ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರು ಹಿಡಿಶಾಪ ಹಾಕುವ ಮೊದಲು ಯಡಿಯೂರಪ್ಪ ಎಚ್ಚೆತ್ತುಕೊಳ್ಳಲಿ: ಎಚ್ಡಿಕೆ

|
Google Oneindia Kannada News

ಬೆಂಗಳೂರು, ಆ 20: ರೈತರು ಮತ್ತು ಗೊಬ್ಬರ ಪೂರೈಕೆ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ ಸರಕಾರಕ್ಕೆ ಮನವಿಯನ್ನು ಮಾಡಿದ್ದಾರೆ. ಈ ಸಂಬಂಧ, ಎಚ್ಡಿಕೆ ಮಾಡಿರುವ ಟ್ವೀಟ್ ಹೀಗಿದೆ:

Recommended Video

ಮತ್ತೆ ಸ್ವಚ್ಛ ನಗರ ಗೌರವ ಮುಡಿಗೆರಿಸಿಕೊಂಡ ಮೈಸೂರು! | Oneindia Kannada

"ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು".

ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ!ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ!

'ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು".

Solve The Farmers Fertiizer Issue In North Karnataka On Priority: HD Kumaraswamy Tweet

"ವಾಡಿಕೆಗಿಂತ ಈ ಬಾರಿ ರಾಜ್ಯದಾದ್ಯಂತ ಶೇಕಡ 25ರಷ್ಟು ಹೆಚ್ಚು ಬಿತ್ತನೆ ಆಗಿದೆ. ಕೃಷಿ ಇಲಾಖೆ ಇದನ್ನು ಅಂದಾಜಿಸುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ. ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು".

"ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಗೊಬ್ಬರ ಕೊರತೆಯಿಂದ ಬಿತ್ತನೆ ಕಾರ್ಯ ನಿಲ್ಲಿಸದಂತೆ ತುರ್ತು ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ" ಎಂದು ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಪ್ರಚಾರಕ್ಕೆ ಮೀಸಲಾದ ಮುಖ್ಯಮಂತ್ರಿಗಳ ಜನತಾ ದರ್ಶನ, ಸಿಗಲಿಲ್ಲ ನ್ಯಾಯ ಪ್ರಚಾರಕ್ಕೆ ಮೀಸಲಾದ ಮುಖ್ಯಮಂತ್ರಿಗಳ ಜನತಾ ದರ್ಶನ, ಸಿಗಲಿಲ್ಲ ನ್ಯಾಯ

ಡಿ.ದೇವರಾಜು ಅರಸು ಅವರ ಜನ್ಮದಿನದ ಪ್ರಯುಕ್ತ ಟ್ವೀಟ್ ಮಾಡಿರುವ ಕುಮಾರಸ್ವಾಮಿ, "ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ ಸ್ಮರಿಸಿಕೊಳ್ಳುತ್ತೇನೆ" ಎಂದು ಹೇಳಿದ್ದಾರೆ.

English summary
Solve The Farmers Fertiizer Issue In North Karnataka On Priority: HD Kumaraswamy Tweet,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X