SM Krishna : ಎಸ್. ಎಂ. ಕೃಷ್ಣರಿಗೆ ಕರ್ನಾಟಕ ರತ್ನ ನೀಡಿ: ದಿನೇಶ್‌ ಗೂಳಿಗೌಡ

ಬೆಂಗಳೂರು, ಡಿಸೆಂಬರ್‌ 11: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಆರು ದಶಕಗಳ ಸುದೀರ್ಘ ಅವಧಿಗೆ ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿದ್ದವರು. ತಾವು ಅಲಂಕರಿಸಿದ ಹುದ್ದೆಗಳಿಗೆ ಅವರು ನ್ಯಾಯ ಒದಗಿಸಿಕೊಟ್ಟ ಒಬ್ಬ ಶ್ರೇಷ್ಠ ರಾಜಕಾರಣಿ. ಅವರ ಸಾಧನೆಯನ್ನು ಪರಿಗಣಿಸಿ ಭಾರತ ಸರ್ಕಾರವು ಈಚೆಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಈಗ ರಾಜ್ಯ ಸರ್ಕಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಶಾಸಕ ದಿನೇಶ್‌ ಗೂಳಿಗೌಡ ಅವರು ಮನವಿ ಮಾಡಿದರು.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ರಾಷ್ಟ್ರದ ಪ್ರಜಾಪ್ರಭುತ್ವ ನಾಲ್ಕು ಸ್ತಂಭಗಳಾದ ವಿಧಾನಸಭೆ, ವಿಧಾನಪರಿಷತ್, ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿ ಕಳೆದ ಅರವತ್ತು ವರ್ಷಗಳ ಕಾಲ ನಾಡಿನ, ರಾಷ್ಟ್ರದ ಸೇವೆಗೈದ ಕೃಷ್ಣ ರವರು ತಾವು ನಿರ್ವಹಿಸಿದ ಪ್ರತಿ ಹುದ್ದೆಯಲ್ಲೂ ಹೆಜ್ಜೆಗುರುತು ಮೂಡಿಸಿದವರು ಎಸ್‌.ಎಂ. ಕೃಷ್ಣ ಅವರು. ಇವರ ನಿಧನ ತೀವ್ರ ದುಃಖ ತಂದಿದೆ.

SM Krishna should be honored with Karnataka Ratna Award Says Dinesh Gooligowda

1999 ರಿಂದ 2004 ಕೃಷ್ಣ ರವರು ಮುಖ್ಯಮಂತ್ರಿ ಯಾಗಿ ನಾಡಿಗೆ ಸಲ್ಲಿಸಿದ ಸೇವೆ ಅವಿಸ್ಮರಣೀಯ. ಅವರ ಕಾಲಘಟ್ಟದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಯೋಜನೆಗಳು ಇಂದಿಗೂ ಜಾರಿಯಲ್ಲಿದ್ದು ಅದು ಕೃಷ್ಣ ರವರ ದೂರದೃಷ್ಟಿಯ ಫಲವಾದದ್ದು. ಸ್ತ್ರೀ ಶಕ್ತಿ, ಅಕ್ಷರ ದಾಸೋಹ, ರೈತರಿಗೆ ಪಹಣಿ ನೀಡುವ ಭೂಮಿ ಯೋಜನೆ, ಯಶಸ್ವಿನಿ ಯೋಜನೆ ಸಮಾಜದ ಸರ್ವ ಜನರನ್ನು ಸ್ಪರ್ಶಿಸಿ ಜನಮನ ಗೆದ್ದ ಯೋಜನೆಗಳಾಗಿದ್ದವು.

ಐಟಿ ಬಿಟಿ ಕ್ಷೇತ್ರಕ್ಕೆ ಆಗಾದವಾದ ಬೆಂಬಲ ನೀಡಿ ಬೆಂಗಳೂರು ನಗರದ ಬೆಳವಣಿಗೆಗೆ ಹಾಕಿಕೊಟ್ಟ ಭದ್ರ ಭೂನಾದಿಯಿಂದ ಜಾಗತಿಕ‌ ಮಟ್ಟದಲ್ಲಿ ಬೆಂಗಳೂರು ಸಿಲಿಕ್ಯಾನಾ ವ್ಯಾಲಿ ಎಂದು ಹೆಸರು ಗಳಿಸಿ ಅಮೇರಿಕಾದ ಕ್ಯಾಲಿಪೋರ್ನಿಯ ನಗರಕ್ಕೆ ಪರ್ಯಾಯವಾಗಿ ಹೆಸರು ಗಳಿಸಿತ್ತು. ಇಂದು ರಾಜ್ಯದ ಆಯವ್ಯಯ ಮೂರು ಲಕ್ಷ ಕೋಟಿ ದಾಟಿದ್ದರೆ ಅದಕ್ಕೆ ಕಾರಣ ಕೃಷ್ಣ ರವರು ಐಟಿ ಕ್ಷೇತ್ರಕ್ಕೆ ನೀಡಿದ ಅವಕಾಶಗಳೆ ಕಾರಣ. ಲಕ್ಷಾಂತರ ಉದ್ಯೋಗ ಸೃಷ್ಟಿಸಿ ಹಲವು ಮೂಲಭೂತ ಸೌಕರ್ಯಗಳನ್ನು ನೀಡಿ ಕನ್ನಡ ನಾಡನ್ನು ವಿಶ್ವ ಭೂಪಟದಲಿ ಬೆಳಗಿಸಲು ಕೃಷ್ಣ ರವರ ಪಾತ್ರ ಅತ್ಯಂತ ಹಿರಿದಾದ್ದು.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಆರು ದಶಕಗಳ ಸುದೀರ್ಘ ಅವಧಿಗೆ ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿದ್ದವರು. ತಾವು ಅಲಂಕರಿಸಿದ ಹುದ್ದೆಗಳಿಗೆ ಅವರು ನ್ಯಾಯ ಒದಗಿಸಿಕೊಟ್ಟ ಒಬ್ಬ ಶ್ರೇಷ್ಠ ರಾಜಕಾರಣಿ. ಅವರ ಸಾಧನೆಯನ್ನು ಪರಿಗಣಿಸಿ ಭಾರತ ಸರ್ಕಾರವು ಈಚೆಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಈಗ ರಾಜ್ಯ ಸರ್ಕಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂಬುದು ನಮ್ಮೆಲ್ಲರ ಒತ್ತಾಸೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ಎಸ್‌.ಎಂ.ಕೃಷ್ಣ ಅವರ ಅಂತಿಮ ಸಂಸ್ಕಾರದ ಮಾಹಿತಿ

* ಸೋಮವಾರ ತಡರಾತ್ರಿ ನಿಧನರಾದ ಮಾಜಿ ಮುಖ್ಯಮಂತ್ರಿ, ಹಿರಿಯ ಮುತ್ಸದ್ದಿ ಎಸ್‌.ಎಂ.ಕೃಷ್ಣ ಅವರ ಅಂತಿಮ ಸಂಸ್ಕಾರ ವಿಧಿಗಳು ಡಿಸೆಂಬರ್‌ 11 ರಂದು ಬುಧವಾರ ಜರುಗಲಿವೆ.

* ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಸದಾಶಿವನಗರ ಸ್ವಗೃಹದಿಂದ ಹೊರಟು ವಾಹನದಲ್ಲಿ ದಿವಂಗತ ಕೃಷ್ಣ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುವುದು.

* ಬೆಂಗಳೂರಿನ ಟೌನ್‌ ಹಾಲ್‌, ಮೈಸೂರು ಸರ್ಕಲ್‌, ರಾಜರಾಜೇಶ್ವರಿ ಆರ್ಚ್ ಮುಖಾಂತರ, ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣ ಮೂಲಕ ಸಾಗಲಿದೆ.

* ಬೆಳಗ್ಗೆ 10.30 ಮದ್ದೂರಿಗೆ ಪಾರ್ಥಿವ ಶರೀರ ತಲುಪಲಿದೆ. ಮೃತರ ಸ್ವಗ್ರಾಮ ಸೋಮನಹಳ್ಳಿಯಲ್ಲಿ ಅಂತಿಮ ದರ್ಶನಕ್ಕೆ ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗುತ್ತದೆ.

* ಮಧ್ಯಾಹ್ನ 3 ಗಂಟೆಯ ನಂತರ ಶ್ರೀರಂಗಪಟ್ಟಣದ ಪುರೋಹಿತರಾದ ಭಾನುಪ್ರಕಾಶ್ ಶರ್ಮ ಅವರು ಒಕ್ಕಲಿಗ ವಿಧಿ ವಿಧಾನಗಳ ಮೂಲಕ ಅಂತಿಮ ಸಂಸ್ಕಾರದ ವಿಧಿ, ವಿಧಾನಗಳನ್ನು ನೇರವೇರಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+