Siddaramaiah: ಸಿದ್ದರಾಮಯ್ಯ ವಿರುದ್ಧ ದೂರು ಕೊಟ್ಟಿದ್ದ ವ್ಯಕ್ತಿ...
ಸಿದ್ದರಾಮಯ್ಯ ಅವರು ಇದೀಗ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿ ಕರ್ನಾಟಕದ ಮೂಲೆ ಮೂಲೆಯಲ್ಲೂ ಪ್ರತಿಭಟನೆ ನಡೆಯುತ್ತಿದೆ. ಅದರಲ್ಲೂ, ಸಿಎಂ ಸಿದ್ದರಾಮಯ್ಯ ವಿರುದ್ಧ ಅವರ ರಾಜಕೀಯ ಜೀವನದಲ್ಲೇ ಮೊದಲ ಬಾರಿ ಈಗ ದೊಡ್ಡ ಪ್ರಮಾಣದ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಪರಿಸ್ಥಿತಿ ಕ್ಷಣಕ್ಷಣಕ್ಕೂ ಹೀಗೆ ಕಠಿಣವಾಗುತ್ತಿರುವ ಸಮಯದಲ್ಲೇ, ಸಿದ್ದರಾಮಯ್ಯ ಅವರ ವಿರುದ್ಧ ದೂರು ಕೊಟ್ಟಿದ್ದ ವ್ಯಕ್ತಿ...
ಮೈಸೂರು 'ಮುಡಾ' ಸೈಟ್ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೂಡ ತಪ್ಪು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಪ್ರಾಸಿಕ್ಯೂಷನ್‌ಗೂ ಅನುಮತಿ ನೀಡಿದ್ದರು. ಆದರೆ, ಇದೇ ನಿರ್ಧಾರದ ವಿರುದ್ಧ ರೊಚ್ಚೆಗೆದ್ದಿದ್ದ ಕಾಂಗ್ರೆಸ್ ನಾಯಕರು, ಹೈಕೋರ್ಟ್ ಮೆಟ್ಟಿಲು ಏರಿದ್ದರು. ಕಾನೂನು ಹೋರಾಟಕ್ಕೆ ಮುಂದಾದ ಕಾಂಗ್ರೆಸ್ ನಾಯಕರಿಗೆ ಆಘಾತ ಸಿಕ್ಕಿತ್ತು, ಇದೀಗ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಿ ತನಿಖೆಗೆ ಕೂಡ ಚಾಲನೆ ನೀಡಿದೆ ಕರ್ನಾಟಕದ ಲೋಕಾಯುಕ್ತ. ಆದರೆ ಇಂತಹ ಸಮಯದಲ್ಲೇ ಸಿದ್ದರಾಮಯ್ಯ ಅವರ ವಿರುದ್ಧ ದೂರು ಕೊಟ್ಟಿದ್ದ ವ್ಯಕ್ತಿ ಸ್ನೇಹಮಯಿ ಕೃಷ್ಣ...

ಸಿದ್ದರಾಮಯ್ಯ ವಿರುದ್ಧದ 'ಮುಡಾ' ಕೇಸ್‌ಗೆ...
ಅಂದಹಾಗೆ ಸಿಎಂ ಸಿದ್ದರಾಮಯ್ಯ ಅವರ ಇಡೀ ರಾಜಕೀಯ ಇತಿಹಾಸದಲ್ಲೇ 'ಮುಡಾ' ಸೈಟ್ ಹಂಚಿಕೆ ಆರೋಪ ಒಂದು ದೊಡ್ಡ ಕಪ್ಪು ಚುಕ್ಕೆ ಆಗಿದೆ. ಯಾಕಂದ್ರೆ 'ಕ್ಲೀನ್ ಹ್ಯಾಂಡ್' ಅಂತಾ ಬಿರುದು ಪಡೆದಿದ್ದ ಸಿಎಂ ಸಿದ್ದರಾಮಯ್ಯಗೆ ಆಘಾತ ಎದುರಾಗಿದೆ. 'ಮುಡಾ' ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಆಘಾತ ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ, ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಸಮ್ಮತಿ ಸೂಚಿಸಿತ್ತು. ಆ ನಂತರ ತನಿಖೆ ಕೂಡ ಆರಂಭ ಆಗಿದ್ದು, ಈ ಸಮಯದಲ್ಲೇ ಸ್ನೇಹಮಯಿ ಕೃಷ್ಣ ಅರೆಸ್ಟ್ ಆಗುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ ಎನ್ನುವ ಆರೋಪ ಕೇಳಿಬಂದಿದೆ!
ಚೆಕ್ ಬೌನ್ಸ್ ಪ್ರಕರಣಕ್ಕೆ ಮರುಜೀವ!
ಕರ್ನಾಟಕ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ 'ಮುಡಾ' ಸೈಟ್ ಹಂಚಿಕೆಗೆ ಈಗ ಭಾರಿ ಟ್ವಿಸ್ಟ್ ಸಿಕ್ಕಿದೆ. ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಸುಳಿಯಲಿದ್ದಾರೆ ಅಷ್ಟಕ್ಕೂ ಚೆಕ್ ಬೌನ್ಸ್ ಪ್ರಕರಣ ಸಂಬಂಧ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರು ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿ ಆದೇಶವನ್ನ ಹೊರಡಿಸಿದೆ. ಹೀಗಾಗಿಯೇ ಹಳೆಯ ಚೆಕ್ ಬೌನ್ಸ್ ಪ್ರಕರಣಕ್ಕೆ ಮರುಜೀವ ಇದೀಗ ಬಂದಿದ್ದು, ಈ ಸಂಬಂಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಹೀಗಾಗಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಅವರಿಗೆ ದೊಡ್ಡ ಸಮಸ್ಯೆ ಎದುರಾದಂತೆ ಈಗ ಕಾಣ್ತಾ ಇದೆ.
ಸ್ನೇಹಮಯಿ ಕೃಷ್ಣ ವಿರುದ್ಧ ಕೇಳಿಬಂದಿರುವ ಆರೋಪದ ಹಿನ್ನೆಲೆ ನೋಡುವುದಾದರೆ, ಈ ಕೇಸ್ 2015 ರಲ್ಲಿ ದಾಖಲಾಗಿದ್ದ ಚೆಕ್ ಬೌನ್ಸ್ ಪ್ರಕರಣ. ಎನ್. ಕುಮಾರ್ ಎಂಬುವವರು ಈ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಈಗ ಸ್ನೇಹಮಯಿ ಕೃಷ್ಣಗೆ ಈ ಕೇಸ್‌ನಲ್ಲಿ ಭಾರಿ ದೊಡ್ಡ ಸಮಸ್ಯೆ ಎದುರಾಗಿದೆ ಎಂಬ ಆರೋಪ ಕೇಳಿಬಂದಿದೆ.












Click it and Unblock the Notifications