ಎಸ್.ಎಂ.ಕೃಷ್ಣಗೆ ಕೆಂಗಲ್ ಹನುಮಂತಯ್ಯ ಪ್ರಶಸ್ತಿ
ಬೆಂಗಳೂರು, ಫೆಬ್ರವರಿ 06 : 2018ನೇ ಸಾಲಿನ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಈ ಪ್ರಶಸ್ತಿಯನ್ನು ನೀಡುತ್ತದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ದತ್ತಿ ಪ್ರಶಸ್ತಿಗಳ ಆಯ್ಕೆ ಸಮಿತಿ ಸಭೆಯಲ್ಲಿ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ.
ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿ 25 ಸಾವಿರ ರೂ. ನಗದು ಬಹುಮಾನ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಎಂದು ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ ಹೇಳಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಕೇಂದ್ರ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮೊದಲು ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು ಈಗ ಬಿಜೆಪಿಯಲ್ಲಿದ್ದಾರೆ.
2019ನೇ ಸಾಲಿನ ನಾಗಡಿಕೆರೆ ಕಿಟ್ಟಪ್ಪಗೌಡ ರುಕ್ಮಿಣಿ ದತ್ತಿ ಪ್ರಶಸ್ತಿಗೆ ಪತ್ರಕರ್ತ ಎಚ್.ಬಿ.ಮದನಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಕಿಟ್ಟಪ್ಪಗೌಡ ರುಕ್ಮಿಣಿ ದತ್ತಿ ಪ್ರಶಸ್ತಿ 10 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ.












Click it and Unblock the Notifications