ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿರಾಡಿ ಒತ್ತಡ ಚಾರ್ಮಾಡಿ ಘಾಟ್ ರಸ್ತೆ ಮೇಲೆ, ವಿಪರೀತ ಸಂಚಾರ ದಟ್ಟಣೆ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

Recommended Video

ಶಿರಾಡಿ, ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರ ದಟ್ಟಣೆ..! | Oneindia kannada

ಚಿಕ್ಕಮಗಳೂರು, ಆಗಸ್ಟ್ 17: ಭಾರೀ ಮಳೆಯ ಕಾರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಶಿರಾಡಿ ಘಾಟ್ ರಸ್ತೆಯನ್ನು ಬಂದ್ ಮಾಡಿದ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ದಟ್ಟಣೆ ಜಾಸ್ತಿಯಾಗಿದೆ. ಚಾರ್ಮಾಡಿ ಘಾಟ್ ಮಾರ್ಗವಾಗಿ ಸಾವಿರಾರು ವಾಹನಗಳು ಸಂಚರಿಸುತ್ತಿರುವ ಕಾರಣಕ್ಕೆ ಹೀಗೆ ಸಮಸ್ಯೆಯಾಗಿದ್ದು, ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ.

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭಾರೀ ಗಾತ್ರದ ವಾಹನಗಳು ಸಂಚಾರ ಮಾಡುತ್ತಿವೆ. ಸಾಮಾನ್ಯವಾಗಿ ಈ ವಾಹನಗಳು ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚರಿಸುತ್ತಿದ್ದವು. ಆದರೆ ಈಗ ಆ ಎಲ್ಲ ಒತ್ತಡವೂ ಚಾರ್ಮಾಡಿ ಘಾಟ್ ರಸ್ತೆಯ ಮೇಲೆ ಬಿದ್ದಿರುವುದರಿಂದ ಈ ಸನ್ನಿವೇಶ ಸೃಷ್ಟಿಯಾಗಿದೆ.

ಆಗಸ್ಟ್ 20ರವರೆಗೆ ಶಿರಾಡಿ ಘಾಟ್ ಸಂಚಾರ ಸಂಪೂರ್ಣ ಬಂದ್ಆಗಸ್ಟ್ 20ರವರೆಗೆ ಶಿರಾಡಿ ಘಾಟ್ ಸಂಚಾರ ಸಂಪೂರ್ಣ ಬಂದ್

ಮಂಗಳೂರು - ಧರ್ಮಸ್ಥಳಕ್ಕೆ ತೆರಳಬೇಕಾದ ಸಾವಿರಾರು ಪ್ರಯಾಣಿಕರು ಚಾರ್ಮಾಡಿ ಘಾಟ್ ನ ರಸ್ತೆಯನ್ನು ಅವಲಂಬಿಸಿದ್ದಾರೆ. ಹಾಗೆ ಸಾಗುತ್ತಿರುವುದರಿಂದ ಕೊಟ್ಟಿಗೆಹಾರದಿಂದ ಸಾಲುಗಟ್ಟಿ ವಾಹನಗಳು ನಿಂತಿರುವುದು ಕಾಣಬಹುದಾಗಿದೆ. ವಾಹನಗಳು ಮುಂದೆ ಸಾಗಲು ಬಹಳ ಸಮಯ ಹಿಡಿಸುತ್ತಿದೆ. ಜತೆಗೆ ದಟ್ಟ ಮಂಜು ಕವಿದು, ತುಂತುರು ಮಳೆ ಸಹ ಆಗುತ್ತಿದೆ.

Slow moving traffic in Charmadi ghat, commuters better to know this

ಮಲೆನಾಡಲ್ಲಿ ನಿಲ್ಲದ ಮಳೆ ಅಬ್ಬರ, ನಾಲ್ಕೈದು ಕಡೆ ಬಿರುಕುಬಿಟ್ಟ ರಸ್ತೆಮಲೆನಾಡಲ್ಲಿ ನಿಲ್ಲದ ಮಳೆ ಅಬ್ಬರ, ನಾಲ್ಕೈದು ಕಡೆ ಬಿರುಕುಬಿಟ್ಟ ರಸ್ತೆ

ಒಟ್ಟಾರೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ವ್ಯಾಪ್ತಿಗೆ ಬರುವ ‌ಚಾರ್ಮಾಡಿ ಘಾಟ್ ಮೂಲಕ ತೆರಳಬೇಕು ಅಂತ ಇರುವವರು ಈ ಎಲ್ಲ ಅಂಶಗಳನ್ನು ಗಮನದಲ್ಲಿ ಇಟ್ಟುಕೊಳ್ಳುವುದು ಉತ್ತಮ.

English summary
Due to road closed in Shiradi ghat all vehicles which are travelling to Mangaluru and Dharmasthala moving through Charmadi Ghat. Because of that traffic jam and slow moving traffic in Chikkamagalur district, Mudigere taluk, Charmadi ghat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X