ಚುನಾವಣಾ ಪ್ರಚಾರಕಣಕ್ಕಿಳಿದ ಎಸ್ಎಂ ಕೃಷ್ಣ
ಬೆಂಗಳೂರು, ಮಾ.27 : ಕರ್ನಾಟಕ ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ಪ್ರಚಾರದ ಕಾರ್ಯತಂತ್ರ ರೂಪಿಸಿದೆ. ಮಾಜಿ ವಿದೇಶಾಂಗ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಎಸ್.ಎಂಕೃಷ್ಣ ಸಹ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವುದಾಗಿ ಘೋಷಿಸಿದ್ದಾರೆ.
ಗುರುವಾರ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಎಸ್.ಎಂ.ಕೃಷ್ಣ ಅವರನ್ನು ಸದಾಶಿವನಗರದ ಅವರ ನಿವಾಸದಲ್ಲಿ ಭೇಟಿ ಪ್ರಚಾರದ ಕುರಿತು ಮಾತುಕತೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಕೃಷ್ಣ ರಾಜ್ಯದಲ್ಲಿ ಪ್ರಚಾರ ಮಾಡಲಿದ್ದೇನೆ ಎಂದು ತಿಳಿಸಿದರು.

ಸಿಎಂ, ಪರಮೇಶ್ವರ್ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್.ಎಂ.ಕೃಷ್ಣ, ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಪ್ರಚಾರಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಏ.1 ರಿಂದ ಸಕ್ರಿಯ ರಾಜಕಾರಣದಲ್ಲಿ ತೊಡಗುತ್ತೇನೆ. ಕಾಂಗ್ರೆಸ್ ಶಾಸಕರಿಲ್ಲದ ಕ್ಷೇತ್ರ ಸೇರಿದಂತೆ ರಾಜ್ಯದ 28 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತೇನೆ ಎಂದು ಹೇಳಿದರು. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಮಂಡ್ಯ ಕಾಂಗ್ರೆಸ್ ಭಿನ್ನಮತದ ಬಗ್ಗೆ ಮಾತನಾಡಿದ ಕೃಷ್ಣ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಬುಧವಾರ ಮಂಡ್ಯಕ್ಕೆ ಭೇಟಿ ನೀಡಿದ್ದರು. ಆಗ ಎಲ್ಲಾ ನಾಯಕರ ಜೊತೆ ಮಾತುಕತೆ ನಡೆಸಿದ್ದು, ಅಸಮಾಧಾನ ಬಗೆಹರಿದಿದೆ. ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಾಗಿ ರಮ್ಯಾ ಅವರ ಗೆಲುವಿಗಾಗಿ ಶ್ರಮಿಸಲಿದ್ದಾರೆ ಎಂದರು.
ಕರ್ನಾಟಕದಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯ ಅವರ ಯಾವುದೇ ಅಲೆ ಇಲ್ಲ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉತ್ತಮ ಕಾರ್ಯಗಳನ್ನು ಮಾಡುತ್ತಿದೆ. ರಾಜ್ಯದಲ್ಲಿ ಪಕ್ಷ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು. ಸ್ವ ಕ್ಷೇತ್ರ ಮಂಡ್ಯ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಪ್ರಚಾರ ನಡೆಸುವುದಾಗಿ ಅವರು ತಿಳಿಸಿದರು.












Click it and Unblock the Notifications