ಮೈತ್ರಿ ಸರ್ಕಾರದ ಬಜೆಟ್‌ಗೆ ಮಂತ್ರಿಗಳಿಂದಲೇ ಅಸಮಾಧಾನ!

ಬೆಂಗಳೂರು, ಜುಲೈ 05: ತಮ್ಮದೇ ಸರ್ಕಾರದ ಬಜೆಟ್‌ಗೆ ಕೆಲವು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕೆಲವು ಕಾಂಗ್ರೆಸ್ ಶಾಸಕರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂತ್ರಿಗಳಾದ ಜಮೀರ್ ಅಹ್ಮದ್ ಮತ್ತು ಯುಟಿ ಖಾದರ್ ಅವರು ಬಜೆಟ್‌ ಬಗ್ಗೆ ಬೇಸರ ವ್ಯಕ್ತಿಪಡಿಸಿದ್ದು, ಅಲ್ಪಸಂಖ್ಯಾತರಿಗೆ ಬಜೆಟ್‌ನಲ್ಲಿ ಏನೂ ಯೋಜನೆಗಳಿಲ್ಲ ಎಂಬುದೇ ಈ ಇಬ್ಬರ ಅಸಮಾಧಾನಕ್ಕೆ ಕಾರಣ.

ಬಜೆಟ್ ಮಂಡನೆ ಮುಗಿಯುತ್ತಿದ್ದಂತೆ ಈ ಇಬ್ಬರೂ ಸಚಿವರು ಮುಖ್ಯಮಂತ್ರಿ ಬಳಿ ತೆರಳಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದ್ದು, ಕುಮಾರಸ್ವಾಮಿ ಅವರು ಇಬ್ಬರಿಗೂ ಮುಂದಿನ ಬಾರಿ ಯೋಜನೆ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Some Ministers unhappy with their government budget

ಸಚಿವ ಸ್ಥಾನ ಸಿಗದೆ ಅತೃಪ್ತರಾಗಿದ್ದ ಎಚ್‌.ಕೆ.ಪಾಟೀಲ್ ಅವರೂ ಸಹ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಿರುವುದೇ ಅವರ ಅಸಮಾಧಾನಕ್ಕೆ ಕಾರಣ ಎನ್ನಲಾಗಿದೆ.

ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಳೆದ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ನೀಡಿದ ಕಾರ್ಯಕ್ರಮಗಳನ್ನೇ ಮುಂದುವರೆಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಕರಾವಳಿ ಜಿಲ್ಲೆಗೂ ಇದೇ ನೀತಿಯನ್ನು ಅನುಸರಿಸುವುದಾಗಿಯೂ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+