ಮುಖ್ಯಮಂತ್ರಿಯಿಂದ ರಾಜ್ಯದ ಜನರಿಗೆ 'ಮಣ್ಣು ತಿನ್ನೋ ಭಾಗ್ಯ'
ಮಂಡ್ಯ, ಸೆಪ್ಟೆಂಬರ್ 20: ಕಾವೇರಿ ಮೇಲುಸ್ತುವಾರಿ ಸಮಿತಿ ಆದೇಶ ಹೊರಬಿದ್ದ ಮೇಲೆ ಮಂಡ್ಯದಲ್ಲಿ ಮತ್ತೆ ಆಕ್ರೋಶ ವ್ಯಕ್ತವಾಗುತ್ತಿದೆ. ಜಿಲ್ಲೆಯಲ್ಲೆ ಹಲವೆಡೆ ನಿಷೇಧಾಜ್ಞೆ ಜಾರಿಯಾಗಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ.
ಇನ್ನು ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದು, ಮುಖ್ಯಮಂತ್ರಿಗಳು ತಮಿಳುನಾಡಿಗೆ ಕಾವೇರಿ ನೀರು ಬಿಡುವ ನಿರ್ಧಾರ ಕೈಗೊಂಡು, ರಾಜ್ಯದ ಜನರಿಗೆ 'ಮಣ್ಣು ತಿನ್ನುವ ಭಾಗ್ಯ' ನೀಡಿದ್ದಾರೆ ಎಂದು ವ್ಯಂಗ್ಯವಾಡಿದರು. ಇಂದಿನ ಪರಿಸ್ಥಿತಿಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.[ಬೆಂಗಳೂರಿನ ನೀರಿನ ಸಮಸ್ಯೆಗೆ 'ದಿವ್ಯ' ಉಪಾಯ ನೀಡಿದ ರಮ್ಯಾ]

ಮಂಡ್ಯದ ಸರ್ ಎಂ.ವಿ. ಪ್ರತಿಮೆ ಎದುರು ಜಮೆಯಾದ ಬಿಜೆಪಿ ಕಾರ್ಯಕರ್ತರು ಕೈಯಲ್ಲಿ ಮಣ್ಣು ಹಿಡಿದು, ಘೋಷಣೆಗಳನ್ನು ಕೂಗಿದರು. ಇನ್ನು ರೈತ ಸಂಘದ ಕಾರ್ಯಕರ್ತರು ತಲೆ ಮೇಲೆ ಚಪ್ಪಲಿ ಇಟ್ಟುಕೊಂಡು, ಪ್ರತಿಭಟನೆ ನಡೆಸಿದರು.
ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.[ಮೆಟ್ಟೂರು ಜಲಾಶಯದಿಂದ ನೀರು ಬಿಟ್ಟ ತಮಿಳುನಾಡು]

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಆದೇಶ ನೀಡಿದ ಮೇಲುಸ್ತುವಾರಿ ಸಮಿತಿಗೆ ಧಿಕ್ಕಾರದ ಘೋಷಣೆಗಳನ್ನು ಕೂಗಿದ ಪ್ರತಿಭಟನಾನಿರತರು, ಈ ನಿರ್ಣಯ ಅಮಾನವೀಯ ಎಂದು ಖಂಡಿಸಿದರು.












Click it and Unblock the Notifications