ರಾಷ್ಟ್ರಪತಿಯನ್ನೇ ಬಡಪಾಯಿ ಮಹಿಳೆ ಎಂದ ಸೋನಿಯಾ: ಬಿ ವೈ ವಿಜಯೇಂದ್ರ ಏನಂದ್ರು?
ಬೆಂಗಳೂರು, ಫೆಬ್ರವರಿ 01:ಸಂಸತ್ತಿನ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಮಾಡಿದ ಭಾಷಣವನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು 'ಬಡಪಾಯಿ ಮಹಿಳೆ' ಎಂಬ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಅತ್ಯಂತ ಅಪರೂಪದ ಬೆಳವಣಿಗೆಯಲ್ಲಿ ಸ್ವತಃ ರಾಷ್ಟ್ರಪತಿ ಭವನವೇ, 'ಇಂಥ ಹೇಳಿಕೆ ಕಳಪೆ ಅಭಿರುಚಿಯದ್ದು ಮತ್ತು ದುರದೃಷ್ಟಕರ' ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಇನ್ನೂ ರಾಷ್ಟ್ರಪತಿಯನ್ನೇ ಬಡಪಾಯಿ ಮಹಿಳೆ ಎಂದ ಸೋನಿಯಾ ಗಾಂಧಿ ಹೇಳಿಕೆಗೆ ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾದ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಟ್ವೀಟ್ ಮಾಡಿದ್ದು, ಸವಿಂಧನಾ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನೇ ಸಹಿಸಿಕೊಳ್ಳದ ಕಾಂಗ್ರೆಸ್ ಹಾಗೂ ನೆಹರು ಮನೆತನ ಆದಿವಾಸಿ ಮೂಲದ ಶ್ರೀಮತಿ ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ಸ್ಥಾನ ರಾಷ್ಟ್ರಪತಿ ಹುದ್ದೆಯಲ್ಲಿರುವುದನ್ನು ಹೇಗೆ ಸಹಿಸಿಕೊಳ್ಳುತ್ತಾರೆ? ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರು ದ್ರೌಪದಿ ಮುರ್ಮು ಅವರನ್ನು ಕುರಿತು 'ಬಡಪಾಯಿ ಮಹಿಳೆ' ಎಂದು ಅಪಮಾನಿಸಿ ರಾಷ್ಟ್ರಪತಿ ಸ್ಥಾನದ ಘನತೆಗೆ ಧಕ್ಕೆ ತರುವ ಮೂಲಕ ಭಾರತವನ್ನೂ ಕೂಡ ಅಪಮಾನಿಸಿದ್ದಾರೆ.
ಸ್ವಾತಂತ್ರ್ಯಾ ನಂತರ ದೇಶದ ಅಧಿಕಾರವನ್ನು ತಮ್ಮ ಕಪಿಮುಷ್ಠಿಯಲ್ಲಿ ಹಿಡಿದಿಟ್ಟುಕೊಂಡಿದ್ದ ನೆಹರು ಮನೆತನ ಪ್ರಜಾತಂತ್ರ ವ್ಯವಸ್ಥೆಯಲ್ಲೂ ಸರ್ವಾಧಿಕಾರಿ ಆಡಳಿತ ಮೆರೆದ ಇತಿಹಾಸದ ಹಿನ್ನೆಲೆ ಹೊಂದಿದೆ. ಬಡವರು, ಹಿಂದುಳಿದವರು ಹಾಗೂ ಆದಿವಾಸಿ ಸಮುದಾಯಗಳನ್ನು ಕಾಂಗ್ರೆಸ್ ಪಕ್ಷ ತನ್ನ ಮತಬ್ಯಾಂಕ್ ಮಾಡಿಕೊಂಡಿತ್ತೇ ಹೊರತು ಈ ಸಮುದಾಯಗಳ ರಾಜಕೀಯ ಅಧಿಕಾರ ಹಾಗೂ ಶಿಕ್ಷಣವನ್ನು ನೀಡುವಲ್ಲಿ ವಂಚಿಸುತ್ತಲೇ ಬಂದಿದೆ.
ಶೋಷಿತ ಹಾಗೂ ಬುಡಕಟ್ಟು ಸಮುದಾಯಗಳು ಉನ್ನತ ಸ್ಥಾನ ಅಲಂಕರಿಸುವುದನ್ನು ಸಹಿಸದ ಮನಸ್ಥಿತಿ ಸೋನಿಯಾ ಅವರ ಹೇಳಿಕೆಯಲ್ಲಿ ಪ್ರತಿಫಲನಗೊಂಡಿದೆ. ಒಬ್ಬ ಮಹಿಳೆಯಾಗಿ ಅತ್ಯುನ್ನತ ಸ್ಥಾನದಲ್ಲಿರುವ ಮತ್ತೊಬ್ಬ ಮಹಿಳೆಯನ್ನು ಸೋನಿಯಾ ಅವರು ಹಿಯಾಳಿಸಿರುವುದು ಸ್ತ್ರೀ ಕುಲವನ್ನೂ ಸಹ ಅಪಮಾನಿಸಿದಂತಾಗಿದೆ.
ಸೋನಿಯಾ ಗಾಂಧಿ ಅವರ ಹೇಳಿಕೆ ಅವರ ಪುತ್ರಿ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಭಟ್ಟಂಗಿ ಕಾಂಗ್ರೆಸ್ಸಿಗರು ಸಮರ್ಥಿಸಲು ಹೊರಟಿರುವುದು ಅವರ ಭಂಡತನವನ್ನು ಸಾಕ್ಷೀಕರಿಸುತ್ತಿದೆ. ದೇಶದ ಪ್ರಥಮ ಪ್ರಜೆಯನ್ನು ಅವಮಾನಿಸಿರುವ ಸೋನಿಯಾ ಗಾಂಧಿ ಅವರು ಈ ಕೂಡಲೇ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದ ಜನತೆಯ ಮುಂದೆ ಕ್ಷಮೆ ಯಾಚಿಸಲಿ ಎಂದು ಒತ್ತಾಯಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications