ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶೀಘ್ರದಲ್ಲಿ ಪಿಯು ವಿಜ್ಞಾನ ಪಠ್ಯಪುಸ್ತಕ ಕನ್ನಡದಲ್ಲಿ ಲಭ್ಯ!

|
Google Oneindia Kannada News

ಬೆಂಗಳೂರು, ಏಪ್ರಿಲ್ 05: ಎಸ್‌ಎಸ್‌ಎಲ್‌ಸಿ ಮುಗಿಸಿ ಪಿಯುಸಿಯಲ್ಲಿ ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ ಇದೆ. ಈ ಶೈಕ್ಷಣಿಕ ವರ್ಷದಿಂದ ಪಿಯುಸಿಯ ವಿಜ್ಞಾನ ಪಠ್ಯಪುಸ್ತಕವು ಕನ್ನಡ ಭಾಷೆಯಲ್ಲೂ ಲಭ್ಯವಾಗಲಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

ವಿಜ್ಞಾನವನ್ನು ಆಯ್ಕೆ ಮಾಡಿಕೊಳ್ಳಲು ಇಷ್ಟವಿದೆ ಆದರೆ ಆಂಗ್ಲ ಭಾಷೆ ಕಷ್ಟ ಎಂದು ಹಿಂಜರಿಯುತ್ತಿದ್ದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಇನ್ನು 15 ದಿನಗಳಲ್ಲಿ ಪುಸ್ತಕ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ. ಸರ್ಕಾರದ ಈ ನಿರ್ಧಾರವು ಹೆಚ್ಚು ಮಕ್ಕಳು ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಸಹಾಯವಾಗಲಿದೆ.

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಲೋಪದೋಷ: ವಿದ್ಯಾರ್ಥಿಗಳಿಗೆ ಕೃಪಾಂಕದ್ವಿತೀಯ ಪಿಯು ಪರೀಕ್ಷೆಯಲ್ಲಿ ಲೋಪದೋಷ: ವಿದ್ಯಾರ್ಥಿಗಳಿಗೆ ಕೃಪಾಂಕ

ಕರ್ನಾಟಕದ ಯಾವುದೇ ಕಾಲೇಜುಗಳು ವಿಜ್ಞಾನವನ್ನು ಕನ್ನಡದಲ್ಲಿ ಬೋಧಿಸಬಹುದಾಗಿದೆ. ಇಂಗ್ಲಿಷ್ ನ್ನು ಅನುವಾದಿಸಿಕೊಳ್ಳಲು ಸಾಧ್ಯವಾಗದವರು ಕನ್ನಡ ಪುಸ್ತಕಗಳನ್ನು ಓದಿಕೊಳ್ಳಬಹುದಾಗಿದೆ. ಈ ಮೊದಲೇ ವಿಜ್ಞಾನ ವಿಭಾಗವನ್ನು ಕನ್ನಡ ಮೀಡಿಯಂನಲ್ಲಿ ತೆರೆಯಲಾಗಿತ್ತಾದರೂ ವಿದ್ಯಾರ್ಥಿಗಳ ಕೊರತೆಯಿಂದಾಗಿ ಅದನ್ನು ಮುಚ್ಚಲಾಗಿತ್ತು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Soon, PUC science textbooks to be made available in kannada

ವಿಜ್ಞಾನ ಪರಿಣಿತರು ಹಾಗೂ ಹಿರಿಯ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಅನುವಾದ ಮುಗಿಯುವ ಹಂತದಲ್ಲಿದೆ. ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಪಿಯು ಕಾಲೇಜುಗಳು ಎರಡು ಸೆಟ್ ಕನ್ನಡ ಪುಸ್ತಕಗಳು ಬೇಕು ಎಂದು ಕೇಳಿದೆ. ಉಚಿತವಾಗಿ ಎಲ್ಲಾ ಸರ್ಕಾರಿ ಕಾಲೇಜುಗಳಿಗೆ ಪುಸ್ತಕಗಳನ್ನು ರವಾನಿಸಲಾಗುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಾದ ಸಿ. ಶಿಖಾ ಅವರು ತಿಳಿಸಿದ್ದಾರೆ.

2013-14ರಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು ವಿಜ್ಞಾನ ಪುಸ್ತಕಗಳನ್ನು ಅನುವಾದಿಸುವ ಕೆಲಸವನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ವಹಿಸಿತ್ತು. ಕೆಲವು ತಾಂತ್ರಿಕ ದೋಷದಿಂದಾಗಿ ಅನುವಾದ ಕಾರ್ಯ ಸ್ಥಗಿತಗೊಂಡಿತ್ತು. ಈ ವರ್ಷ ರಾಜ್ಯದ ಬೇರೆ ಬೇರೆ ಕಾಲೇಜುಗಳ ಉಪನ್ಯಾಸಕರ ಸಹಾಯ ಪಡೆದು ವಿಜ್ಞಾನ ಪುಸ್ತಕವನ್ನು ಆಂಗ್ಲ ಭಾಷೆಯಿಂದ ಕನ್ನಡಕ್ಕೆ ತರ್ಜುಮೆ ಮಾಡಲಾಗಿದೆ. ಶೀಘ್ರದಲ್ಲಿ ರಸಾಯನಶಾಸ್ತ್ರ, ಭೌತಶಾಸ್ತ್ರ, ಗಣಿತ ಪುಸ್ತಕಗಳು ಕೂಡ ಕನ್ನಡದಲ್ಲಿ ಲಭ್ಯವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

English summary
Here is something for science students at Pre-University level to cheer about. From the comming acadamic year, they will get translated textbooks are expected to be in market in next 15 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X