Breaking; ಭಾರತ್‌ ಜೋಡೋ ಯಾತ್ರೆ ಮುಗಿಸಿ ದೆಹಲಿಗೆ ಹೊರಟ ಸೋನಿಯಾ

ಮೈಸೂರು, ಅಕ್ಟೋಬರ್ 06; ಭಾರತ್‌ ಜೋಡೋ ಯಾತ್ರೆ ಪೂರ್ಣಗೊಳಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಗೆ ವಾಪಸ್ ಆದರು. ಮಂಡ್ಯದಲ್ಲಿ ನಡೆದ ಯಾತ್ರೆಯಲ್ಲಿ ಪುತ್ರ ರಾಹುಲ್ ಗಾಂಧಿ ಜೊತೆ ಸೋನಿಯಾ ಗಾಂಧಿ ಪಾಲ್ಗೊಂಡಿದ್ದರು.

ಗುರುವಾರ ಮಧ್ಯಾಹ್ನ ಸೋನಿಯಾ ಗಾಂಧಿ ಮೈಸೂರಿನ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದರು. ಸೋಮವಾರ ರಾಜ್ಯಕ್ಕೆ ಆಗಮಿಸಿದ್ದ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದರು.

Sonia Gandhi Returns To New Delhi From Mandya

ಎರಡು ದಿನದ ಬಿಡುವಿನ ಬಳಿಕ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಭಾರತ್‌ ಜೋಡೋ ಯಾತ್ರೆ ಪುನಃ ಆರಂಭವಾಯಿತು. ಗುರುವಾರ ಬೆಳಗ್ಗೆ ನ್ಯಾಮನಹಳ್ಳಿ ಬಳಿ ಸೋನಿಯಾ ಗಾಂಧಿ ರಾಹುಲ್ ಗಾಂಧಿ ಜೊತೆ ಪಾದಯಾತ್ರೆಗೆ ಸೇರಿಕೊಂಡರು.

ರಾಹುಲ್‌ ಗಾಂಧಿ, ಕೆ. ಸಿ. ವೇಣುಗೋಪಾಲ್, ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಜೊತೆ ಸೋನಿಯಾ ಗಾಂಧಿ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಪಾಲ್ಗೊಂಡರು. ಪಾದಯಾತ್ರೆ ಸಂದರ್ಭದಲ್ಲಿ ಸೋನಿಯಾ ಗಾಂಧಿ ಶೂ ಲೇಸ್ ಅನ್ನು ರಾಹುಲ್ ಕಟ್ಟುವ ಫೋಟೋಗಳು ವೈರಲ್ ಆಗಿವೆ.

ಭಾರತ್ ಜೋಡೋ ಯಾತ್ರೆ ಆರಂಭವಾದ ಬಳಿಕ ಮೊದಲ ಬಾರಿಗೆ ಸೋನಿಯಾ ಗಾಂಧಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಸೋಮವಾರ ಮೈಸೂರಿಗೆ ಆಗಮಿಸಿದ್ದ ಅವರು ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು.

ಮಂಗಳವಾರ ಮತ್ತು ಬುಧವಾರ ದಸರಾ ಹಿನ್ನಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ಬಿಡುವು ನೀಡಲಾಗಿತ್ತು. ಗುರುವಾರ ಮತ್ತೆ ಯಾತ್ರೆ ಆರಂಭಗೊಂಡಿದ್ದು, ಸೋನಿಯಾ ಗಾಂಧಿ ಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕ ಯಾತ್ರೆಗೆ ಶಕ್ತಿ ತುಂಬಿದರು.

ಬುಧವಾರ ಭೀಮನಕೊಲ್ಲಿಯ ಕಬಿನಿ ಹಿನ್ನೀರಿನಲ್ಲಿರುವ ಮಾದೇಶ್ವರ ದೇವಾಲಯಕ್ಕೆ ಸೋನಿಯಾ ಗಾಂಧಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಮಾದೇಶ್ವರ ದೇವಾಲಯದ ಐತಿಹಾಸಿಕ ದೇವಾಲಯವಾಗಿದೆ. ಸೋನಿಯಾ ಗಾಂಧಿ ದೇವಾಲಯಕ್ಕೆ ಭೇಟಿ ನೀಡಿರುವ ಚಿತ್ರವನ್ನು ರಾಹುಲ್ ಗಾಂಧಿ ಹಂಚಿಕೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+