ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಸೋನಿಯಾಗಾಂಧಿ ಇಡಿ ವಿಚಾರಣೆ: ಜಿಲ್ಲಾ ಕೇಂದ್ರಗಳಲ್ಲಿ ಇಂದು ಕಾಂಗ್ರೆಸ್ ಮೌನ ಸತ್ಯಾಗ್ರಹ

|
Google Oneindia Kannada News

ಬೆಂಗಳೂರು, ಜು.27: ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರವೂ ವಿಚಾರಣೆಗೆ ಕರೆದಿರುವ ಕಾರಣ ಕಾಂಗ್ರೆಸ್ ಇಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮೌನ ಸತ್ಯಾಗ್ರಹ ಮಾಡಲು ನಿರ್ಧರಿಸಿದೆ.

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ನಾಳೆಯೂ ವಿಚಾರಣೆಗೆ ಕರೆದಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಾಳೆ 'ಮೌನ ಸತ್ಯಾಗ್ರಹ' ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಜಿಲ್ಲಾ ಮುಖಂಡರು, ಶಾಸಕರು, ಮಾಜಿ ಶಾಸಕರು, ಪರಾಜಿತಾ ಅಭ್ಯರ್ಥಿಗಳು, ಮುಂಚೂಣಿ ಘಟಕಗಳ ಜಿಲ್ಲಾ ಪ್ರತಿನಿಧಿಗಳಿಗೆ ಸೂಚಿಸಿದ್ದಾರೆ.

ಸೋನಿಯಾ ಗಾಂಧಿ ಅವರಿಗೆ ವಿಚಾರಣೆ ನೆಪದಲ್ಲಿ ನೀಡಲಾಗುತ್ತಿರುವ ಕಿರುಕುಳ ನಿಲ್ಲುವವರೆಗೂ ಶಾಂತಿಯುತ ಪ್ರತಿಭಟನೆ ಮುಂದುವರಿಸಬೇಕು ಎಂದು ನಿರ್ದೇಶನ ನೀಡಿರುವುದಾಗಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sonia Gandhi ED trial continues: Congress protest in district centres

ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಎದುರು ಮೌನ ಸತ್ಯಾಗ್ರಹ:

ಸೋನಿಯಾ ಗಾಂಧಿ ಅವರ ಇ.ಡಿ. ವಿಚಾರಣೆಯನ್ನು ಅನಗತ್ಯವಾಗಿ ಮುಂದುವರೆಸಿ ಕಿರುಕುಳ ನೀಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರದೇಶ ಕಾಂಗ್ರೆಸ್ ಬುಧವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಆನಂದ್ ರಾವ್ ವೃತ್ತದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಎದುರು ಮೌನ ಸತ್ಯಾಗ್ರಹ ಮುಂದುವರೆಯಲಿದೆ.

ಈ ಸತ್ಯಾಗ್ರಹದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಎಐಸಿಸಿ ಪಧಾದಿಕಾರಿಗಳು, ಸಂಸದರು, ಶಾಸಕರು, ಮಾಜಿ ಶಾಸಕರು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಮುಂಚೂಣಿ ಘಟಕಗಳ ಪ್ರತಿನಿಧಿಗಳು ಹಾಗೂ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.

Recommended Video

David Or Dravid?? ತಮ್ಮ ಹೆಸರಿನ ಬಗ್ಗೆ ಇದ್ದ ಗೊಂದಲದ ಬಗ್ಗೆ ರಾಹುಲ್ ದ್ರಾವಿಡ್ ಹೇಳಿದ್ದೇನು? | OneIndia

English summary
AICC president Sonia Gandhi has been summoned for questioning by the Enforcement Directorate officials on Wednesday again. Congress has decided to hold a silent protest in all district centers today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X