ರೈತಪರ ಹೋರಾಟ, ಜ್ಞಾನಾಧಾರಿತ ಅಭಿವೃದ್ಧಿಗೆ ಎಸ್.ಎಂ.ಕೃಷ್ಣ ಅವರು ದೊಡ್ಡ ಕಾಣಿಕೆ: ಬಸವಸರಾಜ ಬೊಮ್ಮಾಯಿ
ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಎಸ್.ಎಂ.ಕೃಷ್ಣ ಅವರನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿನಂದಿಸಿದರು.
ಬೆಂಗಳೂರು, ಜನವರಿ27: ರೈತಪರ ಹೋರಾಟ, ಜ್ಞಾನಾಧಾರಿತ ಅಭಿವೃದ್ಧಿಗೆ ಎಸ್.ಎಂ.ಕೃಷ್ಣ ಅವರು ದೊಡ್ಡ ಕಾಣಿಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶುಕ್ರವಾರ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅವರ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಎಸ್.ಎಂ.ಕೃಷ್ಣ ಅವರನ್ನ ಅಭಿನಂದಿಸಿದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಐ.ಟಿ, ಬಿಟಿ ಕೈಗಾರಿಕೆಗಳು ದೊಡ್ಡ ಪ್ರಮಾಣದಲ್ಲಿ ಬೆಂಗಳೂರಿನಲ್ಲಿ ಬೆಳೆಸಿದ್ದಾರೆ ಅದರ ಮೂಲ ಬೀಜಾಂಕುರ, ಬೆಂಬಲ ನೀಡಿ ಬೆಳೆಸಿದ್ದು ಎಸ್.ಎಂ ಕೃಷ್ಣ ಅವರು. ಎಲ್ಲ ರಂಗದಲ್ಲೂ ಕೂಡ ಉತ್ತಮ ಆಡಳಿತ, ಉತ್ತಮ ಕಾರ್ಯಕ್ರಮ, ಜನಪರ, ನಾಡಿನ ಪರ ಗಟ್ಟಿಯಾದ ನಿಲುವು , ಇದೆಲ್ಲ ಒಬ್ಬರೇ ವ್ಯಕ್ತಿ ಯಲ್ಲಿ ಸಮ್ಮಿಳಿತಗೊಂಡಿರುವುದು ಎಸ್ ಎಂ ಕೃಷ್ಣ ಅವರಲ್ಲಿ ಮಾತ್ರ. ಇವರನ್ನು ಗುರುತಿಸಿ ಪ್ರಧಾನಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿರುವುದು ಅವರೊಬ್ಬ ಮುತ್ಸದ್ದಿ ರಾಜಕಾರಣಿ ಎಂದು ತೋರಿಸುತ್ತದೆ ಎಂದರು.
ಎಸ್. ಎಂ ಕೃಷ್ಣ ಅವರ ಕಾಲದಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ತಂದಿದ್ದು, ನಾವು ಯಾರೂ ಮರೆಯಲು ಸಾಧ್ಯವಿಲ್ಲ. ಹಸಿದ ಹೊಟ್ಟೆಯಲ್ಲಿ ಕಲಿಕೆ ಕಷ್ಟ ಎಂದು ಮನವರಿಕೆ ಮಾಡಿಕೊಂಡು ಮಧ್ಯಾಹ್ನದ ಊಟವನ್ನು ದೊಡ್ಡ ಪ್ರಮಾಣದಲ್ಲಿ ಮಕ್ಕಳಿಗೆ ದಿನನಿತ್ಯ ಒದಗಿಸುವ ಕೆಲಸವನ್ನು ವ್ಯವಸ್ಥಿತವಾಗಿ ಮಾಡಿದ ವಿಚಾರವನ್ನು ಯಾರೂ ಮರೆಯುವಂತಿಲ್ಲ ಎಂದು ಹೇಳಿದರು.

ನಾಡು ಕಂಡ ಸೃಜನಶೀಲ, ಸರಳ ಸಜ್ಜನಿಕೆಯ, ಸುರಾಜ್ಯ ನೀಡಿದ, ಉತ್ತಮ ಆಡಳಿತ ವ್ಯವಸ್ಥೆಗೆ ಹೆಸರಾದಂಥ ಹಲವಾರು ಜನಪರ ಯೋಜನೆಗಳನ್ನು ನೀಡಿರುವ ಎಸ್ ಎಂ ಕೃಷ್ಣ ಅವರಿಗೆ ರಾಷ್ಟ್ರಪತಿಗಳು ಪದ್ಮವಿಭೂಷಣ ಪ್ರಶಸ್ತಿ ನೀಡಿರುವುದು ನಮಗೆಲ್ಲಾ, ಸಂತೋಷ, ಆನಂದ, ಅಭಿಮಾನ ಮತ್ತು ಹೆಮ್ಮೆ ತಂದಿದೆ. ಕನ್ನಡ ನಾಡಿನ ಸಾರ್ವಜನಿಕ ವಲಯದಲ್ಲಿ ಉತ್ತಮ ಹಾಗೂ ಗುಣಾತ್ಮಕ ಆಡಳಿತ ನೀಡಿರುವ ವಿಚಾರದಲ್ಲಿ ಅವರಿಗೆ ಪ್ರಶಸ್ತಿ ನೀಡಿರುವುದು ಅತ್ಯಂತ ಯೋಗ್ಯವಾಗಿದೆ ಎಂದರು.
ಇನ್ನೂ ಎಸ್. ಎಂ ಕೃಷ್ಣ ಅವರ ಆಡಳಿತದ ಕಾಲದಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಎದುರಿಸಿದ್ದಾರೆ. ಜನಪರ ಆಡಳಿತ ನೀಡಿದ್ದಾರೆ. ಎಲ್ಲಾ ವರ್ಗಗಳಿಗೆ ಉತ್ತಮ ಕಾರ್ಯಕ್ರಮ ಗಳನ್ನು ನೀಡಿದ್ದರು. ಅವರ ಕಾಲದಲ್ಲಿ ಯಶಸ್ವಿನಿ ಯೋಜನೆ ನೀಡಿದರು. ಭಾರತಕ್ಕೆ ಆರೋಗ್ಯ ವಿಮೆ ಇನ್ನೂ ಪರಿಚಯ ಆಗಿರಲಿಲ್ಲ. ಸ್ಥಳೀಯ ರೈತರು, ವೈದ್ಯಾಧಿಕಾರಿಗಳನ್ನು ಕರೆಸಿ ಯಶಸ್ವಿನಿ ಯೋಜನೆಯನ್ನು ರೈತರಿಗಾಗಿ ನೀಡಿದ್ದನ್ನು ಸ್ಮರಿಸಿಕೊಳ್ಳಬೇಕು. ಅದನ್ನು ಮಧ್ಯದಲ್ಲಿ ಕೈ ಬಿಡಲಾಗಿತ್ತು.ಆದರೆ ನಾನು ಕಳೆದ ಬಜೆಟ್ ನಲ್ಲಿ ಘೋಷಣೆ ಮಾಡಿ 300 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಕೆಲವು ಸುಧಾರಣೆಗಳನ್ನು ಮಾಡಿದ್ದೇನೆ. ರೈತರಿಗೆ ಆದಾಯ ಕಡಿಮೆ ಇದ್ದು, ಸುರಕ್ಷತೆಯ ಅವಶ್ಯಕತೆ ಇದೆ ಎಂದು ಮನಗಂಡು ಆರೋಗ್ಯ, ಶಿಕ್ಷಣ ಮೂಲಕ ಸುರಕ್ಷತೆ ನೀಡಲು ಯಶಸ್ವಿನಿ ಜಾರಿಗೆ ತಂದರು ಎಂದು ತಿಳಿಸಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications