ಡಿಕೆಶಿಗೆ ಕೋವಿಡ್ ಸೋಂಕು; ಸೋನಿಯಾ ಗಾಂಧಿ ದೂರವಾಣಿ ಕರೆ

ಬೆಂಗಳೂರು, ಆಗಸ್ಟ್ 25 : ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ಸೋಂಕು ತಗುಲಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ. ವಿವಿಧ ಪಕ್ಷಗಳ ಹಲವಾರು ನಾಯಕರು ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

Recommended Video

      DK Shivakumar, ಕನಕಪುರ ಬಂಡೆನು ಬಿಡಲಿಲ್ಲ ಕೊರೋನ! | Oneindia Kannada

      ಮಂಗಳವಾರ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿಯ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಅನೇಕ ಹಿರಿಯ ಕಾಂಗ್ರೆಸ್ ನಾಯಕರು ಟ್ವೀಟ್, ದೂರವಾಣಿ ಕರೆ ಮಾಡಿ ಡಿ. ಕೆ. ಶಿವಕುಮಾರ್ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

      ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಅನೇಕ ನಾಯಕರು ಡಿ. ಕೆ. ಶಿವಕುಮಾರ್ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಕೆ ತಿಳಿಸಿದ್ದಾರೆ.

      ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಸಹ ಡಿ. ಕೆ. ಶಿವಕುಮಾರ್ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿ ಟ್ವೀಟ್ ಮಾಡಿದ್ದಾರೆ.

      ಯಡಿಯೂರಪ್ಪ ಶುಭ ಹಾರೈಕೆ

      ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು, " ಡಿ. ಕೆ. ಶಿವಕುಮಾರ್‌ ಅವರು ಕೊರೊನಾ ಸೋಂಕಿನಿಂದ ಪೂರ್ಣ ಗುಣಮುಖರಾಗಿ, ಮತ್ತೆ ಎಂದಿನಂತೆ ತಮ್ಮ ಕಾರ್ಯಕ್ಷೇತ್ರದಲ್ಲಿ ಸಕ್ರಿಯರಾಗಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.

      ಸಿದ್ದರಾಮಯ್ಯ ಹಾರೈಕೆ

      ಸಿದ್ದರಾಮಯ್ಯ ಹಾರೈಕೆ

      ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, "ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಕೊರೊನಾ ಸೋಂಕಿಗೆ ತುತ್ತಾಗಿರುವ ಸುದ್ದಿ ತಿಳಿದು ಬೇಸರವಾಯಿತು. ಆದಷ್ಟು ಬೇಗ ಸೋಂಕಿನಿಂದ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಹಾರೈಸುತ್ತೇನೆ" ಎಂದು ಹೇಳಿದ್ದಾರೆ.

      ಎಚ್‌ಡಿಕೆ ಶುಭ ಹಾರೈಕೆ

      ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು, "ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್‌ ಅವರಿಗೆ ಕೋವಿಡ್‌ ಇರುವುದಾಗಿ ತಿಳಿಯಿತು. ಕೊರೊನಾ ವೈರಸ್‌ ಸೋಂಕಿನಿಂದ ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.

      ಆರೋಗ್ಯ ಸಚಿವರ ಹಾರೈಕೆ

      ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಟ್ವೀಟ್ ಮಾಡಿದ್ದು, "ಸದಾ ಚಟುವಟಿಕೆಯಿಂದ ಇರುವ ಶ್ರೀ ಶಿವಕುಮಾರ್ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ" ಎಂದು ಹೇಳಿದ್ದಾರೆ.

      ಶೀಘ್ರ ಗುಣಮುಖರಾಗಲು ಹಾರೈಕೆ

      ಶೀಘ್ರ ಗುಣಮುಖರಾಗಲು ಹಾರೈಕೆ

      ಮಾಜಿ ಸಚಿವರಾದ ಡಾ. ಜಿ. ಪರಮೇಶ್ವರ, ಯು. ಟಿ. ಖಾದರ್, ಈಶ್ವರ ಖಂಡ್ರೆ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+