ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಸೋನಿಯಾ ಗಾಂಧಿ

ಬೆಂಗಳೂರು, ಮೇ 07: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮೇ 12 ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಒಂದು ದಿನದ ಮಟ್ಟಿಗೆ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಮೇ 8ರಂದು ಮಧ್ಯಾಹ್ನ 12ಕ್ಕೆ ದೆಹಲಿಯಿಂದ ಹೊರಟು 1.30ಕ್ಕೆ ಬೆಳಗಾವಿ ತಲುಪಿಲಿದ್ದಾರೆ. ಬೆಳಗಾವಿಯಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ವಿಜಯಪುರಕ್ಕೆ ತೆರಳಿ ಮಧ್ಯಾಹ್ನ 3 ಗಂಟೆಗೆ ಸಾರ್ವಜನಿರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ವಿಜಯಪುರದಿಂದ ಬೆಳಗಾವಿಗೆ ತೆರಳಿ ಅಲ್ಲಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ವಾಪಸ್‌ ಆಗಲಿದ್ದಾರೆ.

Sonia Gandhi will address rally in Vijayapura

ಈ ಮೊದಲು ಸೋನಿಯಾಗಾಂಧಿಯವರ ಪ್ರಚಾರ ಸಭೆಯನ್ನು ಹುಬ್ಬಳ್ಳಿ ನಿಗದಿಪಡಿಸಲಾಗಿತ್ತು. ಇದೀಗ ಎಐಸಿಸಿ ಹುಬ್ಬಳ್ಳಿ ಮೆರವಣಿಗೆಯನ್ನು ರದ್ದುಪಡಿಸಿ, ವಿಜಯಪುರಕ್ಕೆ ಸಾರ್ವಜನಿಕ ಮೆರವಣಿಗೆಯನ್ನು ಸ್ಥಳಾಂತರಿಸಿದೆ. ಎಐಸಿಸಿ ಮಾಜಿ ಅಧ್ಯಕ್ಷೆ ಭಾಗವಹಿಸಲಿರುವ ಪ್ರಚಾರ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ರಾಜ್ಯದ ಮುಖಂಡರು ಎಐಸಿಸಿ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+