55 ಲಕ್ಷ ವಿದ್ಯಾರ್ಥಿಗಳಿಗೆ ವೇತನ ಮಂಜೂರಿಗೆ ಕುಮಾರಸ್ವಾಮಿ ಸೂಚನೆ

ಬೆಂಗಳೂರು, ಜೂನ್ 12: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ರಾಜ್ಯದ 55 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಕಾರ್ಯವನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸಲು ಸಿಎಂ ಕುಮಾರಸ್ವಾಮಿ ಸೂಚಿಸಿದರು.

ವಿಧಾನಸಭೆಯಲ್ಲಿ ನಡೆದ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿಷಯಗಳ ಪರಿಶೀಲನೆಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಜಿಲ್ಲಾಧಿಕಾರಿಗಳು, ಸಿಇಒಗಳು ಕಡ್ಡಾಯವಾಗಿ ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಆಹಾರದ ಗುಣಮಟ್ಟ, ಸ್ವಚ್ಛತೆ, ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯ ಹಾಗೂ ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಕೆಲವು ಹಾಸ್ಟೆಲ್ ಗಳಲ್ಲಿ ಅನಧಿಕೃತವಾಗಿ ಕೆಲವರು ಉಳಿದುಕೊಂಡಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದರು.

Social welfare department officers meeting with CM Kumaraswamy

ಎಸ್.ಸಿ.ಎಸ್.ಪಿ. / ಟಿ.ಎಸ್.ಪಿ ಯೋಜನೆಗಳಡಿ ಕಾರ್ಯಕ್ರಮಗಳನ್ನು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಲು ಸೂಚಿಸಲಾಯಿತು.

ಇದಕ್ಕೂ ಮುನ್ನಾ ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳ ಸಭೆಯನ್ನು ನಡೆಸಿ ಹಲವು ಅಗತ್ಯ ಸೂಚನೆಗಳನ್ನು, ಎಚ್ಚರಿಕೆಗಳನ್ನು ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+