Soraba: ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಒತ್ತು, ವಿವಿಧ ಕಾಮಗಾರಿಗಳಿಗೆ ಸಚಿವ ಚಾಲನೆ

ಸೊರಬ: ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಿ, ಜನರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಕ್ಷೇತ್ರದ ವಿವಿಧ ಭಾಗಗಳ ಮೂಲಸೌಕರ್ಯ ಅಭಿವೃದ್ಧಿಗೆ ಹಂತ ಹಂತವಾಗಿ ಆದ್ಯತೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಆದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 2.30 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಸಚಿವ ಮಧು ಬಂಗಾರಪ್ಪ ಅವರು ಭೂಮಿಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

Soraba Development

ಸೊರಬ ಲೋಕೋಪಯೋಗಿ ಇಲಾಖೆ ಉಪವಿಭಾಗದ ವತಿಯಿಂದ ಹರೀಶಿ ಭಾಗದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಸುಮಾರು ₹1.80 ಕೋಟಿ ವೆಚ್ಚದ ಎರಡು ಪ್ರಮುಖ ಕಾಮಗಾರಿಗಳಿಗೆ ಹಿರೇಕಲಗೋಡು ಗ್ರಾಮದಲ್ಲಿ ಸಚಿವರು ಗುದ್ದಲಿಪೂಜೆ ನೆರವೇರಿಸಿದರು.

ವಿವಿಧ ಕಾಮಗಾರಿಗಳು: ಸಂಚಾರ ಸುಗಮ

ಹರೀಶಿ-ದ್ಯಾವಸ-ಈಡೂರು ರಸ್ತೆ ಡಾಂಬರೀಕರಣ ಹಾಗೂ ಇದೇ ಮಾರ್ಗದ ಹಿರೇಕಲಗೋಡು ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿಗಳು ಇದರಲ್ಲಿ ಸೇರಿವೆ. ಈ ಕಾಮಗಾರಿಗಳಿಂದ ಈ ಭಾಗದ ಗ್ರಾಮಗಳ ಸಂಪರ್ಕ ಹಾಗೂ ಸಂಚಾರ ಮತ್ತಷ್ಟು ಸುಗಮವಾಗಲಿದೆ.

ಇದೇ ಭಾಗದಲ್ಲಿ ಮುಂದಿನ ದಿನಗಳಲ್ಲಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಇನ್ನೂ ನಾಲ್ಕು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ. ಸೇತುವೆ ಪುನರ್‌ನಿರ್ಮಾಣ, ಕಾಲುಸಂಕ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳು ಇದರಲ್ಲಿ ಒಳಗೊಂಡಿವೆ ಎಂದು ಸಚಿವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಹಚ್ಚೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಕರವಳ್ಳಿ ಗ್ರಾಮದ ಎಸ್‌ಸಿ ಕೇರಿಯಿಂದ ಚಂದ್ರಗುತ್ತಿ ಲೋಕೋಪಯೋಗಿ ರಸ್ತೆವರೆಗೆ ಸುಮಾರು ₹80 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಮಾಡುವ ಕಾಮಗಾರಿಗೂ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.

ಶಿಕಾರಿಪುರದಲ್ಲಿ 'ಭಾರತ್ ಜೊಡೋ' ಪಾದಯಾತ್ರೆ

ರಾಹುಲ್ ಗಾಂಧಿ ಅವರಿಂದ ನಡೆದ ʻಭಾರತ್ ಜೋಡೋʼ ಪಾದಯಾತ್ರೆ ನಾಲ್ಕು ವರ್ಷವಾಗಿದೆ. ಅಂದು ಯಾತ್ರೆ ಕರ್ನಾಟಕಕ್ಕೆ ಕಾಲಿಟ್ಟಿತ್ತು. ಅದರ ಹಿನ್ನೆಲೆಯಲ್ಲಿ ದ್ವೇಷದ ರಾಜಕೀಯಕ್ಕೆ ಸೆಡ್ಡು ಹೊಡೆಯಲು ಇದೇ ಸೆಪ್ಟೆಂಬರ್ 30ರಂದು ಶಿಕಾರಿಪುರದಲ್ಲಿ ರಾಜ್ಯಮಟ್ಟದ 'ಭಾರತ್ ಜೋಡೋ 2.0' ಪಾದಯಾತ್ರೆ ಆಯೋಜಿಸಲಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಪಾದಯಾತ್ರೆಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ಈ ಪಾದಯಾತ್ರೆ ನಡೆಸಲಾಗುತ್ತಿದೆ. ಕಿಟ್ಟದಹಳ್ಳಿಯಿಂದ ಪಾದಯಾತ್ರೆ ಆರಂಭವಾಗಲಿದ್ದು, ಶಿಕಾರಿಪುರದಲ್ಲಿ ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ. ಕೆಪಿಸಿಸಿಯ ಅಧ್ಯಕ್ಷ ಶ್ರೀ ಬಿ.ಕೆ. ಹರಿಪ್ರಸಾದ್‌ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಸಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+