖ್ಯಮಂತ್ರಿಯಾಗಿ ಹಣಕಾಸು ಖಾತೆಯನ್ನು ನಿಭಾಯಿಸುತ್ತಿರುವ ಬಸವರಾಜ್ ಬೊಮ್ಮಾಯಿ ಅವರೇ, ತಮ್ಮ ಅಧಿಕಾರದ 6 ತಿಂಗಳಲ್ಲಿ ಹಾಗೂ ನಿಮ್ಮ ಡಬಲ್ ಇಂಜಿನ್ ಸರ್ಕಾರದಲ್ಲಿ ಕೇಂದ್ರದಿಂದ ಯಾವ್ಯಾವ ಯೋಜನೆಗೆ ಎಷ್ಟು ಅನುದಾನ ತಂದಿದ್ದೀರಿ? GST ಬಾಕಿ, ನೆರೆ ಪರಿಹಾರ ಸೇರಿದಂತೆ ಎಷ್ಟು ನೆರವನ್ನು ತಂದಿದ್ದೀರಿ? ಎಂದು ಕಾಂಗ್ರೆಸ್ ಕಿಡಿ ಕಾರಿದೆ.
3. ಬಿಬಿಎಂಪಿಯಲ್ಲಿ ಭ್ರಷ್ಟಾಚಾರ, ಬಿಡಿಎಯಲ್ಲಿ ಭ್ರಷ್ಟಾಚಾರ, ನೇಮಕಾತಿಯಲ್ಲಿ ಭ್ರಷ್ಟಾಚಾರ, ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಗುತ್ತಿಗೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ, ಈ ಸರ್ಕಾರದಲ್ಲಿ ಎಲ್ಲೆಲ್ಲೂ ಭ್ರಷ್ಟಾಚಾರವೇ. ಬಸವರಾಜ್ ಬೊಮ್ಮಾಯಿ ಅವರೇ, ಈ 6 ತಿಂಗಳಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಕೈಗೊಂಡ ಕ್ರಮಗಳೇನು? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
4. ಸಿಗದ ನೆರೆ ಪರಿಹಾರ, ದೊರಕದ ಕೊರೋನಾ ಪರಿಹಾರ, ಕುಂಟುವ ಅಡಳಿತಯಂತ್ರ, ಇಲ್ಲದ ವಸತಿ ಯೋಜನೆಗಳು ಇದು ಬಿಜೆಪಿ ಆಡಳಿತದಲ್ಲಿ ತೆಗೆದುಕೊಂಡ ಕ್ರಮಗಳೆಂದು ಕಾಂಗ್ರೆಸ್ ದೂರಿದೆ. ಜನರ ಸಮಸ್ಯೆ ಹಲವಾರಿದ್ದರೂ ಒಂದೇ ಒಂದು ಜನತಾ ದರ್ಶನ ಕಾರ್ಯಕ್ರಮ ಮಾಡಿಲ್ಲವೇಕೆ? ಉಪಯೋಗವಿಲ್ಲದ ದೆಹಲಿ ದರ್ಶನಕ್ಕೆ ಹೋಗುವ ತಮಗೆ ಜನತಾದರ್ಶನಕ್ಕೆ ಸಮಯವಿರಲಿಲ್ಲವೇ? ಎಂದಿದೆ.
5. ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರುವ ಬಸವರಾಜ್ ಬೊಮ್ಮಾಯಿ ಅವರು, ರಾಜ್ಯದ ಹಣಕಾಸು ಸ್ಥಿತಿಯನ್ನು ವೃದ್ಧಿಸುವಲ್ಲಿ ಕೈಗೊಂಡ ಕ್ರಮಗಳೇನು? ಆರ್ಥಿಕ ಶಿಸ್ತು ಕಾಪಾಡಲು ರೂಪಿಸಿದ ಯೋಜನೆಗಳೇನು? ತೆರಿಗೆ ಪಾಲು, ಅನುದಾನ, ಪರಿಹಾರ ಮುಂತಾದವುಗಳನ್ನು ಕೇಂದ್ರದಿಂದ ತರುವಲ್ಲಿ ಮಾಡಿದ ಪ್ರಯತ್ನಗಳೇನು? ಎಂದು ಕಾಂಗ್ರೆಸ್ ಖಡಕ್ ಪ್ರಶ್ನೆ ಮಾಡಿದೆ.
6. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ, ನಿಮ್ಮ ಸರ್ಕಾರಕ್ಕೆ 6 ತಿಂಗಳಗಿದೆ, ನಿಮ್ಮ ಸಚಿವರ ಕೆಲಸಗಳ ಬಗ್ಗೆ ನಿಮಗೆ ತೃಪ್ತಿ ಇದೆಯೇ? ಅಸಮಾಧಾನದಿಂದ ಒಲ್ಲದ ಖಾತೆ ನಿಭಾಯಿಸುತ್ತಿರುವವರು, ಉಸ್ತುವಾರಿಗಾಗಿ ಕಿತ್ತಾಡುವವರು, ತಮ್ಮದೇ ಶಾಸಕರೊಂದಿಗೆ ಮುನಿಸಿಟ್ಟುಕೊಂಡ ಸಚಿವರುಗಳು ನಿಮ್ಮಲ್ಲಿದ್ದಾರೆ, ಅವರ ಕೆಲಸಗಳ ಬಗ್ಗೆ ಸಮಾಧಾನವಿದೆಯೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
Koo Appಹಣಕಾಸು ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರುವ @bsbommai ಅವರು, ರಾಜ್ಯದ ಹಣಕಾಸು ಸ್ಥಿತಿಯನ್ನು ವೃದ್ಧಿಸುವಲ್ಲಿ ಕೈಗೊಂಡ ಕ್ರಮಗಳೇನು? ಆರ್ಥಿಕ ಶಿಸ್ತು ಕಾಪಾಡಲು ರೂಪಿಸಿದ ಯೋಜನೆಗಳೇನು? ತೆರಿಗೆ ಪಾಲು, ಅನುದಾನ, ಪರಿಹಾರ ಮುಂತಾದವುಗಳನ್ನು ಕೇಂದ್ರದಿಂದ ತರುವಲ್ಲಿ ಮಾಡಿದ ಪ್ರಯತ್ನಗಳೇನು? #ತಿಂಗಳುಆರು_Onlyದೆಹಲಿಟೂರು - ಕರ್ನಾಟಕ ಕಾಂಗ್ರೆಸ್ (@inckarnataka) 28 Jan 2022
ನಿರುದ್ಯೋಗ ನಿವಾರಣೆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಅದಕ್ಕಾಗಿ ಉದ್ಯೋಗ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಲು ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾಂವಿ ತಾಲೂಕು ಬಾಡ ಗ್ರಾಮದ ಅಟಲ್‌ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಂತ್ರಿಕ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ದೊರಕಬೇಕಿದೆ. ಅದಕ್ಕಾಗಿ ಅನೇಕ ಉದ್ಯಮಪತಿಗಳೊಂದಿಗೆ ಮಾತನಾಡಿದ್ದು, ಸರ್ಕಾರ ಕೈಗಾರಿಕೆ ಸ್ಥಾಪನೆಗೆ ಬೇಕಾದಷ್ಟುಬಂಡವಾಳ ಹೂಡಲು ಯಾವುದೇ ಸಮಸ್ಯೆ ಇಲ್ಲ. ಆದರೆ, ಕೈಗಾರಿಕೆ ಸ್ಥಾಪನೆಯಿಂದ ಎಷ್ಟುಜನರಿಗೆ ಉದ್ಯೋಗ ಕೊಡುತ್ತೀರಿ? ತಂತ್ರಜ್ಞಾನವನ್ನು ಯಾವ ರೀತಿ ಬಳಕೆ ಮಾಡುತ್ತೀರಿ? ಎಂದು ಕೇಳಿದ್ದೇನೆ.
ನಿರುದ್ಯೋಗ ನಿವಾರಣೆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಅದಕ್ಕಾಗಿ ಉದ್ಯೋಗ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಲು ಆದ್ಯತೆ ನೀಡಲಾಗುವುದು ಎಂದು ಕಳೆದ ತಿಂಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ತಾಂತ್ರಿಕ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ದೊರಕಬೇಕಿದೆ. ಅದಕ್ಕಾಗಿ ಅನೇಕ ಉದ್ಯಮಪತಿಗಳೊಂದಿಗೆ ಮಾತನಾಡಿದ್ದು, ಸರ್ಕಾರ ಕೈಗಾರಿಕೆ ಸ್ಥಾಪನೆಗೆ ಬೇಕಾದಷ್ಟುಬಂಡವಾಳ ಹೂಡಲು ಯಾವುದೇ ಸಮಸ್ಯೆ ಇಲ್ಲ. ಆದರೆ, ಕೈಗಾರಿಕೆ ಸ್ಥಾಪನೆಯಿಂದ ಎಷ್ಟುಜನರಿಗೆ ಉದ್ಯೋಗ ಕೊಡುತ್ತೀರಿ? ತಂತ್ರಜ್ಞಾನವನ್ನು ಯಾವ ರೀತಿ ಬಳಕೆ ಮಾಡುತ್ತೀರಿ? ಎಂದು ಕೇಳಿದ್ದೇನೆ.
ನಮ್ಮ ಸರ್ಕಾರ ಉದ್ಯೋಗ ಆಧಾರಿತ ಕೈಗಾರಿಕೆ ಸ್ಥಾಪನೆಗೆ ಒತ್ತು ನೀಡಲಿದೆ. ಕಾಲ ಬದಲಾದಂತೆ ನಮ್ಮ ದೃಷ್ಟಿಕೋನ, ಚಿಂತನೆಯಲ್ಲಿ ಬದಲಾಗಬೇಕು. ನಮ್ಮ ಯುವಕರ ಕೈಗೆ ಕೆಲಸ ನೀಡುವ ಕೈಗಾರಿಕೆ ಸ್ಥಾಪನೆಯಾಗಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಡೆದಿದೆ ಎಂದು ತಿಳಿಸಿದರು.ಆಡಳಿತದಲ್ಲಿ ಚುರುಕು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. ವಿಶೇಷವಾಗಿ ಜನಸಾಮಾನ್ಯರಿಗೆ ಕಚೇರಿಗಳ ಅಲೆದಾಟ ತಪ್ಪಬೇಕು. ಅದಕ್ಕಾಗಿ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಉದ್ದೇಶಿಸಲಾಗಿದೆ. ಅದಕ್ಕೆ ಬೇಕಾದ ಡಿಜಿಟಲ್ ನೆಟವರ್ಕ್ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು.ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಿಗುವ ಎಲ್ಲ ಸೇವೆಗಳು ಗ್ರಾಮ ಮಟ್ಟದಲ್ಲಿ ಸಿಗುವ ರೀತಿ ಪ್ರಯತ್ನ ಮಾಡುಲಾಗುತ್ತಿದೆ. ಬೆಂಗಳೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಇದನ್ನೇ ತಿಳಿಸಿದ್ದೇನೆ. ರಾಜ್ಯದಲ್ಲಿ ಜನಸ್ನೇಹಿ ಆಡಳಿತ ನೀಡಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದೇನೆ ಎಂದಿದ್ದರು.












Click it and Unblock the Notifications