ಎಸ್ಸೆಂ ಕೃಷ್ಣ ಅವರ ಬಿಜೆಪಿ ಸೇರ್ಪಡೆ ಮುಂದೂಡಿಕೆ
ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರ ಬಿಜೆಪಿ ಸೇರ್ಪಡೆ ಮುಂದೂಡಲಾಗಿದೆ. ಎಸ್ಸೆಂ ಕೃಷ್ಣ ಅವರು ಮಾರ್ಚ್ 15ರ ಮಧ್ಯಾಹ್ನ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇರುವ ಕಾರ್ಯಕ್ರಮ ನಿಗದಿಯಾಗಿತ್ತು.
ನವದೆಹಲಿ/ಬೆಂಗಳೂರು, ಮಾರ್ಚ್ 15: ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರ ಬಿಜೆಪಿ ಸೇರ್ಪಡೆ ಮುಂದೂಡಲಾಗಿದೆ. ಎಸ್ಸೆಂ ಕೃಷ್ಣ ಅವರು ಮಾರ್ಚ್ 15ರ ಮಧ್ಯಾಹ್ನ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇರುವ ಕಾರ್ಯಕ್ರಮ ನಿಗದಿಯಾಗಿತ್ತು.
ಆದರೆ, ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಕೃಷ್ಣ ಅವರ ಸೋದರಿ ಸುನೀತಾ ಅವರು ನಿಧನರಾದ ಹಿನ್ನಲೆಯಲ್ಲಿ ಕೃಷ್ಣ ಅವರು ತಕ್ಷಣವೇ ದೆಹಲಿಯಿಂದ ಬೆಂಗಳೂರಿಗೆ ಹಿಂತಿರುಗುತ್ತಿದ್ದಾರೆ. [ಎಸ್ಸೆಂ ಕೃಷ್ಣ ಅವರಿಗೆ ಬಿಜೆಪಿಯಿಂದ ಭರ್ಜರಿ ಆಫರ್]

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿದಂತೆ ಪಕ್ಷದ ಪ್ರಮುಖರ ಸಮ್ಮುಖದಲ್ಲಿ ಬಿಜೆಪಿ ಸೇರಲು ಕೃಷ್ಣ ಅವರು ಮುಂದಾಗಿದ್ದರು. ಜನವರಿ ತಿಂಗಳಿನಲ್ಲಿ ಕಾಂಗ್ರೆಸ್ ನಂಟು ಕಳಚಿಕೊಂಡ ಕೃಷ್ಣ ಅವರಿಗೆ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಸೇರುವಂತೆ ಆಹ್ವಾನ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications