ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಈ ವರ್ಷಾಂತ್ಯಕ್ಕೆ ಸಂಭವಿಸಲಿದೆ ಸೌರವ್ಯೂಹದ ಅಪರೂಪದ ವಿದ್ಯಮಾನ!

|
Google Oneindia Kannada News

ಬೆಂಗಳೂರು, ಡಿಸೆಂಬರ್ 16: ಡಿಸೆಂಬರ್ 26 ರಂದು ನಮ್ಮ ಸೌರವ್ಯೂಹ ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಗಲಿದೆ. ಬಹಳ ಅಪರೂಪಕ್ಕೆ ಎಂಬಂತೆ ಕಾಣುವ ಕಂಕಣ ಸೂರ್ಯಗ್ರಹಣ ಅಂದು ಸಂಭವಿಸಲಿದೆ.

ಅಂದು ಬೆಳಿಗ್ಗೆ 8.6 ಕ್ಕೆ ಪ್ರಾರಂಭವಾಗುವ ಕಂಕಣ ಸೂರ್ಯಗ್ರಹಣ ಬೆಳಿಗ್ಗೆ 11.11 ಕ್ಕೆ ಮುಕ್ತಾಯವಾಗಲಿದೆ. ಬೆಳಿಗ್ಗೆ 9 ರ ಸುಮಾರು ಇದರ ಪೂರ್ಣ ದರ್ಶನವಾಗಲಿದೆ. ಇದೊಂದು ಕಂಕಣ ಸೂರ್ಯಗ್ರಹಣವಾಗಿದ್ದು, ಕರ್ನಾಟಕದ ಮಟ್ಟಿಗೆ ಈ ರೀತಿಯ ಸೂರ್ಯಗ್ರಹಣ ಆಕಾಶದಲ್ಲಿ ಕಾಣುವುದು ಮುಂದೆ 2064 ನೇ ವರ್ಷದಲ್ಲಿ. ಈ ಸೂರ್ಯಗ್ರಹಣ ಭಾರತದಲ್ಲಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಕಾಣಿಸಿಕೊಳ್ಳಲಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಶೇ 90 ರಷ್ಟು ಕಂಡರೆ, ಉಳಿದ ಭಾಗದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಕಾಣಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ವಾಹ್! ಸೂರ್ಯಗ್ರಹಣದ ಅತ್ಯಾಕರ್ಷಕ, ಅಪರೂಪದ ಚಿತ್ರಗಳನ್ನು ನೋಡಿ ವಾಹ್! ಸೂರ್ಯಗ್ರಹಣದ ಅತ್ಯಾಕರ್ಷಕ, ಅಪರೂಪದ ಚಿತ್ರಗಳನ್ನು ನೋಡಿ

Solar Eclipse In Karnataka On December 26th 2019

ಸೂರ್ಯಗ್ರಹಣದಲ್ಲಿ ಖಗ್ರಾಸಗ್ರಹಣ (ಪೂರ್ಣ ಪ್ರಮಾಣದ ಗ್ರಹಣ) ಹಾಗೂ ಕಂಕಣಗ್ರಹಣ (ಭಾಗಶಃ ಗ್ರಹಣ) ಎಂಬ ಎರಡು ಬಗೆ ಇವೆ. ವರ್ಷಾಂತ್ಯಕ್ಕೆ ಕಾಣಿಸುತ್ತಿರುವುದು ಕಂಕಣ ಸೂರ್ಯಗ್ರಹಣ. ಭೂಮಿ ಮತ್ತು ಸೂರ್ಯನ ನಡುವೆ ಚಂದ್ರ ಬಂದಾಗ ಸೂರ್ಯಗ್ರಹಣ ಸಂಭವಿಸುತ್ತದೆ. 2010 ರಲ್ಲಿ ಭಾರತದಲ್ಲಿ ಈ ಹಿಂದೆ ಕಂಕಣ ಸೂರ್ಯಗ್ರಹಣ ಸಂಭವಿಸಿತ್ತು.

English summary
Solar eclipse In Karnataka On December 26th 2019. This is the very rare solar Eclipse. it is show next time on 2064.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X