ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್, ಜೆಡಿಎಸ್‌ನಿಂದ ಬಿಜೆಪಿಗೆ ಮತ್ತಷ್ಟು ಶಾಸಕರು: ಹಳೆ ಮೈಸೂರಿನಿಂದ ವಲಸೆ?

|
Google Oneindia Kannada News

Recommended Video

ಕರ್ನಾಟಕ ಕಾಂಗ್ರೆಸ್, ಜೆಡಿಎಸ್ ನಿಂದ ಮತ್ತಷ್ಟು ಶಾಸಕರು ಬಿಜೆಪಿಗೆ ವಲಸೆ

ಬೆಂಗಳೂರು, ಆಗಸ್ಟ್ 17: ಕಾಂಗ್ರೆಸ್ , ಜೆಡಿಎಸ್‌ನಿಂದ ಬಿಜೆಪಿಗೆ ಮತ್ತಷ್ಟು ಶಾಸಕರು ವಲಸೆ ಬರಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಳೆ ಮೈಸೂರಿನಿಂದ ಶಾಸಕರು ವಲಸೆ ಬರಲಿದ್ದಾರೆ.

ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜೀನಾಮೆ ಪರ್ವ ಮುಕ್ತಾಯಗೊಂಡಿದೆ ಎಂಬ ನಿರೀಕ್ಷೆ ಹುಸಿಯಾಗುವ ಸಾಧ್ಯತೆ ಇದೆ, ಮತ್ತೊಂದು ಸುತ್ತಿನ ರಾಜೀನಾಮೆ ಪರ್ವ ಆರಂಭವಾಗುವ ನಿರೀಕ್ಷೆ ಇದೆ.

ಜೆಡಿಎಸ್ ಶಾಸಕ ಬಿಜೆಪಿಯತ್ತ ಹೆಜ್ಜೆ? ಮಗನಿಗೆ ಟಿಕೆಟ್ ಕೊಡಿಸಲು ಯತ್ನ ಜೆಡಿಎಸ್ ಶಾಸಕ ಬಿಜೆಪಿಯತ್ತ ಹೆಜ್ಜೆ? ಮಗನಿಗೆ ಟಿಕೆಟ್ ಕೊಡಿಸಲು ಯತ್ನ

ಮೂರನೇ ಎರಡು ಭಾಗದಷ್ಟು ಶಾಸಕರು ರಾಜೀನಾಮೆ ನೀಡಿದರೆ ಶಾಸಕ ಸ್ತಾನಕ್ಕೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ. ಜೆಡಿಎಸ್ ಸಂಖ್ಯಾ ಬಲದ ಆಧಾರದ ಮೇಲೆ ಆ ಪ್ರಮಾಣದಲ್ಲಿ ಜೆಡಿಎಸ್ ಶಾಸಕರು ಬಿಜೆಪಿಯತ್ತ ವಲಸೆ ಹೋಗುವ ನಿಟ್ಟಿಲ್ಲಿ ಆಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

Some More MLA From JDS And Congress May Switch Over To BJP

ತಮ್ಮ ಭವಿಷ್ಯದ ದೃಷ್ಟಿಯಿಂದ ಜೆಡಿಎಸ್‌ನ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗದ ಹಲವು ಶಾಸಕರು ಬಿಜೆಪಿಯತ್ತ ಒಲವು ತೋರಿದ್ದು, ಈ ಬಗ್ಗೆ ತೆರೆಮರೆಯಲ್ಲಿ ಪ್ರಯತ್ನಗಳು ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಜೆಡಿಎಸ್ ಜೊತೆಗೆ ಕಾಂಗ್ರೆಸ್ ಪಕ್ಷದ ಕೆಲವು ಶಾಸಕರು ರಾಜೀನಾಮೆ ನೀಡಿ ಪಕ್ಷಕ್ಕೆ ಬೆಂಬಲ ಸೂಚಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಯಡಿಯೂರಪ್ಪ ಭೇಟಿ ಬಗ್ಗೆ ಹಾಸನ ಜೆಡಿಎಸ್ ಅಧ್ಯಕ್ಷ ಲಿಂಗೇಶ್ ಹೇಳಿದ್ದೇನು?ಯಡಿಯೂರಪ್ಪ ಭೇಟಿ ಬಗ್ಗೆ ಹಾಸನ ಜೆಡಿಎಸ್ ಅಧ್ಯಕ್ಷ ಲಿಂಗೇಶ್ ಹೇಳಿದ್ದೇನು?

ಆದರೆ ಎಷ್ಟು ಸಂಖ್ಯೆಯಲ್ಲಿ ಬಿಜೆಪಿಗೆ ಆಕರ್ಷಿತರಾಗಿದ್ದಾರೆ ಎಂಬುದು ನಿಖರವಾಗಿ ತಿಳಿದಿಲ್ಲ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವ ಕಾರಣ ರಾಜ್ಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಬಿಜೆಪಿಗೆ ಬೆಂಬಲ ನೀಡಿದರೆ ತಮಗೂ ಪ್ರಯೋಜನವಾಗಲಿದೆ ಎನ್ನುವ ನಂಬಿಕೆ ಅವರದ್ದಾಗಿದೆ.

English summary
Some More MLAs From Congress and JDS will Joins BJP shortly. According to the xource these MLAs are May be from Old Mysuru Region.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X