ಸಚಿವ ಆಂಜನೇಯ ಪ್ರಕರಣ : ಯಾರು, ಏನು ಹೇಳಿದರು?
ಬೆಂಗಳೂರು, ನವೆಂಬರ್ 06 : 'ಹಾಸ್ಟೆಲ್‌ಗಳಿಗೆ ಆಹಾರ ಧಾನ್ಯ ಪೂರೈಸುವ ಟೆಂಡರ್ ನೀಡಲು ಲಂಚ ಪಡೆಯಲಾಗುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು' ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತ ಪ್ರತಿಪಕ್ಷಗಳು ಆಂಜನೇಯ ಅವರ ರಾಜೀನಾಮೆಗೆ ಒತ್ತಾಯಿಸಿವೆ.
ಖಾಸಗಿ ವಾಹಿನಿಯ ರಹಸ್ಯ ಕಾರ್ಯಾಚರಣೆ ಪ್ರಸಾರವಾದ ಬಳಿಕ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಂಜನೇಯ ಅವರು,'ಭ್ರಷ್ಟಾಚಾರ ಆರೋಪವು ನನ್ನನ್ನು ರಾಜಕೀಯವಾಗಿ ಮುಗಿಸಲು ನಡೆಸಿರುವ ಪಿತೂರಿ. ನನ್ನ ತೇಜೋವಧೆ ಸಂಚು ಮಾಡಲಾಗಿದೆ' ಎಂದು ಆರೋಪಿಸಿದರು. [ಸಚಿವ ಆಂಜನೇಯ ಪತ್ನಿಯಿಂದಲೇ ಅಕ್ಕಿ ಕಮಿಷನ್ ಡೀಲ್?]
'ನಮ್ಮ ಮನೆಗೆ ಯಾರೋ ಬಂದು ನನ್ನ ಪತ್ನಿಯನ್ನು ಭೇಟಿ ಮಾಡಲು ಇಚ್ಛಿಸಿದರು. ಆಗ ದುಡ್ಡಿನ ವಿಚಾರ ಮಾತನಾಡಿಲ್ಲ. ಅವರು ಮನೆಯಿಂದ ಹೊರ ಹೋದ ನಂತರ ಟೇಬಲ್ ಮೇಲೆ ಒಂದು ಕವರ್ ಇತ್ತು. ಅದರಲ್ಲಿ ಹಣ ಇರಲಿಲ್ಲ' ಎಂದು ಆಂಜನೇಯ ಸ್ಪಷ್ಟಪಡಿಸಿದರು.
ಸಚಿವ ಆಂಜನೇಯ ಅವರ ನಿವಾಸದಲ್ಲಿನ ಡೀಲ್ ಬಗ್ಗೆ ಪ್ರತಿಕ್ರಿಯೆ ನೀಡದೆ ನುಣುಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ನನಗೆ ಆಂಜನೇಯ ವಿಚಾರ ಏನೂ ಗೊತ್ತಿಲ್ಲ' ಎಂದು ಚುಟುಕಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಆಂಜನೇಯ ವಿಚಾರದಲ್ಲಿ ಯಾರು ಏನು ಹೇಳಿದರು ಚಿತ್ರಗಳಲ್ಲಿ ನೋಡಿ...

'ನನಗೆ ಆಂಜನೇಯ ವಿಚಾರ ಏನೂ ಗೊತ್ತಿಲ್ಲ'
ಸಚಿವ ಆಂಜನೇಯ ಅವರ ನಿವಾಸದಲ್ಲಿನ ಡೀಲ್ ಬಗ್ಗೆ ಪ್ರತಿಕ್ರಿಯೆ ನೀಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ನನಗೆ ಆಂಜನೇಯ ವಿಚಾರ ಏನೂ ಗೊತ್ತಿಲ್ಲ' ಎಂದು ಹೇಳಿದ್ದಾರೆ.

'ಸರ್ಕಾರದ ಬಣ್ಣ ಈಗ ಬಯಲಾಗಿದೆ'
ಸಚಿವ ಆಂಜನೇಯ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಮತ್ತು ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರು 'ನಮ್ಮ ಸಂಪುಟದಲ್ಲಿ ಭ್ರಷ್ಟರು ಇಲ್ಲ. ನಾವು ಸತ್ಯಹರಿಶ್ಚಂದ್ರನ ವಂಶದವರು ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದರು, ಈಗ ಬಣ್ಣ ಬಯಲಾಗಿದೆ. ಆಂಜನೇಯ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಒತ್ತಾಯಿಸಿದ್ದಾರೆ.

'ತಕ್ಷಣ ಸಂಪುಟದಿಂದ ವಜಾ ಮಾಡಿ'
'ಸಚಿವ ಆಂಜನೇಯ ಅವರನ್ನು ತಕ್ಷಣ ಸಂಪುಟದಿಂದ ವಜಾ ಮಾಡಿ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ. 'ಸಚಿವರ ನಿವಾಸದಲ್ಲಿಯೇ ಈ ಅವ್ಯವಹಾರ ನಡೆದಿರುವುದು ಶೋಚನೀಯ. ಬಡಮಕ್ಕಳಿಗೆ ನೀಡುವ ಊಟದಲ್ಲಿ ಹಣ ಲೂಟಿ ಮಾಡಲು ಪ್ರಯತ್ನ ನಡೆಸಿರುವುದು ನಾಚಿಕೆಗೇಡಿನ ಸಂಗತಿ' ಎಂದು ಹೇಳಿದ್ದಾರೆ.

'ಆಂಜನೇಯ ಅವರು ರಾಜೀನಾಮೆ ನೀಡಲಿ'
'ಹಾಸ್ಟೆಲ್‌ಗಳಿಗೆ ಆಹಾರ ಧಾನ್ಯ ಸರಬರಾಜು ಮಾಡುವ ವಿಚಾರದಲ್ಲಿ ಅಕ್ರಮ ನಡೆದಿರುವುದು ರಹಸ್ಯ ಕಾರ್ಯಾಚರಣೆಯಲ್ಲಿ ಬಯಲಾಗಿದೆ. ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸಚಿವರು ನೀಡಿದ ಸ್ಪಷ್ಟನೆಗಳು
ಸಚಿವ ಆಂಜನೇಯ ಅವರು ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, 'ಜಿಲ್ಲಾ ಮಟ್ಟದಲ್ಲಿ ಆಹಾರ ಪೂರೈಕೆಗೆ ಗುತ್ತಿಗೆ ಕರೆಯಲಾಗಿತ್ತು. ಟೆಂಡರ್ ಪ್ರಕ್ರಿಯೆಯಲ್ಲಿ 17 ಜನ ಭಾಗವಹಿಸಿದ್ದರು. ಅರ್ಹ ಎಲ್1 ಗುತ್ತಿಗೆದಾರರಿಗೆ ಆಹಾರ ಪೂರೈಕೆಗೆ ಅನುಮತಿ ನೀಡಲಾಗಿತ್ತು. ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದೆ' ಎಂದು ಹೇಳಿದ್ದಾರೆ. 'ಈ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ' ಎಂದು ತಿಳಿಸಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications