ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಕುಮಾರಸ್ವಾಮಿಗೆ ಶಾಸಕರ ಸಲಹೆ
ಬೆಂಗಳೂರು, ಜುಲೈ 26: ಒಂದು ವರ್ಷ ನಾಲ್ಕು ತಿಂಗಳು ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ನಡೆಸಿದ್ದ ಕುಮಾರಸ್ವಾಮಿ ಅವರಿಗೆ ಈಗ ಬಿಜೆಪಿಗೆ ಬೆಂಬಲ ನೀಡುವಂತೆ ಒತ್ತಡ ಬರುತ್ತಿದೆ.
ಇಂದು ನಡೆದ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಕೆಲವು ಶಾಸಕರು, 'ಬಿಜೆಪಿಗೆ ಬೆಂಬಲ ನೀಡೋಣ' ಎಂಬ ಸಲಹೆಯನ್ನು ನೀಡಿದ್ದಾರೆ. ಆದರೆ ಈ ಬಗ್ಗೆ ಕುಮಾರಸ್ವಾಮಿ ಹಾಗೂ ದೇವೇಗೌಡ ಅವರು ನಿರ್ಧಾರ ಮಾಡಬೇಕಿದೆ.
ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಬೇಕೆಂದು ಕೆಲವು ಶಾಸಕರು ಹೇಳಿದ್ದರೆ ಇನ್ನು ಕೆಲವರು ಬಾಹ್ಯ ಬೆಂಬಲವನ್ನು ನೀಡಿ ಸರ್ಕಾರ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳೋಣ ಎಂದು ಸಲಹೆ ನೀಡಿದ್ದಾರೆ.

ಸಭೆಯ ಬಳಿಕ ಜಿಟಿ.ದೇವೇಗೌಡ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಕೆಲವು ಶಾಸಕರು, ವಿರೋಧ ಪಕ್ಷದಲ್ಲಿ ಕೂತು, ಪಕ್ಷವನ್ನು ಗಟ್ಟಿಗೊಳಿಸಿಕೊಳ್ಳೋಣ ಎಂದು ಸಲಹೆ ನೀಡಿದ್ದಾರೆ.
ನಿರ್ಧಾರವು ಕುಮಾರಸ್ವಾಮಿ ಹಾಗೂ ದೇವೇಗೌಡ ಅವರಿಗೆ ಬಿಟ್ಟಿದ್ದಾಗಿದ್ದು, ಈ ಇಬ್ಬರೂ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.
ಸೋಮವಾರ ಯಡಿಯೂರಪ್ಪ ಅವರು ಬಹುಮತ ಸಾಬೀತು ಮಾಡಬೇಕಾಗಿದ್ದು, ಆ ಒಳಗೆ ಕುಮಾರಸ್ವಾಮಿ ಅವರು ನಿರ್ಧಾರ ಪ್ರಕಟಿಸಲಿದ್ದಾರೆ.












Click it and Unblock the Notifications