• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಕುಮಾರಸ್ವಾಮಿಗೆ ಶಾಸಕರ ಸಲಹೆ

|
Google Oneindia Kannada News

ಬೆಂಗಳೂರು, ಜುಲೈ 26: ಒಂದು ವರ್ಷ ನಾಲ್ಕು ತಿಂಗಳು ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ನಡೆಸಿದ್ದ ಕುಮಾರಸ್ವಾಮಿ ಅವರಿಗೆ ಈಗ ಬಿಜೆಪಿಗೆ ಬೆಂಬಲ ನೀಡುವಂತೆ ಒತ್ತಡ ಬರುತ್ತಿದೆ.

ಇಂದು ನಡೆದ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಕೆಲವು ಶಾಸಕರು, 'ಬಿಜೆಪಿಗೆ ಬೆಂಬಲ ನೀಡೋಣ' ಎಂಬ ಸಲಹೆಯನ್ನು ನೀಡಿದ್ದಾರೆ. ಆದರೆ ಈ ಬಗ್ಗೆ ಕುಮಾರಸ್ವಾಮಿ ಹಾಗೂ ದೇವೇಗೌಡ ಅವರು ನಿರ್ಧಾರ ಮಾಡಬೇಕಿದೆ.

ಕುಮಾರಸ್ವಾಮಿ ಅವಧಿಯಲ್ಲಿದ್ದ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ರಾಜೀನಾಮೆ ಕುಮಾರಸ್ವಾಮಿ ಅವಧಿಯಲ್ಲಿದ್ದ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ರಾಜೀನಾಮೆ

ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಬೇಕೆಂದು ಕೆಲವು ಶಾಸಕರು ಹೇಳಿದ್ದರೆ ಇನ್ನು ಕೆಲವರು ಬಾಹ್ಯ ಬೆಂಬಲವನ್ನು ನೀಡಿ ಸರ್ಕಾರ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳೋಣ ಎಂದು ಸಲಹೆ ನೀಡಿದ್ದಾರೆ.

ಸಭೆಯ ಬಳಿಕ ಜಿಟಿ.ದೇವೇಗೌಡ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಕೆಲವು ಶಾಸಕರು, ವಿರೋಧ ಪಕ್ಷದಲ್ಲಿ ಕೂತು, ಪಕ್ಷವನ್ನು ಗಟ್ಟಿಗೊಳಿಸಿಕೊಳ್ಳೋಣ ಎಂದು ಸಲಹೆ ನೀಡಿದ್ದಾರೆ.

"ಸ್ಥಿರ ಸರ್ಕಾರ ಯಾರಿಂದಲೂ ಸಾಧ್ಯವಿಲ್ಲ": ಹಂಗಾಮಿ ಸಿಎಂ ಘೋಷಣೆ

ನಿರ್ಧಾರವು ಕುಮಾರಸ್ವಾಮಿ ಹಾಗೂ ದೇವೇಗೌಡ ಅವರಿಗೆ ಬಿಟ್ಟಿದ್ದಾಗಿದ್ದು, ಈ ಇಬ್ಬರೂ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.

ಸಿಎಂ ಆಗುವ ಮೊದಲೇ ಕುಮಾರಸ್ವಾಮಿ ಆದೇಶಗಳಿಗೆ ತಡೆ ನೀಡಿದ ಯಡಿಯೂರಪ್ಪ ಸಿಎಂ ಆಗುವ ಮೊದಲೇ ಕುಮಾರಸ್ವಾಮಿ ಆದೇಶಗಳಿಗೆ ತಡೆ ನೀಡಿದ ಯಡಿಯೂರಪ್ಪ

ಸೋಮವಾರ ಯಡಿಯೂರಪ್ಪ ಅವರು ಬಹುಮತ ಸಾಬೀತು ಮಾಡಬೇಕಾಗಿದ್ದು, ಆ ಒಳಗೆ ಕುಮಾರಸ್ವಾಮಿ ಅವರು ನಿರ್ಧಾರ ಪ್ರಕಟಿಸಲಿದ್ದಾರೆ.

English summary
Some JDS MLAs advises Kumaraswamy to support BJP, some MLAs opposed it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X