Government employee; ಸರ್ಕಾರಿ ನೌಕರರಿಗೆ ಆಸ್ತಿ ಖರೀದಿ ಇನ್ನು ಸುಲಭ
ಬೆಂಗಳೂರು, ಡಿಸೆಂಬರ್ 01; ಕರ್ನಾಟಕದ ಸರ್ಕಾರಿ ನೌಕರರಿಗೆ ಶೀಘ್ರವೇ ಸಿಹಿಸುದ್ದಿ ಸಿಗಲಿದೆ. ನೌಕರರು ಆಸ್ತಿ ಖರೀದಿ ಮಾಡುವ ಪ್ರಕ್ರಿಯೆಯನ್ನು ಇನ್ನಷ್ಟು ಸರಳೀಕರಣಗೊಳಿಸಲಾಗುತ್ತದೆ. ಇದರಿಂದಾಗಿ ನೌಕರರ ಹಲವು ವರ್ಷಗಳ ಬೇಡಿಕೆ ಈಡೇರಿದಂತೆ ಆಗಲಿದೆ.
ರಾಜ್ಯಮಟ್ಟದ ಜಂಟಿ ಸಮಾಲೋಚನಾ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ಸರ್ಕಾರಿ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸಲು ಸಭೆಯಲ್ಲಿ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಇವುಗಳ ಕುರಿತು ಅಧಿಕೃತ ಆದೇಶವಾಗುವುದು ಮಾತ್ರ ಬಾಕಿ ಇದೆ.

ಆಸ್ತಿ ಖರೀದಿ ಪ್ರಕ್ರಿಯೆ ಸರಳ; ಸರ್ಕಾರಿ ನೌಕರರು ತಮ್ಮ ಸೇವಾವಧಿಯಲ್ಲಿ ಚರ/ ಸ್ಥಿರ ಆಸ್ತಿ ಖರೀದಿ ಮಾಡುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯಬೇಕು ಎಂಬ ನಿಯಮವಿದೆ. ಈ ನಿಯಮವನ್ನು ಸಡಿಲಿಕೆ ಮಾಡಲು ತೀರ್ಮಾನಿಸಲಾಗಿದೆ. ಸರಳೀಕೃತ ನಿಯಮದಂತೆ ಕಾಲಮಿತಿಯಲ್ಲಿ ಸಂಬಂಧಿಸಿದ ಪ್ರಾಧಿಕಾರಕ್ಕೆ ವರದಿ ಮಾಡುವಂತೆ ಬದಲಾವಣೆ ಮಾಡಲಾಗುತ್ತದೆ. ಆಗ ನೌಕರರು ಸಂಬಂಧಿಸಿದ ಪ್ರಾಧಿಕಾರಕ್ಕೆ ವರದಿ ನೀಡಿದರೆ ಸಾಕಾಗುತ್ತದೆ.
ಸರ್ಕಾರಿ ನೌಕರರ ಆಸ್ತಿ ಮತ್ತು ಹೊಣೆಗಾರಿಕೆಗಳ ವಿವರ ಪಟ್ಟಿಯನ್ನು ನಿಗದಿತ ಸಮಯಕ್ಕೆ ಸಲ್ಲಿಸುವ ಬಗ್ಗೆ ಈಗಾಗಲೇ ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು, 1996ರ ನಿಯಮಗಳು, ಪರಿಷ್ಕೃತವಾಗಿ ಕರ್ನಾಟಕ ರಾಜ್ಯ ನಾಗರೀಕ ನಾಗರಿಕ ಸೇವಾ (ನಡತೆ) ನಿಯಮಗಳು, 2021 ದಿನಾಂಕ 07/01/2021ರಿಂದ ಜಾರಿಗೆ ಬಂದಿರುತ್ತವೆ. ಸದರಿ ನಿಯಮಗಳ ನಿಯಮ 24ರಲ್ಲಿ ಸರ್ಕಾರಿ ನೌಕರರು ಚರ/ ಸ್ಥಿರ ಆಸ್ತಿ ಖರೀದಿ/ ವಿಲೇ ಮಾಡುವುದಕ್ಕೆ ಸಂಬಂಧಿಸಿದಂತೆ ಉಪಬಂಧಗಳನ್ನು ಕಲ್ಪಿಸಲಾಗಿದೆ.
ಪ್ರತಿಯೊಬ್ಬ ಸರ್ಕಾರಿ ನೌಕರನು ಯಾವುದಾದರು ಸೇವೆಗೆ ಅಥವಾ ಹುದ್ದೆಗೆ ಮೊದಲು ನೇಮಕವಾಗುವಾಗ, ಆತನು ತನ್ನ ಸ್ವಂತ ಹೆಸರಿನಲ್ಲಾಗಲಿ ಅಥವಾ ತನ್ನ ಕುಟುಂಬದ ಯಾರೇ ಸದಸ್ಯರ ಹೆಸರಿನಲ್ಲಾಗಲಿ ಅಥವಾ ಯಾವುದೇ ಇತರ ವ್ಯಕ್ತಿಯ ಹೆಸರಿನಲ್ಲಾಗಲಿ ಪಿತ್ರಾರ್ಜಿತವಾಗಿ ಬಂದ ಸ್ವಯಂ ಅರ್ಜಿಸಿದ ಅಥವಾ ಗುತ್ತಿಗೆ ಅಥವಾ ಅಡಮಾನದ ಮೇಲೆ ತಾನು ಹೊಂದಿರುವ ಸ್ಥಿರಾಸ್ತಿಯ ಸಂಪೂರ್ಣ ವಿವರಗಳನ್ನು ನೀಡಿ, ನಿಗದಿತ ನಮೂನೆಯಲ್ಲಿ ತನ್ನ ಚರ ಮತ್ತು ರಾಸ್ತಿಗಳ ವಿವರ ಪಟ್ಟಿಯನ್ನು ಪೂರಕ ದಾಖಲೆಗಳೊಂದಿಗೆ ಮೂರು ತಿಂಗಳೊಳಗೆ ಸಲ್ಲಿಸಬೇಕಾಗಿರುತ್ತದೆ.
ತರುವಾಯ ಸರ್ಕಾರಿ ನೌಕರನು ಡಿಸೆಂಬರ್ 31ಕ್ಕೆ ಅಂತ್ಯಗೊಳ್ಳುವ ಪ್ರತಿ ಹನ್ನೆರಡು ತಿಂಗಳಿಗೊಮ್ಮೆ ತನ್ನ ಮತ್ತು ತನ್ನ ಕುಟುಂಬದ ಎಲ್ಲ ಸದಸ್ಯರ ಆಸ್ತಿಗಳ ಮತ್ತು ಹೊಣೆಗಾರಿಕೆಗಳ ವಾರ್ಷಿಕ ವಿವರ ಪಟ್ಟಿಯನ್ನು ಸಲ್ಲಿಸಬೇಕಾಗಿರುತ್ತದೆ. ಅಲ್ಲದೇ, ನಿಯಮ 24 ರಲ್ಲಿನ ಉಪಬಂಧಗಳಂತೆ ಪ್ರತಿಯೊಬ್ಬ ಸರ್ಕಾರಿ ನೌಕರನು ಚರ ಮತ್ತು ಸ್ಥಿರಾಸ್ತಿಗೆ ಸಂಬಂಧಿಸಿದಂತೆ ನಿಯಮಗಳಲ್ಲಿ ತಿಳಿಸಿರುವ ಸಂದರ್ಭಗಳಲ್ಲಿ ಅನುಮತಿ ಪಡೆಯುವುದು ಹಾಗೂ ವರದಿ ಮಾಡುವುದು ಅವಶ್ಯವಾಗಿರುತ್ತದೆ.
ಆಸ್ತಿ ಮತ್ತು ಹೊಣೆಗಾರಿಕೆ ವಿವರಗಳನ್ನು ಸಲ್ಲಿಸುವುದು ಪ್ರತಿಯೊಬ್ಬ ಸರ್ಕಾರಿ ನೌಕರನ ಕರ್ತವ್ಯವಾಗಿದ್ದು, ನಿಯಮಗಳಲ್ಲಿ ನಿಗದಿಪಡಿಸಿರುವ ಸಮಯದಲ್ಲಿ ಸಲ್ಲಿಸುವುದು ಅಗತ್ಯವಾಗಿರುತ್ತದೆ. ಇಲ್ಲವಾದಲ್ಲಿ ನಡತೆ ನಿಯಮಗಳಿಗೆ ವ್ಯತಿರಿಕ್ತ ನಡವಳಿಕ ಪ್ರದರ್ಶಿಸಿದ ಕಾರಣ ಅಂತಹ ಸರ್ಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಅವಕಾಶವಿರುತ್ತದೆ.
ಆದಾಗ್ಯೂ ಬಹುತೇಕ ಸರ್ಕಾರಿ ನೌಕರರು ತಮ್ಮ ಆಸ್ತಿ ಮತ್ತು ಹೊಣೆಗಾರಿಕೆಗಳ ವಿವರ ಪಟ್ಟಿಗಳನ್ನು ನಿಯಮಾನುಸಾರ ನಿಗದಿತ ಸಮಯಕ್ಕೆ ಸಲ್ಲಿಸದೇ ಇರುವುದು ಸರ್ಕಾರದ ಗಮನಕ್ಕೆ ಬಂದಿತ್ತು. ಆದ್ದರಿಂದ, ಎಲ್ಲಾ ನೌಕರರು ತಮ್ಮ ಚರ ಮತ್ತು ಸ್ಥಿರಾಸ್ತಿ ವ್ಯವಹರಣೆಗೆ ಸಂಬಂಧಿಸಿದಂತೆ ನಿಯಮಾನುಸಾರ ನಿಗದಿತ ಸಮಯಕ್ಕೆ ಸಲ್ಲಿಸುವಂತೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಲಾಗಿತ್ತು.
ಸಭೆಯ ಇತರ ಪ್ರಮುಖ ನಿರ್ಧಾರಗಳು
* ಎಲ್ಲಾ ಇಲಾಖೆಗಳಲ್ಲಿ ಪ್ರತಿ ವರ್ಷ ಮೊದಲ ತಿಂಗಳಿಲ್ಲಿ ಜೇಷ್ಠತಾ ಪಟ್ಟಿಯನ್ನು ತಯಾರಿಸಿ ಪ್ರತಿ ಆರು ತಿಂಗಳಿಗೊಮ್ಮೆ ಮುಂಬಡ್ತಿ ಕೋಟಾದಡಿ ಹುದ್ದೆಗಳನ್ನು ಗುರುತಿಸಿ ಪದೋನ್ನತಿ ನೀಡುವುದು.
* ಲೋಕ ಅದಾಲತ್ ಮಾದರಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಕಾಲಮಿತಿಯಲ್ಲಿ ನೌಕರರ ಇಲಾಖಾ ವಿಚಾರಣೆಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ನಿರ್ಧರಿಸಲಾಗಿದೆ.
* ಸರ್ಕಾರಿ ನೌಕರರು ಪಾಸ್‌ಪೋರ್ಟ್‌ಗಳ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಸಂಬಂಧಿಸಿದ ಕಛೇರಿಯ ಮುಖ್ಯಸ್ಥರಿಂದ ಪಡೆಯುವ ಅವಕಾಶವನ್ನು ಜಾರಿಗೆ ತರುವುದು.
* ಜಿಪಿಎಫ್ ಉಳಿತಾಯ ಖಾತೆಗಳಿಂದ ಮುಂಗಡ/ ಭಾಗಶಃ ವಾಪಾಸಾತಿ ಪಡೆಯುವ ಸಂದರ್ಭದಲ್ಲಿಇದ್ದ ಕಠಿಣ ನಿಯಮವನ್ನು ಸರಳೀಕರಣಗೊಳಿಸುವುದು.
-
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್











Click it and Unblock the Notifications