Mysuru Dasara: ಮೈಸೂರು ದಸರಾ ಉದ್ಘಾಟನೆ ಮಾಡ್ತಾರಾ ಸೋನಿಯಾ ಗಾಂಧಿ?

ಮೈಸೂರು, ಆಗಸ್ಟ್‌ : ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಮೈಸೂರಿನಲ್ಲಿ ದಸರಾ ಸಂಭ್ರಮಕ್ಕೆ ಸಕಲ ಸಿದ್ಧತೆಗಳು ಬಿರುಸಿನಿಂದ ನಡೆಯುತ್ತಿದೆ. ಆದರೆ ಈ ಬಾರಿಯ ದಸರಾ ಮಹೋತ್ಸವವನ್ನು ಉದ್ಘಾಟನೆ ಮಾಡುವ ಗಣ್ಯರು ಯಾರು? ಎಂಬ ಕುತೂಹಲ ಮಾತ್ರ ಹೆಚ್ಚಾಗಿದ್ದು, ಅನೇಕ ಮಾಹಿತಿಗಳ ಪ್ರಕಾರ ಈ ಬಾರಿ ರಾಜಕೀಯ ಕ್ಷೇತ್ರದ ಗಣ್ಯರೊಬ್ಬರು ದಸರಾ ಉದ್ಘಾಟನೆ ಮಾಡುವ ನೀರಿಕ್ಷೆ ಇದೆ ಎನ್ನುವ ಮಾತುಗಳು ಕೇಳಿ ಬಂದಿವೆ.

ಹೌದು ಪ್ರತಿ ವರ್ಷವೂ ನಾಡ ಹಬ್ಬ ದಸರಾ ಸಮಯದಲ್ಲಿ ಕುತೂಹಲಕಾರಿಯಾಗಿ ಕಾಡುವ ವಿಚಾರ ಎಂದರೆ ಅದು ನಾಡ ಹಬ್ಬವನ್ನು ಉದ್ಘಾಟನೆ ಮಾಡುವವರು ಯಾರು ಎಂಬುದು. ಪ್ರತಿ ವರ್ಷವೂ ದಸರಾ ಉದ್ಘಾಟಕರ ಆಯ್ಕೆ ಮಾಡುವುದು ರಾಜ್ಯದ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರವಾಗಿದೆ. ಪ್ರತಿ ವರ್ಷವೂ ರಾಜ್ಯದ ಮುಖ್ಯಮಂತ್ರಿಗಳೆ ಆಯ್ಕೆ ಮಾಡಿ, ಘೋಷಣೆ ಮಾಡುತ್ತಾರೆ. ಮುಖ್ಯಮಂತ್ರಿಗಳು ಅವರ ವಿವೇಚನೆಗೆ ಯಾರು ಸರಿ ಎನಿಸುತ್ತಾರೆ ಅವರನ್ನ ಮುಖ್ಯಮಂತ್ರಿಗಳು ಆಯ್ಕೆ ಮಾಡುತ್ತಾರೆ. ಈ ವರ್ಷ ನಾಡ ಹಬ್ಬ ದಸರಾವನ್ನು ಉದ್ಘಾಟನೆಯನ್ನ ಕಾಂಗ್ರೆಸ್‍ನ ಅಧಿನಾಯಕಿ ಸೋನಿಯಾ ಗಾಂಧಿ ಅವರ ಕೈ ಯಲ್ಲಿ ಉದ್ಘಾಟನೆ ಮಾಡಿಸಬೇಕು ಎಂದು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂಬ ಮಾತುಗಳು ಕೇಳಿ ಬಂದಿವೆ.

Sonia Gandhi Name Discussed For Mysuru Dasara Inauguration

ದಸರಾ ಹಬ್ಬವನ್ನು ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಲಾಗುತ್ತದೆ. ಹಲವು ವರ್ಷಗಳಿಂದ ಈ ಪದ್ದತಿ ರೂಡಿಯಲ್ಲಿ ಇದೆ. ಈ ಹಿಂದೆ ಕಲೆ ,ಸಾಹಿತ್ಯ ಮತ್ತು ಕಲಾವಿದರು ಹಾಗೂ ರಾಷ್ಟಪತಿಗಳು ಸೇರಿಂದತೆ ಅನೇಕ ಗಣ್ಯರು ಉದ್ಘಾಟನೆ ಮಾಡಿದ್ದಾರೆ. ಆದರೆ, ಇಷ್ಟು ವರ್ಷಗಳ ಕಾಲ ದಸರಾ ಉದ್ಘಾಟನೆಗೆ ರಾಜಕೀಯ ಕ್ಷೇತ್ರದವರನ್ನು ಹೊರಗೆ ಇಡಲಾಗಿತ್ತು. ಆದರೆ 2021 ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜು ಬೊಮ್ಮೊಯಿ ಅವರು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ ಕೃಷ್ಣ ಅವರಿಗೆ ದಸರಾ ಉದ್ಘಾಟನೆಗೆ ಆಹ್ವಾನವನ್ನು ನೀಡಿದ್ರು. ಇದರೊಂದಿಗೆ ರಾಜಕೀಯ ಕ್ಷೇತ್ರದಿಂದ ಗಣ್ಯರು ಒಬ್ಬರು ಪ್ರಥಮ ಬಾರಿಗೆ ಮೈಸೂರು ದಸರಾವನ್ನು ಉದ್ಘಾಟನೆ ನಡೆಸಿದರು. ಹೀಗಾಗಿ ಈ ಬಾರಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ಹೆಸರು ಮುನ್ನಲೆಗೆ ಬಂದಿದೆ.

ಸಿಎಂ ಕಚೇರಿ ಸ್ಪಷ್ಟನೆ

ಈ ಬಾರಿಯ ದಸರಾ ಮಹೋತ್ಸವವನ್ನು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾಂಧಿಯವರು ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು. ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲಿ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಕಚೇರಿಯಿಂದ ಮಾಹಿತಿ ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+