
Breaking; ವಿಡಿಯೋ; ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ
ಮಂಡ್ಯ, ಅಕ್ಟೋಬರ್ 06; ಎರಡು ದಿನದ ಬಿಡುವಿನ ಬಳಿಕ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಪುನಃ ಆರಂಭವಾಗಿದೆ. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಯಾತ್ರೆಯಲ್ಲಿ ಹೆಜ್ಜೆ ಹಾಕಿದರು.
ಗುರುವಾರ ಬೆಳಗ್ಗೆ ಮಂಡ್ಯ ಜಿಲ್ಲೆಯ ಪಾಂಡವಪುರದ ಬೆಳ್ಳಾಲೆ ಗ್ರಾಮದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದೆ. ಪಾಂಡವಪುರದ ನ್ಯಾಮನಹಳ್ಳಿ ಬಳಿ ಸೋನಿಯಾ ಗಾಂಧಿ ಪಾದಯಾತ್ರೆಗೆ ಸೇರಿಕೊಂಡರು.
Breaking; ಮಾದೇಶ್ವರ ದೇವಾಲಯಕ್ಕೆ ಸೋನಿಯಾ ಗಾಂಧಿ ಭೇಟಿ
ರಾಹುಲ್ ಗಾಂಧಿ, ಕೆ. ಸಿ. ವೇಣುಗೋಪಾಲ್ ಸೇರಿದಂತೆ ಹಲವಾರು ನಾಯಕರು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಸೋಮವಾರ ಕರ್ನಾಟಕಕ್ಕೆ ಆಗಮಿಸಿದ್ದ ಸೋನಿಯಾ ಗಾಂಧಿ ಗುರುವಾರ ಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.
ಕಾಂಗ್ರೆಸ್ಸಿಗರದ್ದು ಭಾರತ ಬಿಟ್ಟು ಓಡೋ ಯಾತ್ರೆ: ಕಟೀಲ್ ವ್ಯಂಗ್ಯ
ಪಾದಯಾತ್ರೆಯಲ್ಲಿ ಪಾಲ್ಗೊಂಡ ಸೋನಿಯಾ ಗಾಂಧಿ ಮಾತನಾಡಿಸಲು ಮಹಿಳಾ ಕಾರ್ಯಕರ್ತರು ಗುಂಪು ಗೂಡಿದರು. ಆದರೆ ಪೊಲೀಸರು ಯಾರನ್ನೂ ಸಹ ಸೋನಿಯಾ ಗಾಂಧಿ ಸಮೀಪ ಬಿಡಲಿಲ್ಲ. ಸುಮಾರು ಅರ್ಧ ಕಿಲೋ ಮೀಟರ್ ಪಾದಯಾತ್ರೆಯಲ್ಲಿ ಪಾಲ್ಗೊಂಡ ಬಳಿಕ ಸೋನಿಯಾ ಗಾಂಧಿ ಕಾರು ಹತ್ತಿದರು.
#WATCH | Karnataka: Congress interim president Sonia Gandhi joins Congress MP Rahul Gandhi and other party leaders and workers during 'Bharat Jodo Yatra' in Mandya district pic.twitter.com/iSXNW8zciV
— ANI (@ANI) October 6, 2022
ದಸರಾ ಹಿನ್ನಲೆಯಲ್ಲಿ ಮಂಗಳವಾರ ಮತ್ತು ಬುಧವಾರ ಭಾರತ್ ಜೋಡೋ ಯಾತ್ರೆ ಸ್ಥಗಿತಗೊಳಿಸಲಾಗಿತ್ತು. ಕಬಿನಿ ಹಿನ್ನೀರು ಪ್ರದೇಶದ ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಾಸ್ತವ್ಯ ಹೂಡಿದ್ದರು.
ಸೋನಿಯಾ ಗಾಂಧಿ ಬುಧವಾರ ಭೀಮನಕೊಲ್ಲಿಯ ಕಬಿನಿ ಹಿನ್ನೀರಿನಲ್ಲಿರುವ ಮಾದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಗುರುವಾರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಳ್ಗೊಂಡಿದ್ದಾರೆ.
ಅಕ್ಟೋಬರ್ 6ರ ಗುರುವಾರ ಭಾರತ್ ಜೋಡೋ ಯಾತ್ರೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೆಳ್ಳಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಆರಂಭವಾಗಿದೆ.
ಯಾತ್ರೆಯಲ್ಲಿ ಪಾಲ್ಗೊಂಡಿರುವವರು 11 ಗಂಟೆಗೆ ಖಾರದ್ಯಾ ಕೆರೆ ಎದುರು ವಿರಾಮ ತೆಗೆದುಕೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಮತ್ತೆ ಯಾತ್ರೆ ಆರಂಭವಾಗಲಿದೆ. ಮಂಡ್ಯದ ಬ್ರಹ್ಮದೇವರ ಹಳ್ಳಿ ಗ್ರಾಮದ ತನಕ ಗುರುವಾರ ಯಾತ್ರೆ ನಡೆಯಲಿದೆ.