ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ವಿರುದ್ಧ 'ಸಿಬಿಐ' ತನಿಖೆಗೆ ಆಗ್ರಹ!

|
Google Oneindia Kannada News

ಬೆಂಗಳೂರು, ಸೆ. 12: "ಉನ್ನತ ಶಿಕ್ಷಣ ಸಚಿವಾಲಯ ವ್ಯಾಪ್ತಿಯಲ್ಲಿ ಬರುವ ಕೌಶಲ್ಯಾಭಿವೃದ್ಧಿ ಕೇಂದ್ರದ ಲ್ಯಾಬ್ ಉಪಕರಣ ಖರೀದಿಯಲ್ಲಿ ಇಲಾಖೆಯ ಅಧಿಕಾರಿಗಳು ಅಕ್ರಮ ಟೆಂಡರ್ ನಡೆಸಿದ್ದು, ಸುಮಾರು 34 ಕೋಟಿ ರೂ. ಗಳಷ್ಟು ಕಿಕ್‌ಬ್ಯಾಕ್ ಪಡೆಯಲಾಗಿದೆ. ಇದೆಲ್ಲವೂ ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್ ನಾರಾಯಣ್ ಅವರ ಅನುಮತಿ ಮೇರೆಗೆ ನಡೆದಿದ್ದು, ಈ ವಿಚಾರವಾಗಿ ಸಿಬಿಐ ತನಿಖೆ ನಡೆಸಬೇಕು" ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ವಿ.ಎಸ್ ಉಗ್ರಪ್ಪ ಹಾಗೂ ಮಾಜಿ ಸಚಿವ ಹೆಚ್.ಎಂ ರೇವಣ್ಣ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಇಲಾಖೆಯಲ್ಲಿನ ಟೆಂಡರ್‌ಗಳಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ 'ನಾನು ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ' ಎಂದು ಹೇಳಿ ನಾನು ಈ ದೇಶದ ಕಾವಲುಗಾರ ಎಂದು ಹೇಳಿಕೊಳ್ಳುತ್ತಾರೆ. ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿರುವ ಸರ್ಕಾರಿ ಟೂಲ್ ರೂಮ್ ಆ್ಯಂಡ್ ಟ್ರೇನಿಂಗ್ ಸೆಂಟರ್‌ನಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಐಆರ್‌ಪಿಎಸ್ ಅಧಿಕಾರಿ ಹೆಚ್. ರಾಘವೇಂದ್ರ, ಆಡಳಿತ ವ್ಯವಸ್ಥಾಪಕ ಮುನೀರ್ ಅಹ್ಮದ್, ಖರೀದಿ ಅಧಿಕಾರಿ ರಾಜಕುಮಾರ್ ಅವರು ಅಕ್ರಮ ಟೆಂಡರ್ ಮೂಲಕ ಕೋಟಿ ಕೋಟಿ ರೂ. ಲೂಟಿ ಹೊಡೆಯುತ್ತಿದ್ದಾರೆ' ಎಂದು ಆರೋಪಿಸಿದ್ದಾರೆ.

ಕೋಟಿ ಕೋಟಿ ರೂ. ಅಕ್ರಮ ಟೆಂಡರ್!

ಕೋಟಿ ಕೋಟಿ ರೂ. ಅಕ್ರಮ ಟೆಂಡರ್!

ಕೌಶಲ್ಯಾಭಿವೃದ್ಧಿ ಇಲಾಖೆಗೆ ಕೇಂದ್ರ ಹಾಗೂ ರಾಜ್ಯದಿಂದ 200 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಲಾಗಿದೆ. ಇದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ವ್ಯಾಪ್ತಿಗೆ ಬರುತ್ತದೆ. ರಾಜ್ಯದಲ್ಲಿ ಸುಮಾರು 25 ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರಗಳಿವೆ" ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ವಿವರಿಸಿದ್ದಾರೆ.

ಆದರೆ ಈ ಮೂರು ಅಧಿಕಾರಿಗಳು ಸಂಬಂಧಪಟ್ಟ ಮಂತ್ರಿಗಳ ಗಮನದಲ್ಲೇ 8 ಟೆಂಡರ್ ಕರೆದಿದ್ದಾರೆ. ಇದರ ಒಟ್ಟಾರೆ ಮೊತ್ತ 61,52,04,747 ರೂಪಾಯಿ. ಇನ್ನು 40 ಕೋಟಿ ಮೌಲ್ಯ. ಇನ್ನು 40 ಕೋಟಿ ಮೌಲ್ಯದ ಉಳಿದ ಎರಡು ಟೆಂಡರ್ ಪ್ರಕ್ರಿಯೆಯೂ ಮುಕ್ತಾಯ ಹಂತದಲ್ಲಿದೆ. ಅವುಗಳನ್ನು ಮುಂದಿನ ದಿನಗಳಲ್ಲಿ ಬಹಿರಂಗ ಮಾಡುತ್ತೇವೆ ಎಂದು ಆರೋಪಿಸಿದ್ದಾರೆ.

ಕಿಕ್‌ಬ್ಯಾಕ್ ಹೇಗೆ ಹೋಗಿದೆ?

ಕಿಕ್‌ಬ್ಯಾಕ್ ಹೇಗೆ ಹೋಗಿದೆ?

ಈಗ ಕರೆದಿರುವ ಮೊದಲನೇ ಟೆಂಡರ್ ಖರೀದಿ ಮೊತ್ತ 9,47,98,000 ರೂ.ಗಳು. ಆದರೆ ಅದರ ಮಾರುಕಟ್ಟೆ ಮೊತ್ತ 4.50 ಕೋಟಿ ಮಾತ್ರ. ಎರಡನೇ ಟೆಂಡರ್‌ನಲ್ಲಿ 9.20 ಕೋಟಿ ರೂ. ಖರೀದಿ ಮೊತ್ತವಿದೆ. ಅದರ ಮಾರುಕಟ್ಟೆ ಮೌಲ್ಯ 4 ಕೋಟಿ ರೂ. ಮೂರನೇ ಬಿಡ್‌ನಲ್ಲಿ 17.82 ಕೋಟಿ ಖರೀದಿ ಮೊತ್ತವಿದೆ. ಅವುಗಳ ಮಾರುಕಟ್ಟೆ ಮೊತ್ತ 8.50 ಕೋಟಿ. ನಾಲ್ಕನೇ ಬಿಡ್‌ನಲ್ಲಿ 2.80 ಕೋಟಿ ಖರೀದಿ ಮೊತ್ತವಿದ್ದು, ಅದರ ಮಾರುಕಟ್ಟೆ ಮೌಲ್ಯ 1.25 ಕೋಟಿ ಮಾತ್ರ. ಐದನೇ ಬಿಡ್‌ನಲ್ಲಿ ಬೆಳಗಾವಿ ಸ್ಮಾರ್ಟ್ ಸಿಟಿಗೆ ಸಂಬಂಧಿಸಿದ ಲ್ಯಾಬ್‌ಗೆ 1.03 ಕೋಟಿ ಖರೀದಿ ಮೊತ್ತವಿದೆ. ಮಾರುಕಟ್ಟೆಯಲ್ಲಿ ಅದರ ಮೌಲ್ಯ 40 ಲಕ್ಷ.

ಆರನೇ ಟೆಂಡರ್‌ನಲ್ಲಿ 4.86 ಕೋಟಿ ಮೊತ್ತ ನಿಗದಿ ಮಾಡಿದೆ. ಮಾರುಕಟ್ಟೆ ಮೊತ್ತ 2 ಕೋಟಿ. ಏಳನೇ ಟೆಂಡರ್‌ನಲ್ಲಿ 6.93 ಕೋಟಿ ನಿಗದಿ ಮಾಡಿದೆ. ಇದರ ಮಾರುಕಟ್ಟೆ ಮೊತ್ತ ಕೇವಲ 3 ಕೋಟಿ. ಎಂಟನೇ ಬಿಡ್‌ನಲ್ಲಿ 9.83 ಕೋಟಿ ನಿಗದಿ ಮಾಡಲಾಗಿದ್ದು, ಇದರ ಉತ್ಪನ್ನಗಳ ಮಾರುಕಟ್ಟೆ ಮೌಲ್ಯ 3.15 ಕೋಟಿ. ಒಟ್ಟಾರೆ ಈ ಎಲ್ಲ ಬಿಡ್ ಗಳಿಂದ ಸರ್ಕಾರ 61.52 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದು, ಅದರ ಮಾರುಕಟ್ಟೆ ಮೊತ್ತ 27.15 ಕೋಟಿ ರೂಪಾಯಿ ಮಾತ್ರ. ಅವರಿಗೆ ಕಿಕ್ ಬ್ಯಾಕ್ ಹೋಗಿರುವುದು 34.37 ಕೋಟಿ ರೂ.

ಡಾ. ಅಶ್ವಥ್ ನಾರಾಯಣ ರಕ್ಷಣೆಯಲ್ಲಿ ಅಕ್ರಮ ಟೆಂಡರ್!

ಡಾ. ಅಶ್ವಥ್ ನಾರಾಯಣ ರಕ್ಷಣೆಯಲ್ಲಿ ಅಕ್ರಮ ಟೆಂಡರ್!

ಈ 8 ಟೆಂಡರ್‌ಗಳಲ್ಲಿ ಬಹುತೇಕ ಬಿಡ್ ಗಳನ್ನು ಅಕ್ವಾ ಟೆಕ್ವಿಪ್ಮೆಂಟ್ಸ್‌ಗೆ ನೀಡಲಾಗಿದೆ. ಬಿಡ್ ನಂ.7 ಅನ್ನು ರವಿತೇಜ ಎಲೆಕ್ಟೋಸಿಸ್ಟಮ್ಸ್‌ಗೆ ನೀಡಲಾಗಿದೆ. ಇದು ಅಕ್ವಾ ಟೆಕ್ವಿಪ್ಮೆಂಟ್ಸ್‌ನ ಸ್ನೇಹಿತರಾಗಿದ್ದಾರೆ. ಇನ್ನು ಮೊದಲ ಬಿಡ್‌ನ್ನು ಲಾರೆನ್ಸ್ ಅಂಡ್ ಮೇಯೋ ಅವರಿಗೆ ನೀಡಿದ್ದಾರೆ. ಈ ಟೆಂಡರ್‌ನಲ್ಲಿ ಭಾಗಿಯಾಗಿರುವವರು ಉತ್ಪನ್ನ ತಯಾರಕರಲ್ಲ. ಈ ಉತ್ಪನ್ನ ಸರಬರಾಜು ಮಾಡುವ ಏಜೆನ್ಸಿಗಳೂ ಅಲ್ಲ ಎಂದು ಉಗ್ರಪ್ಪ ಆರೋಪಿಸಿದ್ದಾರೆ.

ಬೇರೆಯವರಿಗೆ ಟೆಂಡರ್‌ನಲ್ಲಿ ಅವಕಾಶ ಸಿಗಬಾರದು ಎಂದು ಸಚಿವರ ರಕ್ಷಣೆಯಲ್ಲಿ ಈ ಮೂವರು ಅಧಿಕಾರಿಗಳು ಅಕ್ರಮ ಟೆಂಡರ್ ನಡೆಸಿದ್ದಾರೆ ಎಂದು ವಿ.ಎಸ್. ಉಗ್ರಪ್ಪ ಆರೋಪಿಸಿದ್ದಾರೆ.

Recommended Video

ಅಧಿವೇಶನಕ್ಕೆ ಚಕ್ಕಡಿ ಗಾಡಿಯಲ್ಲಿ ಬಂದ ಕಾಂಗ್ರೆಸ್‌ ನಾಯಕರು.. | Oneindia Kannada
ಮಾರುಕಟ್ಟೆ ಬೆಲೆಗಿಂತ ಮೂರು ಪಟ್ಟು ಹೆಚ್ಚು ಹಣ!

ಮಾರುಕಟ್ಟೆ ಬೆಲೆಗಿಂತ ಮೂರು ಪಟ್ಟು ಹೆಚ್ಚು ಹಣ!

"ಪಾರದರ್ಶಕ ಟೆಂಡರ್ ಕಾಯ್ದೆ ಪ್ರಕಾರ ಯಾವುದೇ ಟೆಂಡರ್ 1 ಕೋಟಿ ರೂ.ಗೆ ಹೆಚ್ಚು ಮೊತ್ತದ್ದಾಗಿದ್ದರೆ ಬಿಡ್ ಪೂರ್ವಭಾವಿ ಸಭೆ ಕರೆಯಬೇಕು. ಈ 8 ಟೆಂಡರ್ ಕರೆಯುವ ಸಂದರ್ಭದಲ್ಲಿ ಯಾವುದೇ ಪೂರ್ವಭಾವಿ ಸಭೆ ನಡೆಸಿಲ್ಲ. ಪಾರದರ್ಶಕ ಕಾಯ್ದೆ ಪ್ರಕಾರ ಬಿಡ್‌ನಲ್ಲಿ ಒಂದು ಅಥವಾ ಎರಡು ಕಂಪನಿಗಳು ಮಾತ್ರ ಭಾಗವಹಿಸಿದ್ದರೆ, ಆ ಟೆಂಡರ್ ರದ್ದುಗೊಳಿಸಿ ಮರುಟೆಂಡರ್ ಕರೆಯಬೇಕು ಎಂದು ಕಾನೂನು ಹೇಳುತ್ತದೆ. ದುರಾದೃಷ್ಟವಶಾತ್ 8 ಟೆಂಡರ್‌ಗಳಲ್ಲಿ ಕೇವಲ 2 ಕಂಪನಿಗಳು ಮಾತ್ರ ಭಾಗವಹಿಸಿದ್ದು, ಇವುಗಳಲ್ಲಿ ಯಾವ ಟೆಂಡರ್‌ನ್ನು ಮರುಟೆಂಡರ್ ಕರೆಯಲಿಲ್ಲ. ಈ ಎರಡು ಕಂಪನಿಗಳು ಮಾತ್ರ ಭಾಗವಹಿಸುವಂತೆ ನೋಡಿಕೊಳ್ಳುತ್ತಾರೆ.

ಹೀಗೆ ಮೂವರು ಅಧಿಕಾರಿಗಳು ರಾಜ್ಯ ಸರ್ಕಾರದ ಬೆಕ್ಕಸವನ್ನು ಲೂಟಿ ಮಾಡುತ್ತಿದ್ದಾರೆ. ಈ ತಿಮಿಂಗಲಗಳನ್ನು ಪೋಷಣೆ ಮಾಡುತ್ತಿರುವುದು ಸಚಿವರಾದ ಡಾ.ಅಶ್ವಥ್ ನಾರಾಯಣ್ ಅವರು. ಅಶ್ವಥ್ ನಾರಾಯಣ ಅವರೇ ನಿಮಗೂ ಈ ಅಧಿಕಾರಿ ರಘುನಾಥ್ ಅವರಿಗೂ ಇರುವ ಸಂಬಂಧ ಏನು? ಈ ಅವ್ಯವಹಾರದಲ್ಲಿ ನಿಮ್ಮ ಪಾಲೆಷ್ಟು? ಈ ಅಧಿಕಾರಿಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ? ರಾಜ್ಯದಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ವಿವಿಧ ಇಲಾಖೆಗಳಲ್ಲಿ ಹೇಗೆಲ್ಲಾ ಲೂಟಿ ಮಾಡಲಾಗುತ್ತಿದೆ ಎಂಬುದಕ್ಕೆ ಇದು ಕೇವಲ ಸ್ಯಾಂಪಲ್ ಅಷ್ಟೇ. ಈ ಸರ್ಕಾರಕ್ಕೆ ನಿಜವಾಗಿಯೂ ಬದ್ಧತೆ ಇದ್ದರೆ, ಈ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕು. ಇದರಲ್ಲಿ ಅಧಿಕಾರಿಗಳು, ಮಂತ್ರಿಗಳ ಪಾತ್ರ ಎನು? ಇದರಲ್ಲಿ ಎಷ್ಟು ಭ್ರಷ್ಟಾಚಾರ ನಡೆದಿದೆ" ಎಂದು ಕಾಂಗ್ರೆಸ್ ನಾಯಕರು ಪ್ರಶ್ನೆ ಮಾಡಿದ್ದಾರೆ.

English summary
Skills Development Training Center Lab equipment illegal tender; Congress demands CBI probe. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X